ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಆಗಿದೆ. ಚುನಾವಣಾ ಪ್ರಚಾರದ ತಲೆ ಬಿಸಿ ಮಗಿಸಿ ಇನ್ನು ಫಲಿತಾಂಶಕ್ಕಾಗಿ ಕಾಯುವ ಸರದಿ. ಫಲಿತಾಂಶ ಪ್ರಕಟವಾಗುವ ಹಿಂದಿನ ದಿನ ಸಿಎಂ ಯಡಿಯೂರಪ್ಪ ಅವರು ಧರ್ಮಸ್ಥಳ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಮಂಗಳೂರು(ಡಿ.06): ಉಪಚುನಾವಣೆ ಮುಗಿದು ಫಲಿತಾಂಶಕ್ಕೆ ಒಂದು ದಿನ ಇರುವಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಡಿ.8ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಮರುದಿನ ಮತ ಎಣಿಕೆ ನಡೆಯಲಿದ್ದು, ರಾಜ್ಯ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರ ದೇವಸ್ಥಾನ ಭೇಟಿಗೆ ಮಹತ್ವ ಬಂದಿದೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಲವೇ ದಿನಗಳಲ್ಲಿ ಯಡಿಯೂರಪ್ಪ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಬೆಳ್ತಂಗಡಿ ತಾಲೂಕಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ದುರಂತ ವೀಕ್ಷಣೆಗೆ ಆಗಮಿಸಿದ ವೇಳೆ ಸಿಎಂ ಯಡಿಯೂರಪ್ಪ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿ, ಶ್ರೀಮಂಜುನಾಥ ಸ್ವಾಮಿ ಹಾಗೂ ಪರಿವಾರ ದೈವ, ದೇವರ ದರ್ಶನ ಪಡೆದು ಸೇವೆ ಸಲ್ಲಿಸಿದ್ದರು.
ಬಾಬರಿ ಮಸೀದಿ ಧ್ವಂಸ: ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ
ಈ ಬಾರಿ ಸಾಗರದಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1.45ಕ್ಕೆ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡ್‌ಗೆ ಆಗಮಿಸುವ ಸಿಎಂ ಯಡಿಯೂರಪ್ಪ ಅವರು ನೇರವಾಗಿ ದೇವಸ್ಥಾನಕ್ಕೆ ತೆರಳುವರು. ದೇವರ ದರ್ಶನ ನೆರವೇರಿದ ಬಳಿಕ ಭೋಜನ ಸ್ವೀಕರಿಸುವರು. ಮಧ್ಯಾಹ್ನ 2.25ಕ್ಕೆ ಉಜಿರೆ ಕ್ರೀಡಾಂಗಣದಲ್ಲಿ ಬೆಳ್ತಂಗಡಿ ಕ್ಷೇತ್ರದ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಬಳಿಕ ಹೆಲಿಕಾಪ್ಟರ್ ಮೂಲಕ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮಂಗಳೂರಿನಲ್ಲಿ ನೇಣು ಕಂಬಕ್ಕೇರಿದ ಈರುಳ್ಳಿ..!