ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ, ಪರಿಶೀಲನೆ: ಡಿಸಿ ಕೂರ್ಮಾರಾವ್ | ಸಕಲ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ|ಯಾದಗಿರಿ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು| ಸಂಜೆ 5 ಗಂಟೆಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸುವರು| ರಾತ್ರಿ 7 ಗಂಟೆಗೆ ಯಾದಗಿರಿ ತಾಲ್ಲೂಕಿನ ಸುಕ್ಷೇತ್ರ ಅಬ್ಬೆತು ಮಕೂರಿನ ಪೂಜ್ಯ ಸದ್ಗುರು ವಿಶ್ವಾರಾಧ್ಯ ಸಿದ್ಧ ಸಂಸ್ಥಾನಕ್ಕೆ ಭೇಟಿ ನೀಡುವರು| ರಾತ್ರಿ 10.30 ಕ್ಕೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು|
ಯಾದಗಿರಿ[ಅ.4]: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅ.5ರಂದು ಮ.2.30ಕ್ಕೆ ಯಾದಗಿರಿ ಜಿಲ್ಲೆಗೆ ಆಗಮಿಸಿ, ಪ್ರವಾಹದಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯಾದಗಿರಿ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸಂಜೆ 5 ಗಂಟೆಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸುವರು. ರಾತ್ರಿ 7 ಗಂಟೆಗೆ ಯಾದಗಿರಿ ತಾಲ್ಲೂಕಿನ ಸುಕ್ಷೇತ್ರ ಅಬ್ಬೆತು ಮಕೂರಿನ ಪೂಜ್ಯ ಸದ್ಗುರು ವಿಶ್ವಾರಾಧ್ಯ ಸಿದ್ಧ ಸಂಸ್ಥಾನಕ್ಕೆ ಭೇಟಿ ನೀಡುವರು. ರಾತ್ರಿ 10.30 ಕ್ಕೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮಾಹಿತಿ ನೀಡಿದರು.
ಎಸ್ಪಿ ಋಷಿಕೇಶ ಭಗವಾನ್ ಸೋನವಣೆ ಮಾತನಾಡಿ, ಮುಖ್ಯಮಂತ್ರಿ ಗಳ ಪ್ರವಾಸ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 5 ಡಿಎಸ್‌ಪಿ, 14 ಸಿಪಿಐ, 38 ಪಿಎ ಸ್‌ಐ, 82ಎಎಸ್‌ಐ, 665 ಹೆಡ್‌ಕಾನ್‌ಸ್ಟೆಬಲ್ ಮತ್ತು ಪೊಲೀಸ್ ಕಾನ್ ಸ್ಟೆಬಲ್, 382 ಗೃಹರಕ್ಷಕ ದಳ ಸಿಬ್ಬಂದಿ ಹಾಗೂ ಡಿಎ ಆರ್ ಕೆಎಸ್‌ಆರ್‌ಪಿ ತುಕ ಡಿಗಳನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.
26.16 ಕೋಟಿ ಹಾನಿ:
ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಮನೆಗಳ ಹಾನಿ, ಬೆಳೆ, ರಸ್ತೆ, ವಿದ್ಯುತ್ ಹಾನಿಹಾಗೂ ಖಾಸಗಿ ಆಸ್ತಿಪಾಸ್ತಿಗಳು ಸೇರಿದಂತೆಅಂದಾಜು ಒಟ್ಟು 190 ಕೋಟಿ ರೂ. ಮೊತ್ತದ ನಷ್ಟ ಉಂಟಾಗಿದೆ. ಎನ್‌ಡಿಆರ್‌ಎಫ್ ಮತ್ತು ಎನ್ ಸಿಆರ್‌ಎಫ್ ಮಾರ್ಗಸೂಚಿ ಅನ್ವಯ ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಅಂದಾಜು 26.16 ಕೋಟಿ ರು. ಗಳ ಮೊತ್ತದ ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ. ಕೂರ್ಮಾರಾವ್ ಅವರು
ತಿಳಿಸಿದರು.
ಜಿಲ್ಲೆಯಲ್ಲಿ ಪ್ರವಾಹದ ನೀರು ನುಗ್ಗಿದ ಒಟ್ಟು 442 ಮನೆಗಳಿಗೆ ಪ್ರತಿ ಮನೆಗೆ 10000 ರೂ.ಗಳಂತೆ ಒಟ್ಟು 44.20 ಲಕ್ಷ ರು.ಗಳ ಪರಿಹಾರ ವಿತರಿಸಲಾಗಿದೆ. ಪ್ರವಾಹ ಪೀಡಿತ ಗ್ರಾಮಗಳಲ್ಲಿನ ಒಟ್ಟು 100 ಮನೆಗಳಿಗೆ ಪ್ರವಾಹದ ನೀರು ನುಗ್ಗಿ ಅಲ್ಪಸ್ವಲ್ಪ ಹಾನಿಯಾಗಿದ್ದು, ಒಟ್ಟು 25 ಲಕ್ಷ ರೂ.ಗಳ ಪರಿಹಾರ ಧನವನ್ನು ವಿತರಣೆ ಮಾಡಲಾಗಿದೆ. ಪ್ರವಾಹದಿಂದಾಗಿ ಅಂದಾಜು ಒಟ್ಟು 10153 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಈ ಪೈಕಿ ಪರಿಹಾರ ತಂತ್ರಾಂಶದಲ್ಲಿ 6913 ಹೆಕ್ಟೇರ್ (ಶೇ.68 ಪ್ರತಿಶತ) ಡಾಟಾ ಎಂಟ್ರಿ ಆಗಿದ್ದು, ಬಾಕಿ ಎಂಟ್ರಿ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.
25 ಕೋಟಿ ರು.ಗಳ ಹಿಂಗಾರು ಪರಿಹಾರ:
2018-19 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಉಂಟಾದ ಬೆಳೆಹಾನಿಗೆ 25 ಕೋಟಿ ರು. ಪರಿಹಾರ ಬಂದಿದೆ. ಅಂದಾಜು ಒಟ್ಟು 29098 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಈ ಪೈಕಿ ಬರ ಪರಿಹಾರ ತಂತ್ರಾಂಶದಲ್ಲಿ 14212 ಹೆಕ್ಟೇರ್ (ಶೇ.49 ಪ್ರತಿಶತ) ಡಾಟಾ ಎಂಟ್ರಿ ಆಗಿರುತ್ತದೆ. ಬಾಕಿ ಎಂಟ್ರಿ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು. ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ. ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್. ಸೋಮನಾಳ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ರಾಯಚೂರಿನಲ್ಲಿ ಕಾರ್ಯಾಗಾರ
ಕೇಂದ್ರ ಸರ್ಕಾರದ ನೀತಿ ಆಯೋಗವು ಆರೋಗ್ಯ, ಶಿಕ್ಷಣ, ಕೃಷಿ, ಮೂಲ ಸೌಕರ್ಯ ಸೇರಿದಂತೆ ವಿವಿಧ ಮಾನದಂಡಗಳನ್ನು ಇಟ್ಟುಕೊಂಡು ಗುರುತಿಸಿದ ದೇಶದ ಹಿಂದುಳಿದ 115 ಜಿಲ್ಲೆಗಳಲ್ಲಿ ರಾಜ್ಯದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಆಯ್ಕೆಯಾಗಿವೆ. ಈ ಎಲ್ಲಾ ಜಿಲ್ಲೆಗಳು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಗಾಗಿ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶ್ರಮಿ ಸುತ್ತಿವೆ. ಈ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆಗಳಾದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಅಭಿವೃದ್ಧಿ ಮತ್ತು ಇತರೆ ಕಾರ್ಯಗಳ ಕುರಿತಂತೆ 2 ದಿನಗಳ ಕಾರ್ಯಾಗಾರವನ್ನು ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಕ ಕೂರ್ಮಾರಾವ್ ತಿಳಿಸಿದರು.