ವಿಜಯಪುರ: ಯುಕೆಪಿ ಸಂತ್ರಸ್ತ ರೈತರಿಗೆ ಸಿಎಂ ಪರಿಹಾರ ವಿತರಣೆ ಇಂದು

Published : Mar 09, 2023, 02:00 AM IST
ವಿಜಯಪುರ:  ಯುಕೆಪಿ ಸಂತ್ರಸ್ತ ರೈತರಿಗೆ ಸಿಎಂ ಪರಿಹಾರ ವಿತರಣೆ ಇಂದು

ಸಾರಾಂಶ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಗ್ರಾಮದ ಕೃಷ್ಣಾನಗರ ಸಿಬಿಎಸ್‌ಇ ಸ್ಕೂಲ್‌ನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪರಿಹಾರ ವಿತರಣೆ ಮಾಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. 

ವಿಜಯಪುರ(ಮಾ.09):  ಜಲಸಂಪನ್ಮೂಲ ಇಲಾಖೆ, ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತದ ಸಹಯೋಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಭೂಮಿಯನ್ನು ಕಳೆದುಕೊಂಡ ರೈತರಿಗೆ ಮಾ.9ರಂದು ಪರಿಹಾರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 11ಕ್ಕೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಗ್ರಾಮದ ಕೃಷ್ಣಾನಗರ ಸಿಬಿಎಸ್‌ಇ ಸ್ಕೂಲ್‌ನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಹಾರ ವಿತರಣೆ ಮಾಡಲಿದ್ದಾರೆ.

ರೈತರ ಸ್ವಾವಲಂಬನೆಗೆ ಬಿಜೆಪಿ ಸರ್ಕಾರ ಬದ್ಧ: ಈರಣ್ಣ ಕಡಾಡಿ

ಬಬಲೇಶ್ವರ ಕ್ಷೇತ್ರದ ಶಾಸಕ ಡಾ.ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರೂ ಆದ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ಪ್ರಕಾಶ ರಾಠೋಡ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಹನಮಂತ ನಿರಾಣಿ, ಸೋಮನಗೌಡ ಪಾಟೀಲ ಸಾಸನೂರ, ಡಾ.ದೇವಾನಂದ ಚವ್ಹಾಣ, ಸುನೀಲಗೌಡ ಪಾಟೀಲ, ರಮೇಶ ಭೂಸನೂರ, ಪಿ.ಎಚ್‌.ಪೂಜಾರ, ಪ್ರಕಾಶ ಹುಕ್ಕೇರಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಹೊಸೂರ ಗ್ರಾಪಂ ಅಧ್ಯಕ್ಷ ಶ್ರೀಕಾಂತ ಶಿಂN ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

PREV
Read more Articles on
click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!