ಸಿಎಂ ಡಿಸಿಎಂ ಗೈರು ಬೆನ್ನಲೆ ವಿಧಾನಸೌಧದಿಂದ ರಾಜ್ಯ ಚುನಾವಣಾ ಆಯೋಗ ಕಚೇರಿಗೆ ಶಿಫ್ಟ್ ಆದ ಜಿಬಿಎ ಎಲೆಕ್ಷನ್ ಸಭೆ

Published : May 08, 2026, 11:59 AM IST
Greater Bengaluru

ಸಾರಾಂಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ನಗರ ಪಾಲಿಕೆಗಳ ಚುನಾವಣಾ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರುಹಾಜರಾಗಿದ್ದಾರೆ. ಜೂನ್‌ನಲ್ಲಿ ಚುನಾವಣೆ ನಡೆಸಲು ಆಯೋಗ ಪಟ್ಟುಹಿಡಿದರೆ, ಸರ್ಕಾರ ಸೆಪ್ಟೆಂಬರ್‌ವರೆಗೆ ಕಾಲಾವಕಾಶ ಕೇಳಿದೆ. ನಾಯಕರ ಅನುಪಸ್ಥಿತಿಯ ನಡುವೆಯೂ ಅಧಿಕಾರಿಗಳು ಸಭೆಯನ್ನು ಮುಂದುವರಿಸಿದ್ದಾರೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಮಹತ್ವದ ಸಭೆ ಇಂದು ನಡೆಯಬೇಕಾಗಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರು ಹಾಜರಾತಿಯಿಂದ ಸಭೆಯಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ. ಜೂನ್‌ನಲ್ಲಿ ನಡೆಸಬೇಕೆಂದು ಆಯೋಗ ಪಟ್ಟು ಹಿಡಿದಿದೆ. ರಾಜ್ಯ ಸರ್ಕಾರ ಮಾತ್ರ ಸೆಪ್ಟೆಂಬರ್ ತನಕ ಕಾಲಾವಕಾಶ ಕೇಳಿದೆ. ರಾಜ್ಯ ಚುನಾವಣಾ ಆಯೋಗ ಕರೆದಿದ್ದ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಬೇಕಾಗಿತ್ತು. ಆದರೆ, ಇಬ್ಬರು ನಾಯಕರು ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಸಭೆಗೆ ಗೈರಾಗಿದ್ದಾರೆ. ರಾಜ್ಯ ಚುನಾವಣಾ ಆಯುಕ್ತ ಜಿ.ಎ ಸಂಗ್ರೇಶಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಕೂಡ ಅಭೆಯಲ್ಲಿ ಭಾಗವಹಿಸಿದ್ದಾರೆ.

ವಿಧಾನಸೌಧದಿಂದ ಆಯೋಗ ಕಚೇರಿಗೆ ಸಭೆ ಸ್ಥಳಾಂತರ

ಮೊದಲು ವಿಧಾನಸೌಧದಲ್ಲಿ ನಡೆಯಬೇಕಿದ್ದ ಈ ಸಭೆಯನ್ನು ನಂತರ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಸ್ಥಳಾಂತರಿಸಲಾಗಿದೆ. ಸಿಎಂ ಮತ್ತು ಡಿಸಿಎಂ ಗೈರಾಗಿದ್ದರೂ, ಅಧಿಕಾರಿಗಳು ಸಭೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಕೂಡ ಭಾಗವಹಿಸುತ್ತಿದ್ದಾರೆ. ಜಿಬಿಎ ಚುನಾವಣೆ ಕುರಿತ ಸಿದ್ಧತೆಗಳು, ವೇಳಾಪಟ್ಟಿ ಹಾಗೂ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸಿಎಂ-ಡಿಸಿಎಂ ಪರವಾಗಿ ಮುಖ್ಯ ಆಯುಕ್ತರ ಹಾಜರಾತಿ

ಸಭೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹಾಜರಾಗದ ಹಿನ್ನೆಲೆಯಲ್ಲಿ, ಅವರ ಪರವಾಗಿ ಜಿಬಿಎ ಮುಖ್ಯ ಆಯುಕ್ತರು ಭಾಗವಹಿಸಿದ್ದಾರೆ. ಸಭೆಗೆ ಹಾಜರಾಗುವಂತೆ ಆಯೋಗದಿಂದ ಸಿಎಂ, ಡಿಸಿಎಂ ಸೇರಿದಂತೆ ಜಿಬಿಎ ಸದಸ್ಯರಿಗೆ ಆಹ್ವಾನ ನೀಡಲಾಗಿತ್ತು. ಆದರೂ ಪ್ರಮುಖ ರಾಜಕೀಯ ನಾಯಕರ ಗೈರು ಗಮನಾರ್ಹವಾಗಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಕುರಿತಾಗಿ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಚುನಾವಣಾ ದಿನಾಂಕ ನಿಗದಿ ವಿಚಾರ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದಿರುವ ಸಭೆ ರಾಜಕೀಯವಾಗಿ ಕೂಡ ಪ್ರಾಮುಖ್ಯತೆ ಪಡೆದುಕೊಂಡಿದೆ.

ಒಟ್ಟಿನಲ್ಲಿ, ಸಿಎಂ ಮತ್ತು ಡಿಸಿಎಂ ಗೈರಾಗಿದ್ದರೂ ಅಧಿಕಾರಿಗಳು ಸಭೆಯನ್ನು ಮುಂದುವರಿಸಿರುವುದು ಚುನಾವಣಾ ಪ್ರಕ್ರಿಯೆಗೆ ವೇಗ ನೀಡುವ ಪ್ರಯತ್ನವೆಂದು ವಿಶ್ಲೇಷಿಸಲಾಗುತ್ತಿದೆ.

PREV
Read more Articles on
click me!

Recommended Stories

International Yoga Day 2026: ಇಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯೋಗ, ಸಾರ್ವಜನಿಕರಿಗೂ ಮುಕ್ತ ಅವಕಾಶ!
BK Hariprasad: ಕೆಪಿಸಿಸಿ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಇಂದು ಪದಗ್ರಹಣ, 2028-29ಕ್ಕೆ ಕಾಂಗ್ರೆಸ್‌ ಮಾಡಿದ ಆ ಸಂಕಲ್ಪವೇನು ಗೊತ್ತಾ?