ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್ ಅಕ್ರಮ ತನಿಖೆಯನ್ನು ಸಿಓಡಿಗೆ ವಹಿಸಿದ ಸಿಎಂ ಸಿದ್ದರಾಮಯ್ಯ

By Sathish Kumar KH  |  First Published Feb 8, 2024, 2:34 PM IST

ಉಡುಪಿ ಜಿಲ್ಲೆಯ ಕಾರ್ಕಳದ ಬಳಿ ನಿರ್ಮಾಣವಾಗಿರುವ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ನಿರ್ಮಾಣ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಅವರು ಸಿಓಡಿ ತನಿಖೆಗೆ ವಹಿಸಿದ್ದಾರೆ.


ಉಡುಪಿ (ಫೆ.08): ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ನಿರ್ಮಾಣವಾಗಿರು ಪರಶುರಾಮ ಥೀಮ್‌ ಪಾರ್ಕ್‌ ಅನ್ನು ಅಕ್ರಮವಾಗಿ ಕಾಮಗಾರಿ ಮಾಡಲಾಗಿದೆ ಎಂಬ ಆರೋಪದ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಸಿಓಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆ ಕಾರ್ಕಳದ ಎರ್ಲಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗಿತ್ತು. ಇನ್ನು ಥೀಮ್ ಪೊಆರ್ಕ್‌ ನಿರ್ಮಾಣದಲ್ಲಿ ಭಾರಿ ದೊಡ್ಡಮಟ್ಟದ ಅವ್ಯವಹಾರ ನಡೆದಿದೆ ಎಂಬ ಆರೋಪ ಮಾಡಲಾಗಿತ್ತು. ಇನ್ನು ಪರಶೂರಾಮ ಥೀಮ್ ಪಾರ್ಕ್‌ ಅನ್ನು ಗೋಮಾಳದ ಜಾಗದಲ್ಲಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಆದ್ದರಿಂದ ಈ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಅವರು ಸಿಓಡಿಗೆ ಒಪ್ಪಿಸಿದ್ದಾರೆ. 

Tap to resize

Latest Videos

undefined

ಮುಸ್ಲಿಂ ಗುರುಗಳನ್ನು ಬಿಡುಗಡೆ ಮಾಡಿ, ಜ್ಞಾನವ್ಯಾಪಿ ಮಸೀದಿಗೆ ತೊಂದರೆ ಮಾಡಬೇಡಿ; ಮುಸ್ಲಿಮರ ಪ್ರತಿಭಟನೆ

ಪರಶುರಾಮ ಥೀಮ್ ಪಾರ್ಕಿನಲ್ಲಿ ಅಳವಡಿಸಿದ್ದ ಪರಶುರಾಮ ದೇವರ ಮೂರ್ತಿ ನಕಲಿ ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪದ ಬೆನ್ನಲ್ಲಿಯೇ ನಿರ್ಮಿತಿ ಕೇಂದ್ರದಿಂದ ಥೀಮ್‌ ಪಾರ್ಕ್‌ನಲ್ಲಿದ್ದ ಮೂರ್ತಿಯನ್ನು ತೆರವು ಮಾಡಲಾಗಿತ್ತು. ಸದ್ಯಕ್ಕೆ ಥೀಮ್ ಪಾರ್ಕ್ ನಲ್ಲಿ ಪರಶುರಾಮರ ಅರ್ಧ ಮೂರ್ತಿ ಮಾತ್ರ ಇದೆ. ಮಾಜಿ ಸಚಿವ ಸುನಿಲ್ ಕುಮಾರ್ ಮಾರ್ಗದರ್ಶನದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗಿತ್ತು. ಆದರೆ, ಕಾಮಗಾರಿ ಉದ್ಘಾಟನೆ ವೇಳೆ ಹಗರಣ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.

ಇನ್ನು ಪರಶುರಾ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯ ಬಗ್ಗೆ ಸೂಕ್ತ ತನಿಖೆಯ ಅಗತ್ಯವಿದೆ. ಕೂಡಲೇ ಇದನ್ನು ವಿಶೇಷ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರಿಂದ ಭಾರಿ ಒತ್ತಡ ವ್ಯಕ್ತವಾಗಿತ್ತು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದ ಕೈ ಕಾರ್ಯಕರ್ತರು, ಪರಶುರಾಮ ಪಾರ್ಕ್‌ ನಿರ್ಮಾಣದ ತನಿಖೆಯನ್ನು ವಿಶೇಷ ತನಿಖಾ ಸಂಸ್ಥೆಗೆ ವಹಿಸುವವರೆಗೂ ನಾವು ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಅಭಿಯಾನ ಆರಂಭಿಸಿದ್ದರು. ಇನ್ನು ಕಾರ್ಯಕರ್ತರ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಓಡಿ ತನಿಖೆಗೆ ವಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲೂ ಶೇ.40 ಕಮಿಷನ್ ಕಂಟಿನ್ಯೂ ಆಗಿದೆ; ಆಗ ಶಾಸಕರು ಕೇಳ್ತಿದ್ರು, ಈಗ ಅಧಿಕಾರಿಗಳೇ ಕೇಳ್ತಾರೆ!

click me!