Chamarajanagar: ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ, ಸಿಎಂ ಶಾಕಿಂಗ್‌ ಹೇಳಿಕೆ!

By Santosh Naik  |  First Published Dec 7, 2024, 3:46 PM IST

ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಜೀವನದ ಅಂತಿಮ ಘಟ್ಟದಲ್ಲಿದ್ದೇನೆ ಎಂದು ಹೇಳಿದ್ದಾರೆ. ಜನರ ಪ್ರೀತಿ, ಅಭಿಮಾನ ಗಳಿಸದೇ ಇದ್ದರೆ ರಾಜಕೀಯದಲ್ಲಿ ಉಳಿಗಾಲ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಚಾಮರಾಜನಗರಕ್ಕೆ 20ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದು, ಅಧಿಕಾರ ಕಳೆದುಕೊಂಡಿಲ್ಲ ಎಂದಿದ್ದಾರೆ.



ಚಾಮರಾಜಗರ (ಡಿ.7): ಸತ್ತೇಗಾಲದಲ್ಲಿ ಸರ್ಕಾರಿ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ, ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಸರ್ಕಾರಿ ಶಾಲೆಯ ಉದ್ಘಾಟನೆ ಮಾಡಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ನಾನೀಗ ರಾಜಕೀಯ ಜೀವನದ ಕೊನೆಗಾಲದಲ್ಲಿದ್ದೇನೆ ಎಂದು ಹೇಳಿದ್ದಾರೆ. ಜನರ ಪ್ರೀತಿ ಅಭಿಮಾನ ಗಳಿಸದೇ ಇದ್ದರೆ, ರಾಜಕೀಯದಲ್ಲಿ ಉಳಿಗಾಲ ಸಾಧ್ಯವಿಲ್ಲ ಎಂದು ವೇದಿಕೆ ಭಾಷಣದಲ್ಲಿಯೇ ಅವರು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ನಾನು ಅತ್ಯಂತ ಉತ್ಸಾಹದಿಂದ ನಾನು ಶಾಲೆಯನ್ನ ಉದ್ಘಾಟನೆ ಮಾಡಿದ್ದೇನೆ. ಜಾನಪದ ಕಲೆಗಳ ತವರೂರು ಹಾಗೂ ದಕ್ಷಿಣದ ಗಡಿ ಈ ಚಾಮರಾಜನಗರ ಎಂದು ಹೇಳಿದ ಸಿಎಂ, ತಮ್ಮ ಹಳೆ ಗುರುಗಳಾದ ಬಿ.ರಾಚಯ್ಯ ಅವರನ್ನು ವೇದಿಕೆಯ ಮೇಲೆ ನೆನಪಿಸಿಕೊಂಡರು.

ಮೈಸೂರಿನ ಅವಿಭಾಜ್ಯ ಈ ಚಾಮರಾಜನಗರ ಜಿಲ್ಲೆ. ಜೆ.ಹೆಚ್ ಪಟೇಲರಿಗೆ ಚಾಮರಾಜನಗರಕ್ಕೆ ಹೋದ್ರೆ ಅಧಿಕಾರ ಕಳೆದುಕೊಳ್ಳುತ್ತೀರ ಅಂತ ಆಗಿನ ಕೆಲ ಶಾಸಕರು ಹೇಳಿದ್ದರು. ಪಾಪ ಆಗಿನಿಂದ ಆ ಕಳಂಕ ಚಾಮರಾಜನಗರ ಮೇಲಿದೆ. ನಾನು ಎರೆಡು ಬಾರಿ ಮುಖ್ಯಮಂತ್ರಿಯಾಗಿ ಚಾಮರಾಜನಗರಕ್ಕೆ ಬಂದಿದ್ದೇನೆ. ಈ ಮೂಡ ನಂಭಿಕೆಯನ್ನ ರಾಚಯ್ಯ ಅವರೂ ನಂಬಲಿಲ್ಲ ನಾನು ನಂಬಲಿಲ್ಲ. ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಘೋಷಣೆ ಮಾಡಿದ್ದೆವು. ಆಗ ನಾನು ಉಪ ಮುಖ್ಯಮಂತ್ರಿ ಆಗಿದ್ದೆ ಎಂದು ಹೇಳಿದ್ದಾರೆ.

ನಾವು ಚಾಮರಾಜನಗರಕ್ಕೆ ಬಂದು ಜಿಲ್ಲೆಯನ್ನ ಘೋಷಣೆ ಮಾಡಿದ್ದೆವು. ನಾನು ಏನಿಲ್ಲ ಅಂದರೂ 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ.ನನ್ನ ಸಿಎಂ ಕುರ್ಚಿ ಗಟ್ಟಿಯಾಗದೆಯೇ ಹೊರತು, ಅಧಿಕಾರ ಕಳೆದುಕೊಂಡಿಲ್ಲ' ಎಂದು ಹೇಳಿದ್ದಾರೆ.

Tap to resize

Latest Videos

Breaking: ಕರ್ನಾಟಕಕ್ಕೆ ಮೋದಿ ಸರ್ಕಾರ ಗುಡ್‌ ನ್ಯೂಸ್‌, ಮೂರು ಹೊಸ ಕೇಂದ್ರೀಯ ವಿದ್ಯಾಲಯಗಳಿಗೆ ಒಪ್ಪಿಗೆ

ಚಾಮರಾಜನಗರದ ಕೊಳ್ಳೆಗಾಲದ ಸತ್ತೇಗಾಲದಲ್ಲಿ ಹಳೇ ವಿದ್ಯಾರ್ಥಿಗಳೇ ಸೇರಿ 2 ಕೋಟಿ ವೆಚ್ಚದಲ್ಲಿ ಸರ್ಕಾರಿ ಶಾಲೆಯನ್ನು ನಿರ್ಮಿಸಿಕೊಟ್ಟಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಮರಿಸ್ವಾಮಿ ಸೇರಿದಂತೆ ಶಾಲೆಯ ಹಳೇ ವಿದ್ಯಾರ್ಥಿಗಳು ಚಂದಾ ಹಾಕಿ ಶಾಲೆಯನ್ನು ನಿರ್ಮಾಣ ಮಾಡಿದ್ದಾರೆ. ಶಾಲಾ ಕಟ್ಟಡ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಬರುತ್ತಿದ್ದಂತೆ ಸಿಳ್ಳೆ, ಚಪ್ಪಾಳೆ, ಕರತಾಡನದೊಂದಿಗೆ ಸ್ವಾಗತಿಸಲಾಗಿತ್ತು.

Dhruv Jatti-Amogha Shettar: ಕೋಟಿ ಕೋಟಿ ಇದ್ದರೂ ಮಾಜಿ ಸಿಎಂ ಕುಟುಂಬದ ನಡುವೆ 'ವಚನ ಮಾಂಗಲ್ಯ'ಬಂಧ!

click me!