Davanagere: ರಾಗಿ ಖರೀದಿ ಹಣ ಬಿಡುಗಡೆ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ

Published : Sep 02, 2023, 11:21 PM IST
Davanagere: ರಾಗಿ ಖರೀದಿ ಹಣ ಬಿಡುಗಡೆ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ

ಸಾರಾಂಶ

ದಾವಣಗೆರೆ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಹಣವನ್ನು ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ರಾಗಿ ಖರೀದಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. 

ದಾವಣಗೆರೆ (ಸೆ.02): ದಾವಣಗೆರೆ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಹಣವನ್ನು ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ರಾಗಿ ಖರೀದಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ನೇತೃತ್ವದಲ್ಲಿ ತೆರಳಿದ್ದ ದಾವಣಗೆರೆ ಮತ್ತು ಜಗಳೂರಿನ ತಾಲೂಕಿನ ರೈತ ಮುಖಂಡರು, ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿದ್ದ ರಾಗಿಯ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ, ಮೊದಲೇ ಈ ಬಾರಿ ಮುಂಗಾರು ಮಳೆ ಇಲ್ಲದೆ ಬೆಳೆಗಳು ಒಣಗಿ ರೈತರು ತತ್ತರಿಸಿ ಹೋಗಿದ್ದಾರೆ. ಅಲ್ಲದೇ, ಕಳೆದ ವರ್ಷ ಬೆಳೆದ ರಾಗಿಯನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಿದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ಇತ್ತ ರಾಗಿ ಮಾರಾಟ ಮಾಡಿದ ಹಣ ಇಲ್ಲದೆ, ಅತ್ತ ಈ ವರ್ಷ ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆ ಹಾನಿಯಾಗಿ ಸಾಲಗಾರರಾಗಿರುವ ರೈತರು ದಿಕ್ಕು ತೋಚದಂತಾಗಿದೆ. ಕೂಡಲೇ ಬಾಕಿ ಹಣ ಬಿಡುಗಡೆ ಮಾಡುವಂತೆ ಶಾಸಕರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ಕಾವೇರಿ ಹೋರಾಟಕ್ಕೆ ಧುಮುಕದ ಕನ್ನಡ ಚಿತ್ರರಂಗ: ರೈತರ ಆಕ್ರೋಶ

ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಸಂಬಂಧಪಟ್ಟ ರಾಗಿ ಖರೀದಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಸಂಪರ್ಕ ಪಡೆದು ರಾಗಿ ಮಾರಾಟ ಮಾಡಿದ ದಾವಣಗೆರೆ ಜಿಲ್ಲೆಯ ರೈತರ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಖರೀದಿ ಕೇಂದ್ರಕ್ಕೆರಾಗಿ ಮಾರಾಟ ಮಾಡಿದ ರೈತ ಫಲಾನುಭವಿಗಳು ಹಾಜರಿದ್ದರು.

ಈಡೇರದ ಸಂವಿಧಾನ ಆಶಯ: ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಭವಿಷ್ಯ ಹಾಳು ಮಾಡಿಕೊಳ್ಳಬೇಡಿ, ಅವರ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ. ಇಲ್ಲದಿದ್ದರೆ ಸಾಮಾಜಿಕ ನ್ಯಾಯ ನೆಗೆದು ಬೀಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ನಗರದ ಪುರಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಜಯಂತ್ಯುತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಬೊಂಬೆನಾಡಲ್ಲಿ ಹೆಚ್ಚಿದ ಕಳ್ಳರ ಹಾವಳಿ: ಖದೀಮರ ಹಾಟ್‌ಸ್ಪಾಟ್‌ ಆದ ಚನ್ನಪಟ್ಟಣ

ಅಂಬೇಡ್ಕರ್‌ ರಚಿತ ಸಂವಿಧಾನದ ಆಶಯಗಳು ಸಂಪೂರ್ಣ ಈಡೇರಿಲ್ಲ. ಶ್ರಮಿಕ ಶೂದ್ರ ವರ್ಗ ಶ್ರಮಿಕರಲ್ಲದ ಸೇವೆ ಮಾಡಿಕೊಂಡಿರಬೇಕಿತ್ತು. ಇದನ್ನು ದೇವರಾಜ ಅರಸರು ಜೀತ ವಿಮುಕ್ತಿ, ಋುಣಮುಕ್ತ ಕಾರ್ಯಕ್ರಮಗಳ ಮೂಲಕ ತಪ್ಪಿಸಿದರು. ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್‌ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ ಎಂದರು. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮತ್ತು ದಸಂಸ ಮುಖಂಡ ಡಿ.ಜಿ.ಸಾಗರ್‌ ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!