ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಇನ್ನು ಅನೇಕ ಕಾರ್ಯಕ್ರಮದ ಕುರಿತು ಶ್ರೇಯಾಂಕ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಳು. ಈ ಬಾರಿಯೂ ಉತ್ತಮ ಆಡಳಿತ ನಡೆಸಲು ಮನವಿ ಮಾಡಿಕೊಂಡಿದ್ದ ವಿದ್ಯಾರ್ಥಿನಿ ಶ್ರೇಯಾಂಕ.
ಕೊಪ್ಪಳ(ಜೂ.28): ವಿದ್ಯಾರ್ಥಿನಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ಶ್ರೇಯಾಂಕ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಶ್ರೇಯಾಂಕ ಬರೆದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮರಳಿ ಪತ್ರ ಬರೆದಿದ್ದಾರೆ.
undefined
ಕೊಪ್ಪಳ ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ ಶ್ರೇಯಾಂಕ ರಾಜ್ಯದ ಮತ್ತೊಮ್ಮೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿ ಹಾಗೂ ಅವರ ಸಾಮಾಜಿಕ ಕಾಳಜಿಯ ಬಗ್ಗೆ ಪತ್ರ ಬರೆದಿದ್ದಳು.
ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಇನ್ನು ಅನೇಕ ಕಾರ್ಯಕ್ರಮದ ಕುರಿತು ಶ್ರೇಯಾಂಕ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಳು. ಈ ಬಾರಿಯೂ ಉತ್ತಮ ಆಡಳಿತ ನಡೆಸಲು ವಿದ್ಯಾರ್ಥಿನಿ ಶ್ರೇಯಾಂಕ ಮನವಿ ಮಾಡಿಕೊಂಡಿದ್ದಳು.
ಆರು ಮಂದಿ ಬಲಿಕೊಟ್ಟರೂ ಎಚ್ಚೆತ್ತುಕೊಳ್ಳದ ಸರ್ಕಾರ: ಮತ್ತೆ ಕಲುಷಿತ ನೀರು ಸೇವನೆಯಿಂದ 54 ಮಂದಿಗೆ ವಾಂತಿ, ಬೇಧಿ
ವಿದ್ಯಾರ್ಥಿನಿ ಶ್ರೇಯಾಂಕಳಿಗೆ ಸಿಎಂ ಸಿದ್ದರಾಮಯ್ಯ ಮರಳಿ ಪತ್ರ ಬರೆದಿದ್ದಾರೆ. ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾತೃಗಳು. 8 ನೇ ತರಗತಿ ಓದುತ್ತಿರುವ ನೀನು, ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು, ಈ ಎಳೆಯ ವಯಸ್ಸಿನಲ್ಲಿ ಬಡವರು, ದೀನ ದಲಿತರು, ರೈತರು ಬಗೆಗಿನ ನಿನ್ನ ಕಾಳಜಿ ಬೆರಗು ಮೂಡಿಸುವಥದ್ದು, ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗು ಎಂದು ಹಾರೈಸುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.