ತುಳುವಿಗೆ 2ನೇ ಭಾಷೆ ಮಾನ್ಯತೆಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

Published : Jan 12, 2025, 11:27 AM ISTUpdated : Jan 12, 2025, 11:28 AM IST
ತುಳುವಿಗೆ 2ನೇ ಭಾಷೆ ಮಾನ್ಯತೆಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಕಂಬಳ ಉಳಿಸಿ ಬೆಳೆಸುವ ಪ್ರಯತ್ನದ ಭಾಗವಾಗಿ ಪ್ರತಿ ಕಂಬಳಕ್ಕೂ ತಲಾ 5 ಲಕ್ಷ ರು. ಅನುದಾನವನ್ನು ನಮ್ಮ ಸರ್ಕಾರ ನೀಡಿದೆ. ಬೆಂಗಳೂರು ನಗರದೊಳಗೆ ಸರ್ಕಾರದ 1.5 ಕೋಟಿ ರು. ಅನುದಾನದೊಂದಿಗೆ ಕಂಬಳ ಆಯೋಜನೆ ಮಾಡಲಾಗಿದೆ: ಮುಖ್ಯಮಂತ್ರಿ  ಸಿದ್ದರಾಮಯ್ಯ

ಮಂಗಳೂರು(ಜ.12): ತುಳುವನ್ನು ರಾಜ್ಯದ ಎರಡನೇ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ನೇತೃತ್ವದಲ್ಲಿ, ನರಿಂಗಾನ ಕಂಬಳ ಸಮಿತಿ ವತಿಯಿಂದ ಮೂರನೇ ವರ್ಷದ ನರಿಂಗಾನ ಕಂಬಳೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸ್ಪೀಕರ್‌ ಯು.ಟಿ. ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಗೆ ಮಾನ್ಯತೆ ನೀಡುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು. 

ಕನ್ನಡ ಕಲಿಯುತ್ತೇನೆ, ಡಿವೋರ್ಸ್ ರಗಳೆ ನಡುವೆ ಐಶ್ವರ್ಯಾ ಕಲಿಸಿದ ತುಳು ಮಾತನಾಡಿದ ಅಭಿಷೇಕ್ ವಿಡಿಯೋ ವೈರಲ್!

ಕಂಬಳ ಉಳಿಸಿ ಬೆಳೆಸುವ ಪ್ರಯತ್ನದ ಭಾಗವಾಗಿ ಪ್ರತಿ ಕಂಬಳಕ್ಕೂ ತಲಾ 5 ಲಕ್ಷ ರು. ಅನುದಾನವನ್ನು ನಮ್ಮ ಸರ್ಕಾರ ನೀಡಿದೆ. ಬೆಂಗಳೂರು ನಗರದೊಳಗೆ ಸರ್ಕಾರದ 1.5 ಕೋಟಿ ರು. ಅನುದಾನದೊಂದಿಗೆ ಕಂಬಳ ಆಯೋಜನೆ ಮಾಡಲಾಗಿದೆ ಎಂದು ಸಿಎಂ ಹೇಳಿದರು. 

ಸುಪ್ರೀಂ ಕೋರ್ಟ್ ಈ ಹಿಂದೆ ಕಂಬಳವನ್ನು ನಿಷೇಧಿಸಿತ್ತು. ಇದನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿದ್ದರಿಂದ ಕಂಬಳ ಮತ್ತೆ ನಡೆಯುವಂತಾಗಿದೆ. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದು ಸಿದ್ದರಾಮಯ್ಯ ಹೇಳಿದರು. 

ಕರ್ನಾಟಕ ವಿಧಾನಸಭೆ ಸ್ಪೀಕ‌ರ್‌ ಯು.ಟಿ.ಖಾದರ್ ಮಾತನಾಡಿ, ಉಳ್ಳಾಲ ಕ್ಷೇತ್ರಕ್ಕೆ ಇಷ್ಟು ಚಿಕ್ಕ ಅವಧಿಯಲ್ಲಿ ಒಂದು ಸಾವಿರ ಕೋಟಿ ರುಪಾಯಿಗೂ ಅಧಿಕ ಅನುದಾನವನ್ನು ಸರ್ಕಾರ ನೀಡಿದ್ದು, ಈ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದೆ. ಕೇವಲ ರಸ್ತೆ ಅಭಿವೃದ್ಧಿಗಾಗಿ ಪ್ರತಿ ಗ್ರಾಮಕ್ಕೆ ಒಂದೂವರೆ ಕೋಟಿ ರೂಪಾಯಿಗಳಷ್ಟು ಅನುದಾನ ದೊರೆತಿದೆ ಎಂದು ಹೇಳಿದರು. 

ಸದನದಲ್ಲಿ ತುಳುವಿನಲ್ಲಿ ಸುನಿಲ್‌-ಖಾದರ್‌ ಚರ್ಚೆ, ಯಾವ ಭಾಷೆ ಕನ್ನಡದಲ್ಲಿ ಮಾತಾಡಿ ಎಂದಿದ್ದಕ್ಕೆ ಸ್ವೀಕರ್ ಉತ್ತರವಿದು

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ಅಶೋಕ್ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ನಸೀರ್ ಅಹಮದ್, ಮಾಜಿ ಸಚಿವ ರಮಾನಾಥ ರೈ, ಪ್ರಮುಖರಾದ ಕಣಚೂರು ಮೋನು, ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಪ್ರಶಾಂತ್ ಕಾಜವ, ಶಾಹುಲ್ ಹಮೀದ್, ಆರ್.ಪದ್ಮರಾಜ್, ಶಕುಂತಳಾ ಶೆಟ್ಟಿ, ಮತ್ತಿತರರಿದ್ದರು. ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ನೇತೃತ್ವದಲ್ಲಿ ಮಹಿಳೆಯರು ಆರತಿ ಬೆಳಗಿ ಸಿಎಂ ಅವರನ್ನು ಬರಮಾಡಿಕೊಂಡರು. ಹುಲಿವೇಷ ಕುಣಿತವನ್ನು ಸಿಎಂ ವೀಕ್ಷಿಸಿದರು. ವೇದಿಕೆಯಲ್ಲಿ ತುಳುನಾಡಿನ ಶೈಲಿಯ ಪೇಟಾವನ್ನು ಸಿಎಂಗೆ ಕಟ್ಟಲಾಯಿತು. ನರಿಂಗಾನ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ ಸ್ವಾಗತಿಸಿದರು.

ಖಾದರ್ ಸ್ಪೀಕರ್ ಆಗಲು ಒಪ್ಪಿರಲಿಲ್ಲ: ಸಿದ್ದರಾಮಯ್ಯ

ಯು.ಟಿ. ಖಾದರ್‌ ಅವರು ವಿಧಾನಸಭೆ ಸ್ಪೀಕರ್ ಆಗಲು ಆರಂಭದಲ್ಲಿ ಒಪ್ಪಿರಲಿಲ್ಲ. ಆದರೆ ಹೈಕಮಾಂಡ್‌ನವರು ಖಾದರ್‌ಅವರೇ ಈ ಹುದ್ದೆಗೆ ಯೋಗ್ಯ ವ್ಯಕ್ತಿ ಎನ್ನುವ ತೀರ್ಮಾನ ಮಾಡಿದ್ದರು. ಈ ವಿಚಾರವನ್ನು ನಾನು ಖಾದರ್‌ ಅವರಲ್ಲಿ ಹೇಳಿದಾಗ ತನ್ನನ್ನು ಮಂತ್ರಿ ಮಾಡಿ. ಈ ಹುದ್ದೆ ಬೇಡ ಎಂದಿದ್ದರು. ಈಗ ಪೋಟೋಕಾಲ್ ಪ್ರಕಾರ ಮುಖ್ಯಮಂತ್ರಿಯಾದ ನನಗಿಂತ ಖಾದರ್ ಅವರ ಹುದ್ದೆ ದೊಡ್ಡದಾಗಿದೆ. ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಯು.ಟಿ.ಖಾದ‌ರ್ ಅವರು ಸೀಕ‌ರ್‌ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ 1000 ಕೋಟಿಯಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅವರಿಗೆ ಅಷ್ಟೊಂದು ಪ್ರೀತಿ ಇದೆ ಎಂದರು.

PREV
Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ