ಜನ ಕೇಳಿದರೆ ವರುಣ ತಾಲೂಕು ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

Published : Jun 11, 2023, 12:00 AM IST
ಜನ ಕೇಳಿದರೆ ವರುಣ ತಾಲೂಕು ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ನಾನು ಚುನಾವಣಾ ಪ್ರಚಾರಕ್ಕೆ ಹೋದಾಗ ಜನ ಯಾರೂ ಕೂಡ ವರುಣವನ್ನು ತಾಲೂಕು ಕೇಂದ್ರ ಮಾಡಿ ಎಂದು ಕೇಳಲಿಲ್ಲ. ಇದನ್ನು ಬಿಜೆಪಿಯ ಬೊಮ್ಮಾಯಿ ಹೇಳಿದ್ದು. ಜನ ಕೇಳಿದರೆ ಮಾಡುತ್ತೇವೆ. ಬೊಮ್ಮಾಯಿ ಹೇಳಿದರೆ ಕೇಳುವುದಿಲ್ಲ: ಸಿದ್ದರಾಮಯ್ಯ

ಮೈಸೂರು(ಜೂ.11): ಜನ ಕೇಳಿದರೆ ಮಾತ್ರ ವರುಣವನ್ನು ತಾಲೂಕು ಕೇಂದ್ರವಾಗಿ ಮಾಡುತ್ತೇವೆ. ಬೊಮ್ಮಾಯಿ ಕೇಳಿದ್ದಕ್ಕೆಲ್ಲ ಮಾಡಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ವರುಣ ಕ್ಷೇತ್ರಕ್ಕೆ ಆಗಮಿಸಿದ ಅವರು ಸುತ್ತೂರು ಹ್ಯಾಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ನಂಜನಗೂಡಲ್ಲಿ ಮಾತನಾಡಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯನವರು ಇಷ್ಟು ವರ್ಷ ವರುಣವನ್ನು ಪ್ರತಿನಿಧಿಸಿದ್ದಾರೆ. ಆದರೆ, ಈವರೆಗೂ ವರುಣವನ್ನು ತಾಲೂಕು ಮಾಡಲು ಅವರಿಂದ ಆಗಲಿಲ್ಲ ಎಂದು ಟೀಕಿಸಿದ್ದರು. 

ಬೆಂಗಳೂರು ಉಪನಗರ ರೈಲು ಯೋಜನೆ ಮೈಸೂರು, ಕೋಲಾರಕ್ಕೂ ವಿಸ್ತರಣೆ: ಸಚಿವ ಎಂ.ಬಿ.ಪಾಟೀಲ್

ಶನಿವಾರ ಈ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ‘ನಾನು ಚುನಾವಣಾ ಪ್ರಚಾರಕ್ಕೆ ಹೋದಾಗ ಜನ ಯಾರೂ ಕೂಡ ವರುಣವನ್ನು ತಾಲೂಕು ಕೇಂದ್ರ ಮಾಡಿ ಎಂದು ಕೇಳಲಿಲ್ಲ. ಇದನ್ನು ಬಿಜೆಪಿಯ ಬೊಮ್ಮಾಯಿ ಹೇಳಿದ್ದು. ಜನ ಕೇಳಿದರೆ ಮಾಡುತ್ತೇವೆ. ಬೊಮ್ಮಾಯಿ ಹೇಳಿದರೆ ಕೇಳುವುದಿಲ್ಲ’ ಎಂದರು.

PREV
Read more Articles on
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!