ದಾವಣಗೆರೆ (ಜೂ.01): ಸದ್ಯ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಿ ಎಸ್ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಸ್ಪಷ್ಟಪಡಿಸಿದರು.
ಹೊನ್ನಾಳಿ ತಾಲೂಕಿನ ಅಬರಘಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಲು ಸೋಮವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ 2 ವರ್ಷವೂ ಬಿಎಸ್‌ವೈ ಸಿಎಂ ಆಗಿ ಮುಂದುವರಿಯುತ್ತಾರೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದರು.
ಸಚಿವರು ಬರ್ತಾರೆಂದು ಚಿಕಿತ್ಸೆಗೆಂದು ಬಂದ ವೃದ್ದನನ್ನು ಆಸ್ಪತ್ರೆಯಿಂದ ಹೊರ ಹಾಕಿದ ಪೊಲೀಸರು ...
ಮುಖ್ಯಮಂತ್ರಿ ಯಡಿಯೂರಪ್ಪನವರ ಸಾರಥ್ಯದಲ್ಲೆ ಮುಂದಿನ ಚುನಾವಣೆ ಸಹ ನಡೆಯಲಿದೆ. ಯಡಿಯೂರಪ್ಪ ಇಲಿವಯಸ್ಸಲ್ಲು 18 ಗಂಟೆ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದ್ದು, ಮುಮದಿನ ದಿನಗಳಲ್ಲಿ ಜನ ಜಿವನ ಸಹಜ ಸ್ಥಿತಿಗೆ ಮರಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಕೆ ವಿಚಾರದಲ್ಲಿ ತಜ್ಞರ ಸಮಿತಿ ಅಭಿಪ್ರಾಯದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಿನ ಪರಿಸ್ಥಿತಿಯನ್ನು ನೋಡಿದರೆ ಕೊರೊನಾ ಸೋಂಕು ಸಾವು ನೋವಿನ ಪ್ರಕರಣ ನಿಯಂತ್ರಿಸಲು ಇನ್ನೂ ಒಂದು ವಾರ ಬೇಕಾಗಲಿದೆ ಎಂದು ಹೇಳಿದರು.
ಅಲ್ಲದೇ ಇದೇ ವೇಳೆ ಸಿ.ಪಿ ಯೋಗೇಶ್ವರ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನಿಡುವುದಿಲ್ಲ ಸದ್ಯ ಬೇರಾವುದೇ ಯೋಚನೆ ಇಲ್ಲ ಎಂದರು.