ಮೈಸೂರು: ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

Published : Feb 17, 2023, 08:02 AM IST
ಮೈಸೂರು: ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಸಾರಾಂಶ

ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನಲ್ಲಿ ನಡೆದ ಘಟನೆ. 

ಮೈಸೂರು(ಫೆ.17):  ಕಾಲೇಜು ವಿದ್ಯಾರ್ಥಿನಿಯೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನಲ್ಲಿ ನಡೆದಿದೆ. ನಮಿತಾ (16) ಮೃತ ವಿದ್ಯಾರ್ಥಿನಿ.

ಮೃತ ವಿದ್ಯಾರ್ಥಿನಿ ನಮಿತಾ ವಿದ್ಯೋದಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕಾಲೇಜಿನಲ್ಲಿ ನಡೆಯುತ್ತಿದ್ದ ಡ್ಯಾನ್ಸ್ ಕಾರ್ಯಕ್ರಮದಲ್ಲಿ ನಮಿತಾ ಭಾಗಿಯಾಗಿದ್ದಳು. ಬಳಿಕ ಏಕಾಏಕಿ ಕಾಲೇಜಿನಲ್ಲಿಯೇ ಪ್ರಜ್ಞೆತಪ್ಪಿ ನಮಿತಾ ಬಿದ್ದಿದ್ದಳು. 

ಬೆಡ್‌ರೂಂನಲ್ಲಿ ಮಲಗಿದ್ದ 19 ವರ್ಷದ ವಿದ್ಯಾರ್ಥಿನಿ ಸಜೀವ ದಹನ: ಕಾರಣ ನಿಗೂಢ..!

ತಕ್ಷಣ ಕಾಲೇಜು ಸಿಬ್ಬಂದಿ ತಿ. ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿದ್ದರು. ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆದಲ್ಲೇ ನಮಿತಾ ಕೊನೆಯುಸಿರೆಳೆದಿದ್ದಾಳೆ. 

ವಿದ್ಯಾರ್ಥಿನಿ ಸಾವಿನ ಪ್ರಕರಣ ಮುಚ್ಚಿ ಹಾಕಲು ಕಾಲೇಜು ಆಡಳಿತ ಮಂಡಳಿ ಹಾಗೂ ಆಸ್ಪತ್ರೆ ಸಿಬ್ಬಂದಿ ಯತ್ನಿಸಿದ್ರಾ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಇದಕ್ಕೆಲ್ಲ ಪೊಲೀಸರು ತನಿಖೆಯಿಂದಷ್ಟೇ ನಿಖರವಾದ ಕಾರಣ ತಿಳಿದು ಬರಬೇಕಿದೆ. 

PREV
Read more Articles on
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ