ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಕಾಲೇಜು ವಿದ್ಯಾರ್ಥಿನಿ ನಿರ್ದೇಶಕಿ!

Published : Jan 23, 2025, 10:14 AM IST
ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಕಾಲೇಜು ವಿದ್ಯಾರ್ಥಿನಿ ನಿರ್ದೇಶಕಿ!

ಸಾರಾಂಶ

ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಸ್ವಾತಿ ರೈ, ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಬ್ಯಾಂಕ್‌ಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ.

ಉಪ್ಪಿನಂಗಡಿ(ಜ.23):  ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ ಆಡಳಿತ ನಿರ್ದೇಶಕಿಯಾಗಿ ಕಡಬ ಗ್ರಾಮದ ಅರ್ತಿಲದ ಸುಬ್ರಹ್ಮಣ್ಯ ಕೆ‌.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ.

ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಸ್ವಾತಿ ರೈ, ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಬ್ಯಾಂಕ್‌ಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ. ಕಡಬ ಗ್ರಾಮದ ಅರ್ತಿಲ ದಿ. ಆನಂದ ರೈ ಮತ್ತು ತಾರಾ ರೈ ದಂಪತಿ ಪುತ್ರಿ ಸ್ವಾತಿ ರೈಗೆ ಈ ಅವಕಾಶ ಅಚಾನಕ್ ಆಗಿ ಬಂದಿದೆ. ಈ ಅವಕಾಶ ಮೊದಲಿಗೆ ತಾಯಿ ತಾರಾ ರೈ ಅವರಿಗೆ ಬಂದಿತ್ತು. ಆದರೆ ಅವರು ತಮ್ಮದೇ ಆದ ಕಾರಣ ನೀಡಿ ಅವಕಾಶವನ್ನು ನಿರಾಕರಿಸಿದ್ದರು. ಸ್ವಾತಿಯ ದೊಡ್ಡಪ್ಪನ ಮಗ, ಹಿಂದೂ ಸಂಘಟನೆಯ ಮುಖಂಡ ಅಜಿತ್ ರೈ ಪ್ರೋತ್ಸಾಹಿಸಿದರು.

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್

ಮೊದಲಿಗೆ ಕಾಲೇಜಿನ ಓದಿಗೆ ತೊಂದರೆ ಆಗುತ್ತದೆ ಎಂದಿದ್ದ ಸ್ವಾತಿ ರೈ ಕೊನೆಗೆ ಅವಕಾಶ ಸದುಪಯೋಗ ಮಾಡಿಕೊಳ್ಳಲು ಒಪ್ಪಿಕೊಂಡರು. ಇದೀಗ ಬ್ಯಾಂಕ್‌ನ ಆಡಳಿತ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ವಾತಿ ರೈ, ಓದಿಗೆ ತೊಂದರೆಯಾದಿತು ಎಂದು ಮೊದಲಿಗೆ ನನಗೆ ಇದೆಲ್ಲಾ ಬೇಡ ಅಂದಿದ್ದೆ. ಮನೆಯವರ ಪ್ರೋತ್ಸಾಹ ಸಿಕ್ಕಿತ್ತು. ಬಳಿಕ ಎಲ್ಲ ರೀತಿಯಲ್ಲೂ ಯೋಚಿಸಿ ಅವಕಾಶ ಬಳಸಿಕೊಳ್ಳು ಗಟ್ಟಿ ನಿರ್ಧಾರ ಮಾಡಿಕೊಂಡೆ. ಸಾಧ್ಯವಾದಷ್ಟು ರೈತರಿಗೆ ಸಹಾಯ ಮಾಡುವ ಅವಕಾಶ ಬಂದಿದೆ ಎಂದುಕೊಂಡು ಒಪ್ಪಿಗೆ ಕೊಟ್ಟೆ, ಆಯ್ಕೆಯಾಗಿದೆ. . ತುಂಬಾ ಖುಷಿಯಾಗಿದೆ ಎನ್ನುತ್ತಾರೆ.

PREV
Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!