ಅಥಣಿ: ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರ ದುರ್ಮರಣ

Kannadaprabha News   | Asianet News
Published : Mar 13, 2020, 09:27 AM IST
ಅಥಣಿ: ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರ ದುರ್ಮರಣ

ಸಾರಾಂಶ

ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ| ಇಬ್ಬರ ಸಾವು, ಒಬ್ಬರಿಗೆ ಗಾಯ| ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದೂರ ಗ್ರಾಮದ ಹತ್ತಿರ ಜತ್ತ-ಜಾಂಬೋಟ ರಾಜ್ಯ ಹೆದ್ದಾರಿಯಲ್ಲಿ ನಡೆದ ಘಟನೆ| 

ಅಥಣಿ(ಮಾ.13): ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ತೀವ್ರ ಗಾಯಗೊಂಡ ಘಟನೆ ತಾಲೂಕಿನ ದೂರ ಗ್ರಾಮದ ಹತ್ತಿರ ಜತ್ತ-ಜಾಂಬೋಟ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ. 

ಅಥಣಿ ಪಟ್ಟಣದ ನಿವಾಸಿಗಳಾದ ದಿಲೀಪ ಅಪ್ಪಾಸಾಬ ಬುರುಡ(38), ಸಲೀಂ ಎ. ನದಾಫ್ (23) ಮೃತಪಟ್ಟವರಾಗಿದ್ದಾರೆ. ಗಾಯಗೊಂಡ ರಾಜೇಂ ದ್ರ ಸೇಗಣಿ ಎಂಬಾತನನ್ನು ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಘಟನಾ ಸ್ಥಳಕ್ಕೆ ಅಥಣಿ ಸಿಪಿಐ ಶಂಕರಗೌಡ ಬಸನಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಥಣಿ ಠಾಣೆಯಲ್ಲಿ ದೂರು ದಾಖಲಾಗಿದೆ.
 

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು