ಜಿಲ್ಲೆಯ ಗಡಿಯಲ್ಲಿರುವ ಬಾಗೇಪಲ್ಲಿ ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನದ ಅಗತ್ಯವಿದೆ. ಎಚ್ಎನ್ ವ್ಯಾಲಿ 3ನೇ ಹಂತದ ಯೋಜನೆ ಬಾಗೇಪಲ್ಲಿಗೆ ಸಂಪರ್ಕ ಕಲ್ಪಿಸಲಾಗುತ್ತದೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ/ಬಾಗೇಪಲ್ಲಿ (ಡಿ.03): ಜಿಲ್ಲೆಯ ಗಡಿಯಲ್ಲಿರುವ ಬಾಗೇಪಲ್ಲಿ ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನದ ಅಗತ್ಯವಿದೆ. ಎಚ್ಎನ್ ವ್ಯಾಲಿ 3ನೇ ಹಂತದ ಯೋಜನೆ ಬಾಗೇಪಲ್ಲಿಗೆ ಸಂಪರ್ಕ ಕಲ್ಪಿಸಲಾಗುತ್ತದೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿದಿಂ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾದರೆ, ಒಂದು ಬ್ಯಾಂಕ್ ತೆರೆದಂತೆ. ಮಹಿಳೆಯರು ಆರ್ಥಿಕವಾಗಿ ಸಬಲೀಕಣ ಆಗಬೇಕು ಎಂದು ಎಲ್ಲ ಸಮಾಜ ಸುಧಾರಕರೂ ಹೇಳಿದ್ದಾರೆ ಎಂದರು.
ಎತ್ತಿನಹೊಳೆ ನೀರು ಬಾಗೇಪಲ್ಲಿಗೆ: ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರು ಕಲ್ಪಿಸಲು ರೂಪಿಸಿರುವ ಎತ್ತಿನಹೊಳೆ ಯೋಜನೆಗೆ ಅಗತ್ಯವಿರುವ ಅನುದಾನದ ಮೊತ್ತವನ್ನು 23 ಸಾವಿರ ಕೋಟಿಗೆ ಏರಿಕೆ ಮಾಡಲಾಗಿದೆ. ಮುಂದಿನ 2ವಾರಗಳಲ್ಲಿ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಎತ್ತಿನಹೊಳೆ ಯೋಜನೆಯ ಅನುದಾನವನ್ನು 23 ಸಾವಿರ ಕೋಟಿಗೆ ಹೆಚ್ಚಿಸಿ ಅನುಮೋದನೆ ಪಡೆಯಲಾಗುವುದು. ಚುನಾವಣೆಗೂ ಮುನ್ನವೇ ಶ್ರೀನಿವಾಸಪುರದವರೆಗೂ ಪೈಪ್ ಲೈನ್, ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಕೆಲಸಗಳಿಗೆ ಈ ಅನುದಾನ ಬಳಕೆ ಮಾಡಲಾಗುವುದು. ಎತ್ತಿನಹೊಳೆ ನೀರು ಈ ಭಾಗಕ್ಕೆ ಬಂದ ನಂತರ ಈ ಭಾಗದ ನೀರಿನ ಬವಣೆ ಶಾಶ್ವತವಾಗಿ ಪರಿಹಾರವಾಗಲಿದೆಂದರು.
625 ಗ್ರಾಮಗಳಲ್ಲಿ ಉಲ್ಬಣಿಸಿದ ರೋಗ: ಮುಂದವರೆದ ಜಾನುವಾರು ಸಂತೆ ನಿಷೇಧ
ಮಹಿಳೆಯರಿಗೆ ಬಡ್ಡಿರಹಿತ ಸಾಲ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಈ ಹಿಂದೆ ಡಿಸಿಸಿ ಬ್ಯಾಂಕ್ ಸಂಪೂರ್ಣವಾಗಿ ದಿವಾಳಿಯಾಗಿತ್ತು. ಆದರೆ ಬಾಲ್ಯಹಳ್ಳಿ ಗೋವಿಂದಗೌಡ ರವರು ಅಧ್ಯಕ್ಷರಾದ ನಂತರ ಮತ್ತೆ ಡಿಸಿಸಿ ಬ್ಯಾಂಕ್‌ಗೆ ಮರುಜೀವ ಬಂದಿದೆ. ಮಹಿಳೆಯರು ಸ್ವಾವಲಬಿಬಿ ಜೀವನ ನಡೆಸಲು ಡಿಸಿಸಿ ಬ್ಯಾಂಕ್‌ವತಿಯಿಂದ ನೀಡುತ್ತಿರುವ ಬಡ್ಡರಹಿತ ಸಾಲ ಒಂದು ದಾರಿ ದೀಪವಾಗಿದೆ. ಮಹಿಳೆಯರು ಮತ್ತು ರೈತರು ಪಡೆದಿರುವ ಸಾಲವನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ದಿಹೊಂದಬೇಕೆಂದ ಅವರು ಅವಶ್ಯಕತೆ ಇದ್ದಾಗ ಮಾತ್ರ ಸಾಲ ಮಾಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ, ನಿರ್ದೇಶಕ ವೆಂಕಟಶಿವಾರೆಡ್ಡಿ, ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
Chikkaballapur: ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
41 ಕೋಟಿ ಸಾಲ ವಿತರಣೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಲಕ್ಷಾಂತರ ಮಹಿಳೆಯರಿಗೆ ಡಿಸಿಸಿ ಬ್ಯಾಂಕ್ ಆರ್ಥಿಕ ಸಹಾಯ ಮಾಡುತ್ತಿದೆ. ಸುಮಾರು 25 ಕೋಟಿಯನ್ನು 510 ಸ್ತ್ರೀ ಶಕ್ತಿ ಸಂಘಗಳಿಗೆ ವಿತರಿಸಲಾಗುತ್ತಿದೆ. ಸುಮಾರು 16 ಕೋಟಿಯನ್ನು 1,325 ರೈತರಿಗೆ ಬೆಳೆ ಸಾಲವಾಗಿ ನೀಡಲಾಗುತ್ತಿದೆ. ಎರಡೂ ಸೇರಿ ಒಟ್ಟು 41 ಕೋಟಿ ಸಾಲವನ್ನು ಒಂದೇ ದಿನ ವಿತರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.