ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹ

By Kannadaprabha News  |  First Published Mar 5, 2023, 5:29 AM IST

ಲಂಚ ಸ್ವೀಕರಿಸುವ ವೇಳೆ ದಾಖಲೆ ಸಮೇತ ಲೋಕಾಯುಕ್ತರಿಗೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಸಿಕ್ಕಿಬಿದ್ದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಹಾಗೂ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಗರ ಮತ್ತು ಜಿಲ್ಲಾ ಕಾಂಗ್ರಸ್‌ ಸಮಿತಿಯವರು ನಗರದ ಗಾಂಧಿ ಚೌಕದಲ್ಲಿ ಶನಿವಾರ ಪ್ರತಿಭಟಿಸಿದರು.


 ಮೈಸೂರು :  ಲಂಚ ಸ್ವೀಕರಿಸುವ ವೇಳೆ ದಾಖಲೆ ಸಮೇತ ಲೋಕಾಯುಕ್ತರಿಗೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಸಿಕ್ಕಿಬಿದ್ದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಹಾಗೂ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಗರ ಮತ್ತು ಜಿಲ್ಲಾ ಕಾಂಗ್ರಸ್‌ ಸಮಿತಿಯವರು ನಗರದ ಗಾಂಧಿ ಚೌಕದಲ್ಲಿ ಶನಿವಾರ ಪ್ರತಿಭಟಿಸಿದರು.

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವುದನ್ನು ದಾಖಲೆ ಸಹಿತ ಲೋಕಾಯುಕ್ತರು ಪತ್ತೆ ಮಾಡಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಬಿಜೆಪಿಯ ಎಲ್ಲಾ ಸಚಿವರು, ಶಾಸಕರ ಆಸ್ತಿಯನ್ನು ಪರಿಶೀಲಿಸಲು ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಅವರು ತಿಳಿಸಿದರು.

Latest Videos

undefined

ಇದೇ ವೇಳೆ ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಈ ಹಿಂದೆ ಗುತ್ತಿಗೆದಾರರ ಸಂಘದ ಕೆಂಪಣ್ಣ 40 ಪರ್ಸೆಂಟ್‌ ವಸೂಲಿ ಆರೋಪಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾಖಲೆ ಕೊಡಿ ಎಂದು ಸವಾಲೆಸೆದಿದ್ದರು. ಈಗ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಲೋಕಾಯುಕ್ತರು ಎಲ್ಲವನ್ನೂ ದಾಖಲೆ ಸಹಿತ ಬಹಿರಂಗ ಪಡಿಸಿದ್ದಾರೆ ಎಂದು ತಿರುಗೇಟು ನೀಡಿದರು.

ಹುಣಸೂರು ಕ್ಷೇತ್ರದ ಶಾಸಕ ಎಚ್‌.ಪಿ. ಮಂಜುನಾಥ್‌ ಮಾತನಾಡಿ, ಬಿಜೆಪಿ ಸರ್ಕಾರದ ಅಧಿಕಾರಸ್ಥರ ಒಂದೊಂದೇ ಲಂಚಗುಳಿತನ ಬಹಿರಂಗವಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿ , ಚುನಾವಣೆ ಎದುರಸಲಿ ಎಂದು ಸವಾಲು ಹಾಕಿದರು.

ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್‌, ವಾಸು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್‌ಕುಮಾರ್‌, ನಗರಾಧ್ಯಕ್ಷ ಆರ್‌. ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ, ಜಿ.ವಿ. ಸೀತಾರಾಮು, ಮಾಜಿ ಮೇಯರ್‌ಗಳಾದ ಅಯೂಬ್‌ ಖಾನ್‌, ಪುಷ್ಪಲತಾ ಚಿಕ್ಕಣ್ಣ, ಬಿ.ಕೆ. ಪ್ರಕಾಶ್‌, ಮೋದಾಮಣಿ, ಮುಖಂಡರಾದ ಕೆ. ಹರೀಶ್‌ಗೌಡ, ಪ್ರದೀಪ್‌ಕುಮಾರ್‌, ಡಿ. ನಾಗಭೂಷಣ್‌, ಬಿ.ಎಂ. ರಾಮು, ಡಾ. ಸುಜಾತ ರಾವ್‌, ಸುನಂದಕುಮಾರ್‌, ಶಿವಮಲ್ಲು, ಪುಷ್ಪವಲ್ಲಿ ಮೊದಲಾದವರು ಇದ್ದರು.

ಬಿಜೆಪಿ ಸರ್ಕಾರ ಇನ್ನೊಂದು ಬಾರಿ ರಾಜ್ಯವನ್ನಾಳಿದರೆ ಲೂಟಿ ಹೊಡೆದು, ಗುಡಿಸಿ ಗುಂಡಾಂತರ ಮಾಡುತ್ತಾರೆ. ಹಣ ಲೂಟಿ ಹೊಡೆಯುವುದರಲ್ಲೇ ಮಗ್ನರಾಗಿರುವ ಸರ್ಕಾರ ಒಂದೇ ಒಂದು ಜನಪರ ಕೆಲಸ ಮಾಡಿಲ್ಲ.

- ಡಾ. ಯತೀಂದ್ರ ಸಿದ್ದರಾಮಯ್ಯ, ವರುಣ ಕ್ಷೇತ್ರದ ಶಾಸಕರು

click me!