ನಗರದಲ್ಲಿ ನಿರ್ಮಾಣವಾಗುತ್ತಿರುವ ಕನಕ ಭವನ ನಿರ್ಮಾಣಕ್ಕೆ ಸರ್ಕಾರದಿಂದ 30 ಲಕ್ಷ ರು. ಅನುದಾನ ಹಾಗೂ ವೈಯಕ್ತಿಕವಾಗಿ 25 ಲಕ್ಷ ರು. ದೇಣಿಗೆ ನೀಡುವುದಾಗಿ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜು ತಿಳಿಸಿದರು.
ತಿಪಟೂರು (ಡಿ.05): ನಗರದಲ್ಲಿ ನಿರ್ಮಾಣವಾಗುತ್ತಿರುವ ಕನಕ ಭವನ ನಿರ್ಮಾಣಕ್ಕೆ ಸರ್ಕಾರದಿಂದ 30 ಲಕ್ಷ ರು. ಅನುದಾನ ಹಾಗೂ ವೈಯಕ್ತಿಕವಾಗಿ 25 ಲಕ್ಷ ರು. ದೇಣಿಗೆ ನೀಡುವುದಾಗಿ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜು ತಿಳಿಸಿದರು. ನಗರದ ಬಯಲು ರಂಗಮಂದಿರದಲ್ಲಿ ನಡೆದ ದಾಸಶ್ರೇಷ್ಠ ಕನಕದಾಸರ 535ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಕನಕಭವನ ನಿಧಾನಗತಿಯಲ್ಲಿ ಸಾಗುತ್ತಿದ್ದು ನಿಜಕ್ಕೂ ಬೇಸರವಾಗುತ್ತಿದೆ. ಸಮಾಜದಲ್ಲಿ ಒಗ್ಗಟ್ಟು, ಸಹಕಾರವಿದ್ದರೆ ಮಾತ್ರ ಸಮುದಾಯದ ಏಳಿಗೆ ಸಾಧ್ಯವಿದ್ದು ಆದಷ್ಟುಬೇಗ ಕನಕಭವನ ನಿರ್ಮಾಣಕಾರ್ಯ ಮುಗಿದು ಸಮಾಜಕ್ಕೆ ಅನುಕೂಲವಾಗಲಿದೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಮಾತನಾಡಿ ಕನಕ ಭವನ ನಿರ್ಮಾಣಕ್ಕೆ ಈಗಾಗಲೆ 20ಲಕ್ಷ ರು.ಮಂಜೂರು ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮತ್ತಷ್ಟುಹಣ ಮಂಜೂರು ಮಾಡಲಾಗುವುದು ಎಂದರು. ಕಾಂಗ್ರೆಸ್ ಮುಖಂಡ ಲೋಕೇಶ್ವರ ಮಾತನಾಡಿ, ತಾಲೂಕಿನಲ್ಲಿ ಲಿಂಗಾಯತ ಸಮಾಜವನ್ನು ಬಿಟ್ಟರೆ 2ನೇ ಸ್ಥಾನದಲ್ಲಿ ಕುರುಬ ಸಮಾಜದವರಿದ್ದರೂ ನಗರದಲ್ಲಿ ಕನಕ ಭವನ ನಿರ್ಮಾಣಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದು ಕನಕ ಭವನ ನಿರ್ಮಾಣಕ್ಕೆ 25 ಲಕ್ಷ ಸಾಕಾಗುವುದಿಲ್ಲ. ಸರ್ಕಾರ ಬಜೆಟ್‌ನಲ್ಲಿ 3 ಕೋಟಿ ರು. ಗಳನ್ನು ಮಂಜೂರು ಮಾಡಿ ಶೀಘ್ರದಲ್ಲೇ ಕನಕ ಭವನವನ್ನು ನಿರ್ಮಿಸಿಕೊಟ್ಟು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದರು.
ಗ್ರಾಮೀಣ ಜನರ ಆರೋಗ್ಯ ಕಾಪಾಡಲು ಆರೋಗ್ಯ ಸಚಿವರು ಮುಂದಾಗಲಿ: ಎಚ್‌ಡಿಕೆ
ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್, ನಗರಸಭೆ ಅಧ್ಯಕ್ಷ ರಾಮಮೋಹನ್, ಉಪಾಧ್ಯಕ್ಷ ಸೊಪ್ಪುಗಣೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಕುರುಬ ಸಂಘದ ಜಿಲ್ಲಾಧ್ಯಕ್ಷ ಸುರೇಶ್, ತಾಲೂಕು ಅಧ್ಯಕ್ಷ ಚಂದ್ರೇಗೌಡ, ಸಮಾಜದ ಮುಖಂಡರಾದ ಜಕ್ಕನಹಳ್ಳಿ ಲಿಂಗರಾಜು, ಲೋಕೇಶ್, ತರಕಾರಿ ಗಂಗಾಧರ್, ನಗರಸಭೆ ಸದಸ್ಯರಾದ ಜಯಲಕ್ಷ್ಮೀ, ಲತಾ, ವಿನುತಾತಿಲಕ್ ಪೌರಾಯುಕ್ತ ಉಮಾಕಾಂತ್, ಕುರಿ ಮತ್ತು ಮೇಕೆ ಸಾಕಾಣಿಕೆ ಸಂಘದ ನಿರ್ದೇಶಕ ಲಿಂಗರಾಜು ಮತ್ತಿತರರಿದ್ದರು.
Kalaburagi: ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರ: ಈಶ್ವರ ಖಂಡ್ರೆ
ಕನಕದಾಸರು ಯಾವುದೊ ಒಂದು ಸಮಾಜವನ್ನು ಗಣನೆಗೆ ತೆಗೆದುಕೊಂಡು ಸಂದೇಶ ನೀಡದೆ ಎಲ್ಲಾ ಸಮಾಜಗಳು ಒಟ್ಟಾಗಿರಬೇಕೆಂಬ ದೃಷ್ಟಿಯಿಂದ ದಾಸ ಸಾಹಿತ್ಯದ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಜಾತಿಗಳ ನಡುವೆ ಮೇಲುಕೀಳು ಭಾವನೆಯನ್ನು ತೊಡೆದು ಹಾಕಲು ಅಂದೇ ಹೋರಾಟ ನಡೆಸಿದ್ದರು. ಕನಕದಾಸರಂತಹ ಮಹಾಪುರುಷರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದ್ದು ತಾಲೂಕಿನ ಕನಕ ಭವನ ನಿರ್ಮಾಣಕ್ಕೆ ವೈಯಕ್ತಿಕವಾಗಿ 25 ಲಕ್ಷ ರು. ದೇಣಿಗೆ ನೀಡಲಾಗುವುದು.
-ಎಂ.ಟಿ. ನಾಗರಾಜು ಪೌರಾಡಳಿತ ಸಚಿವ