ಶಿರಾ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ವಿರುದ್ಧ ದೂರು

Kannadaprabha News   | Asianet News
Published : Sep 24, 2020, 12:38 PM ISTUpdated : Sep 24, 2020, 01:11 PM IST
ಶಿರಾ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ವಿರುದ್ಧ ದೂರು

ಸಾರಾಂಶ

ಕಾಂಗ್ರೆಸ್ ಮುಖಂಡ ಹಾಗೂ ಶಿರಾ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ವಿರುದ್ಧ ದೂರು ನೀಡಲಾಗಿದೆ. 

ಶಿರಾ (ಸೆ.24):  ಎಪಿಎಂಸಿ ಅಧ್ಯಕ್ಷರ ಕಚೇರಿಯ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತು ಚುನಾವಣಾ ಘೋಷಣೆ ಆಗದಿದ್ದರೂ ಪ್ರಚಾರ ಮಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ವಿರುದ್ಧ ಚುನಾವಣಾ ಇಲಾಖೇ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಜೆಡಿಯು ಯುವ ಘಟಕದ ಪ್ರಧಾನ ಕಾರ್ಯದರ್ಶಿ ಲಿಂಗದಹಳ್ಳಿ ಚೇತನ್‌ಕುಮಾರ್‌ ತಹಸೀಲ್ದಾರ್‌ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ದೂರು ಸಲ್ಲಿಸಿ ಮಾತನಾಡಿದ ಅವರು ಎಪಿಎಂಸಿ ಅಧ್ಯಕ್ಷರ ಕಚೇರಿಯ ಕುರ್ಚಿಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಜನಪ್ರತಿನಿಧಿಯಲ್ಲದಿದ್ದರೂ ಕುಳಿತುಕೊಂಡು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಉಪಚುನಾವಣೆಯ ಪ್ರಚಾರ ಮಾಡುತ್ತಿದ್ದಾರೆ. 

ಬಿಎಸ್‌ವೈ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಕುಮಾರಸ್ವಾಮಿ....! ...

ಸರಕಾರದ ಯಾವುದೇ ಹುದ್ದೆಯಲ್ಲಿಲ್ಲದ ಅವರು ಎಪಿಎಂಸಿ ಕಚೇರಿಗೆ ತೆರಳಿ ಅಧ್ಯಕ್ಷರ ನಾಮಫಲಕ ತೆಗೆದುಹಾಕಿ ದರ್ಪದಿಂದ ಅಧ್ಯಕ್ಷರ ಕುರ್ಚಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಕುಳಿತು ಕಾನೂನು ಬಾಹಿರ ಕೃತ್ಯ ಎಸಗಿದ್ದಾರೆ.

ಇದರಿಂದ ಸಾಂವಿಧಾನಿಕ ಹುದ್ದೆಗೆ ದಕ್ಕೆ ತರುವಂತಹ ಕೃತ್ಯವೆಸಗಿದ್ದಾರೆ. ಆದ್ದರಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಅವರ ಬೆಂಬಲಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೆಕೆಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

"

PREV
click me!

Recommended Stories

Dharmasthala Case: ನೂರಾರು ಶವ ಹೂತಿರುವ ಆರೋಪ ಧರ್ಮಸ್ಥಳ ಪ್ರಕರಣದಲ್ಲಿ ಸ್ಪೋಟಕ ತಿರುವು
Bengaluru: 75 ಕೋಟಿ ರು. ವೆಚ್ಚದಲ್ಲಿ ಹೊಸ ಹೈ ಪರ್ಫಾರ್ಮೆನ್ಸ್‌ ಸೆಂಟರ್; NIPER ಸ್ಥಾಪನೆಗೆ ಕೇಂದ್ರಕ್ಕೆ ಮನವಿ