ವೀರಸಾವರ್ಕರ್ ರವರು ಬ್ರಾಹ್ಮಣನಾಗಿದ್ದರೂ ಗೋಮಾಂಸವನ್ನು ತಿನ್ನುತ್ತಿದ್ದರು. ಅವರು ಗೋಹತ್ಯೆ ವಿರೋಧಿಸುತ್ತಿರಲಿಲ್ಲ ಎಂದು ಬೇಜವಾಬ್ದಾರಿತನದಿಂದ ಹೇಳಿಕೆ ನೀಡಿದ್ದಾರೆ. ಆರೋಗ್ಯ ಸಚಿವರ ಹೇಳಿಕೆಯಿಂದ ನಮಗೆ ತುಂಬಾ ನೋವುಂಟಾಗಿರುತ್ತದೆ ಎಂದು ಹೇಳಿದ ಹಿಂದೂ ಮುಖಂಡ ತೇಜಸ್ ಗೌಡ
ಬೆಂಗಳೂರು(ಅ.04): ಸಾವರ್ಕರ್ ವಿರುದ್ಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಕ್ಷೇಪಾರ್ಹ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಗುಂಡೂರಾವ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಹಿಂದೂ ಮುಖಂಡ ತೇಜಸ್ ಗೌಡ ಅವರು ಶಂಕರಪುರ ಪೊಲೀಸರಿಗೆ ದೂರು ನೀಡಿದ್ದಾರೆ.
ಗಾಂಧಿ ಜಯಂತಿಯಂದು ಸಚಿವರು ಸಾವರ್ಕರ್ ಬಗ್ಗೆ ಅವಹೇಳನವಾಗಿ ಮಾತಾಡಿದ್ದಾರೆ. ವೀರಸಾವರ್ಕರ್ ರವರು ಬ್ರಾಹ್ಮಣನಾಗಿದ್ದರೂ ಗೋಮಾಂಸವನ್ನು ತಿನ್ನುತ್ತಿದ್ದರು. ಅವರು ಗೋಹತ್ಯೆ ವಿರೋಧಿಸುತ್ತಿರಲಿಲ್ಲ ಎಂದು ಬೇಜವಾಬ್ದಾರಿತನದಿಂದ ಹೇಳಿಕೆ ನೀಡಿದ್ದಾರೆ. ಆರೋಗ್ಯ ಸಚಿವರ ಹೇಳಿಕೆಯಿಂದ ನಮಗೆ ತುಂಬಾ ನೋವುಂಟಾಗಿರುತ್ತದೆ ಎಂದು ಹೇಳಿದ್ದಾರೆ.
ಮಾಧ್ಯಮಗಳು ಸಾವರ್ಕರ್ ಮಾಂಸಹಾರಿ ಎಂಬುದನ್ನ ಮಾತ್ರ ಚರ್ಚೆ ಮಾಡೋದು ಸರಿಯಲ್ಲ: ಸಚಿವ ಗುಂಡೂರಾವ್
ಇದು ಕೋಮು ದ್ವೇಶ, ಕೋಮು ಪ್ರಚೋದನೆಗೆ ಹೆಚ್ಚು ಒತ್ತಡ ತರುವಂತಹ ಅಂಶ ಹೊಂದಿದೆ. ಆದ್ದರಿಂದ ಪರಿಶೀಲಿಸಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ದೂರು ದಾಖಲಿಸಬೇಕು. ಸೂಕ್ತ ಕ್ರಮ ತೆಗೆದುಕೊಂಡು, ಕಾನೂನು ಎಲ್ಲರಿಗೂ ಒಂದೇ ಎಂದು ಅರಿವು ಮೂಡಿಸಿಬೇಕು ಎಂದು ಹಿಂದೂ ಮುಖಂಡ ತೇಜಸ್ ಗೌಡ ಮನವಿ ಮಾಡಿಕೊಂಡಿದ್ದಾರೆ.
ಸದ್ಯ ತೇಜಸ್ ಗೌಡ ನೀಡಿದ ದೂರು ಸ್ವೀಕರಿಸಿ, ಕಾನೂನು ತಜ್ಞರ ಮೊರೆ ಹೋಗಿದ್ದಾರೆ ಪೊಲೀಸರು.