ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಭಾಷಣ: ನಲಪಾಡ್ ವಿರುದ್ಧ ದೂರು

By Girish Goudar  |  First Published Mar 30, 2023, 10:33 AM IST

ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ಕಡೂರಿನ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರದೀಪ್ ನಾಯಕ್. 


ಚಿಕ್ಕಮಗಳೂರು(ಮಾ.30):  ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲಾಗಿದೆ. ಹೌದು, ರಾಹುಲ್ ಗಾಂಧಿ ಬೆಂಬಲಿಸಿ ಪ್ರತಿಭಟನೆಯ ವೇಳೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಮೊಹಮ್ಮದ್ ನಲಪಾಡ್ ಅವಹೇಳನಕಾರಿ ಭಾಷಣ ಮಾಡಿದ್ದಾರೆ.

ಹೀಗಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ಬಿಜೆಪಿ ಮುಖಂಡ ಪ್ರದೀಪ್ ನಾಯಕ್  ದೂರು ನೀಡಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ  ಪ್ರದೀಪ್ ನಾಯಕ್ ದೂರು ನೀಡಿದ್ದಾರೆ.

Tap to resize

Latest Videos

undefined

ರಾಹುಲ್‌ ಗಾಂಧಿಯೊಂದಿಗೆ ಜೈಲಿಗೆ ಹೋಗಲು ಸಿದ್ಧ: ಕಾಂಗ್ರೆಸ್ ಮುಖಂಡ

ಎಫ್‌ಐಆರ್ ದಾಖಲು ಮಾಡಲು ಬಿಜೆಪಿ ಮುಖಂಡ ಪ್ರದೀಪ್ ನಾಯಕ್  ಕೋರ್ಟ್ ಮೊರೆ ಹೋಗಿದ್ದಾರೆ. ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ಕಡೂರಿನ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಪ್ರದೀಪ್ ನಾಯಕ್ ಅರ್ಜಿ ಸಲ್ಲಿಸಿದ್ದಾರೆ. 

ಕಳೆದ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೇ ವಿಷಯಕ್ಕೆ ರಾಹುಲ್‌ ಗಾಂಧಿ ಅವರನ್ನ ಸಂಸದ ಸ್ಥಾನದಿಮದ ಅನರ್ಹಗೊಳಿಸಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಮೊಹಮ್ಮದ್ ನಲಪಾಡ್ ಅವಹೇಳನಕಾರಿ ಭಾಷಣ ಮಾಡಿದ್ದಾರೆ. 

click me!