ಬಿಬಿಎಂಪಿ ಕೆಲಸ ಇಂದೇ ಮುಗಿಸಿಕೊಳ್ಳಿ: ನಾಳೆಯಿಂದ ಪಾಲಿಕೆಯ ಎಲ್ಲ ಕಚೇರಿಗಳು ಬಂದ್.?

By Sathish Kumar KHFirst Published Feb 8, 2023, 11:29 AM IST
Highlights

ನಾಳೆಯಿಂದ ಎಲ್ಲ ಬಿಬಿಂಪಿ ನೌಕರರು ವಿವಿಧ ಬೇಡಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ನಗರದಲ್ಲಿರುವ ಎಲ್ಲ ಬಿಬಿಎಂಪಿ ಕಚೇರಿಗಳು ಬಂದ್‌ ಆಗಲಿವೆ. 

ಬೆಂಗಳೂರು (ಫೆ.08): ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಯಾವುದಾದರೂ ಕೆಲಸಗಳು ಇದ್ದರೂ ಎಲ್ಲ ಕೆಲಸಗಳನ್ನು ಇಂದು ಸಂಜೆಯೊಳಗೆ ಮುಗಿಸಿಕೊಂಡುಬಿಡಿ. ಯಾಕೆಂದರೆ ನಾಳೆಯಿಂದ ಎಲ್ಲ ಬಿಬಿಂಪಿ ನೌಕರರು ವಿವಿಧ ಬೇಡಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ನಗರದಲ್ಲಿರುವ ಎಲ್ಲ ಬಿಬಿಎಂಪಿ ಕಚೇರಿಗಳು ಬಂದ್‌ ಆಗಲಿವೆ. 

ಹೌದು, ಈಗಾಗಲೇ ಹಲವು ಬಾರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದ್ದರು. ಆದರೆ, ಈ ಬಗ್ಗೆ ಸರ್ಕಾರ ಮುಖ್ಯ ಕಾರ್ಯದರ್ಶಿಗಳು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷರು ಮತ್ತು ಮುಖಂಡರೊಂದಿಗೆ ಚರ್ಚೆ ನಡೆಸಿ ಬೇಡಿಕೆ ಈಡೇರಿಸುವುದಾಗಿ ಭರವಸೆಯನ್ನೂ ನೀಡಿದ್ದರು. ಆದರೆ, ಸುಮಾರು ನಾಲ್ಕೈದು ತಿಂಗಳಾದರೂ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯಸ ರ್ಕಾರದ ಆಡಳಿತದ ಕೊನೆಯ ಬಜೆಟ್‌ ಮಂಡನೆಗೂ ಮುನ್ನ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬಾರಿ ಎಲ್ಲ ನೌಕರರು ಕೂಡ ಬೇಡಿಕೆ ಈಡೇರಿಸುವವರೆಗೂ ಸರ್ಕಾರದ ಭರವಸೆಗಳಿಗೆ ಮಣಿಯದೇ ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

 

Bengaluru: ಹೈ-ಟೆನ್ಷನ್‌ ಕೆಳಗೆ ಅನಧಿಕೃತ ಮಸೀದಿ ನಿರ್ಮಾಣ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಮೋಹನ್ ಗೌಡ ಆಕ್ರೋಶ

ರಸ್ತೆಗೆ ಇಳಿಯಲಿರುವ ಪಾಲಿಕೆ ಅಧಿಕಾರಿಗಳು, ನೌಕರರು: ನಾಳೆ ಬೆಂಗಳೂರು ಮಹಾನಗರ ಪಾಲಿಗೆ ಕಚೇರಿಗಳು ಬಂದ್? ಆಗಲಿವೆ. ಸರ್ಕಾರದ ವಿರುದ್ದ ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರು ರಸ್ತೆಗಿಳಿಯಲಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡನ ಸುಮಾರು 7 ಸಾವಿರ ಸಿಬ್ಬಂದಿ ಗಳಿಂದ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ನೌಕರರಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಬಿಎಂಪಿಯ ಕಂದಾಯ, ಅರೋಗ್ಯ, ಶಿಕ್ಷಣ, ಮಾರುಕಟ್ಟೆ, ಯೋಜನೆ, ಅಡಳಿತ ವಿಭಾಗದ ಸೇರಿ ಎಲ್ಲ ವಿಭಾಗದ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆಯಲ್ಲಿ  ಭಾಗಿಯಾಗಲಿದ್ದಾರೆ. 

ಸಾಮೂಹಿಕ ರಜೆ ಹಾಕಿ 7 ಸಾವಿರ ನೌಕರರು ಪ್ರತಿಭಟನೆಯಲ್ಲಿ ಭಾಗಿ:  ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾಮೂಹಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬಿಬಿಎಂಪಿ ಕೇಂದ್ರ ಕಛೇರಿಯ ಮುಂದೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪ್ರತಿಭಟನೆ ಮಾಡಲಾಗುತ್ತದೆ. ಎಲ್ಲ ಅಧಿಕಾರಿಗಳು ಹಾಗೂ ನೌಕರರು ಸಾಮೂಹಿಕ ರಜೆ ಹಾಕಿ 7 ಸಾವಿರ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಪಾಲಿಕೆ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆ ಈಡೇರಿಸುವ  ಸಂಬಂಧ ಹಲವು ಬಾರಿ ಮುಖ್ಯಮಂತ್ರಿ ಹಾಗೂ ಮುಖ್ಯ ಆಯುಕ್ತರಿಗೆ ಮನವಿ ಮಾಡಿದರೂ ಪ್ರತಿಫಲ ಸಿಕ್ಕಿಲ್ಲ. ಹೀಗಾಗಿ, ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಪಾಲಿಕೆ ವಿದ್ಯಾರ್ಥಿಗಳಿಗೆ ಸ್ವೆಟರ್‌ ಭಾಗ್ಯವಿಲ್ಲ: ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಮಕ್ಕಳಿಗೆ ಸ್ವೆಟರ್‌ ಕೊಡದ ಬಿಬಿಎಂಪಿ

ಬಿಬಿಎಂಪಿ ಅಧಿಕಾರಿ, ನೌಕರರ ಬೇಡಿಕೆಗಳೇನು?
1. ನಿಯಮಾವಳಿಯಂತೆ ಸಕಾಲದಲ್ಲಿ ಅಧಿಕಾರಿ, ನೌಕರರಿಗೆ ಸೌಲಭ್ಯ ಒದಗಿಸುತ್ತಿಲ್ಲ.
2. ಪಾಲಿಕೆಯಲ್ಲಿ ವಿಲೀನಗೊಂಡಿರುವ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ.
3. ಆರೋಗ್ಯ ಕಾರ್ಡ್ ನೀಡುವುದಾಗಿ ಹೇಳಿ ಇದುವರೆಗೆ ನೀಡಿಲ್ಲ.
4. ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೌಲಭ್ಯ ಪಡೆದುಕೊಳ್ಳಲು ಆಗುತ್ತಿಲ್ಲ.
5  ಅನಾರೋಗ್ಯಕ್ಕೆ ಒಳಗಾದಾಗ ಬಿಬಿಎಂಪಿ ಆಸ್ಪತ್ರೆಗಳು ಮಾತ್ರವಲ್ಲದೆ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಮಾಡಿಕೊಡಬೇಕು.
6. ಖಾಲಿ ಇರುವ ಎಲ್ಲ ವೃಂದದ ಮುಂಬಡ್ತಿ ನೀಡಬೇಕು.

click me!