ಕರ್ನಾಟಕದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಕುಸಿತ: ಶಾಸಕ ವೇದವ್ಯಾಸ್‌ ಕಾಮತ್‌

Published : Jul 17, 2023, 02:30 AM IST
ಕರ್ನಾಟಕದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಕುಸಿತ: ಶಾಸಕ ವೇದವ್ಯಾಸ್‌ ಕಾಮತ್‌

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತ ನಡೆಸಿದ ಎಲ್ಲ ಸಂದರ್ಭಗಳಲ್ಲಿ ಹತ್ಯೆಗಳು, ಅಹಿಕರ ಘಟನೆಗಳು, ಕೋಮು ಗಲಭೆಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಡೆದ ಉದಾಹರಣೆಗೆ ಸಾಕಷ್ಟಿದೆ. ಇದೀಗ ಕಾಂಗ್ರೆಸ್‌ ಸರ್ಕಾರ ಬಂದು ಒಂದೂವರೆ ತಿಂಗಳಿನಲ್ಲಿ ಇದು ಸ್ಪಷ್ಟವಾಗಿ ಗೋಚರಿಸುತ್ತಿದೆ: ಶಾಸಕ ವೇದವ್ಯಾಸ್‌ ಕಾಮತ್‌

ಮಂಗಳೂರು(ಜು.17):  ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಮಾಯಕರ ಸರಣಿ ಹತ್ಯೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಆರೋಪಿಸಿದ್ದಾರೆ.

ಜೈನ ಮುನಿ ಹತ್ಯೆ, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯ ಒಳಗೆ ನುಗ್ಗಿ ಜೋಡಿ ಕೊಲೆ, ಯುವ ಬ್ರಿಗೇಡ್‌ ಕಾರ್ಯಕರ್ತ ವೇಣುಗೋಪಾಲ್‌ ಹತ್ಯೆ ಸಹಿತ ಅನೇಕ ಕೊಲೆಗಳು ನಡೆದಿವೆ. ಗೃಹ ಇಲಾಖೆಗೆ ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಇಲ್ಲದಂತಾಗಿದೆ. ಇದರಿಂದ ಸಮಾಜ ಘಾತುಕ ಶಕ್ತಿಗಳಿಗೆ ಪೊಲೀಸರ ಭಯ ಇಲ್ಲದೇ ಇರುವ ಕಾರಣಕ್ಕೆ ಈ ಎಲ್ಲ ಘಟನೆಗಳು ರಾಜಾರೋಷÜವಾಗಿ ನಡೆಯುತ್ತಿವೆ. ಸರ್ಕಾರ ತಕ್ಷಣ ಎಚ್ಚೆತ್ತು ಎಲ್ಲ ಅಹಿತಕರ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶರಣಾಗದಿದ್ದರೆ ನೆಟ್ಟಾರು ಹತ್ಯೆ ಆರೋಪಿಗಳ ಮನೆ, ಆಸ್ತಿ ಜಪ್ತಿ: ಎನ್​ಐಎ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತ ನಡೆಸಿದ ಎಲ್ಲ ಸಂದರ್ಭಗಳಲ್ಲಿ ಹತ್ಯೆಗಳು, ಅಹಿಕರ ಘಟನೆಗಳು, ಕೋಮು ಗಲಭೆಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಡೆದ ಉದಾಹರಣೆಗೆ ಸಾಕಷ್ಟಿದೆ. ಇದೀಗ ಕಾಂಗ್ರೆಸ್‌ ಸರ್ಕಾರ ಬಂದು ಒಂದೂವರೆ ತಿಂಗಳಿನಲ್ಲಿ ಇದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಜನಪರ ಆಡಳಿತ ನಡೆಸುವುದು ಬಿಟ್ಟು ವರ್ಗಾವಣೆ ದಂಧೆ ಹಾಗೂ ಇತರ ವಿಷಯಗಳಲ್ಲೇ ಸರ್ಕಾರ ಹೆಚ್ಚು ಆಸಕ್ತಿ ವಹಿಸಿರುವ ಕಾರಣ ರಾಜ್ಯದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಸರ್ಕಾರ ಜನರಿಗೆ ಭಯಮುಕ್ತ ಆಡಳಿತ ನೀಡುವತ್ತ ಗಮನ ಹರಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

PREV
Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!