ಬ್ರೇಕಿಂಗ್‌: ಒಂದು ವಾರ ಬೆಂಗಳೂರು ಕಂಪ್ಲೀಟ್ ಲಾಕ್‌ಡೌನ್; ಸರ್ಕಾರದ ಅಧಿಕೃತ ಆದೇಶ

Suvarna News   | Asianet News
Published : Jul 11, 2020, 08:17 PM ISTUpdated : Jul 12, 2020, 02:37 PM IST
ಬ್ರೇಕಿಂಗ್‌: ಒಂದು ವಾರ ಬೆಂಗಳೂರು ಕಂಪ್ಲೀಟ್ ಲಾಕ್‌ಡೌನ್; ಸರ್ಕಾರದ ಅಧಿಕೃತ ಆದೇಶ

ಸಾರಾಂಶ

ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ದಿಟ್ಟ ಕ್ರಮ/ ಒಂದು ವಾರ ಕಟ್ಟುನಿಟ್ಟಿನ ಲಾಕ್ ಡೌನ್/ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ/ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಕಂಪ್ಲೀಟ್ ಲಾಕ್ ಡೌನ್

ಬೆಂಗಳೂರು(ಜು.  11)  ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ ಮುಂದಾದ ಸರ್ಕಾರ ಅಂತಿಮವಾಗಿ ದಿಟ್ಟ ತೀರ್ಮಾನ ತೆಗೆದುಕೊಂಡಿದೆ. ಒಂದು ವಾರ  ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಮಂಗಳವಾರ ಅಂದರೆ ಜೂನ್ 14  ರ ರಾತ್ರಿ 8  ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲಾಗುತ್ತಿದ್ದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ  ಜುಲೈ 14 ಮಂಗಳವಾರ ರಾತ್ರಿ 8 ಗಂಟೆಯಿಂದ  1 ವಾರಗಳ ಕಾಲ ಅಂದರೆ  ಜುಲೈ 23 ಬೆಳಿಗ್ಗೆ 5 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು  ಎಂದು ಸಿಎಂ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ.  ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು  ನಡೆಯಲಿವೆ. 

ಬೆಂಗಳೂರು ಆಗಮನ ಮತ್ತು ನಿರ್ಗಮನ ಬಂದ್

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು  ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೊರೋನಾ ತಡೆಗೆ ಲಾಕ್ ಡೌನ್ ನಿಂದ ಮಾತ್ರ ಸಾಧ್ಯ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ.

ಸೋಮವಾರ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದು ಕೊರೋನಾ ತಾಂಡವ ಆಡುತ್ತಿರುವ ಬೇರೆ ಯಾವ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮಾಡಬಹುದು ಎಂಬ ಚರ್ಚೆ ನಡೆಸಲಿದ್ದಾರೆ. ಪ್ರತಿದಿನ ಸರಾಸರಿ ಎರಡು ಸಾವಿರ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.  

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು