ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ ಶೀಘ್ರ ಮುಗಿಸಿ, ಸಚಿವ ವೆಂಕಟೇಶ್‌

By Kannadaprabha News  |  First Published Jan 3, 2024, 1:00 AM IST

ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತರ ಅನುಕೂಲಕ್ಕಾಗಿ ವಿಶೇಷ ದಿನಗಳು, ಜಾತ್ರೆ, ಹುಣ್ಣಿಮೆ ಹಾಗೂ ಅಮಾವಾಸ್ಯೆ ಸಂದರ್ಭಗಳಲ್ಲಿ ಸಕಲ ಸೌಕರ್ಯಗಳನ್ನು ನೀಡುವ ಮೂಲಕ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ ಸಚಿವ ಕೆ. ವೆಂಕಟೇಶ್‌


ಹನೂರು(ಜ.03):  ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರನ ದರ್ಶನ ಪಡೆದು ಅಧಿಕಾರಿಗಳ ಜೊತೆ ಸಭೆ ನಡೆಸಿ, ನೂತನ ವರ್ಷ 2024ರ ಕ್ಯಾಲೆಂಡರ್ ಬಿಡುಗಡೆ ಮಾಡಿದ ಬಳಿಕ ವಿವಿಧ ಕಾಮಗಾರಿಗಳನ್ನು ಪರಿಶೀಲನೆಗಳನ್ನು ಕುರಿತು ಮಾತನಾಡಿ, ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತರ ಅನುಕೂಲಕ್ಕಾಗಿ ವಿಶೇಷ ದಿನಗಳು, ಜಾತ್ರೆ, ಹುಣ್ಣಿಮೆ ಹಾಗೂ ಅಮಾವಾಸ್ಯೆ ಸಂದರ್ಭಗಳಲ್ಲಿ ಸಕಲ ಸೌಕರ್ಯಗಳನ್ನು ನೀಡುವ ಮೂಲಕ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

Tap to resize

Latest Videos

undefined

ಸುಳ್ಳುಗಾರ, ವಚನಭ್ರಷ್ಠ ಸಿಎಂ ಸಿದ್ದರಾಮಯ್ಯ: ಮಾಜಿ ಶಾಸಕ ಎನ್.ಮಹೇಶ್

ಕಾಮಗಾರಿಗಳ ಪರಿಶೀಲನೆ: 

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ 512 ಕೊಠಡಿಗಳ ನಿರ್ಮಾಣ ಹಾಗೂ108 ಅಡಿ ಮಲೆ ಮಹದೇಶ್ವರ ಪ್ರತಿಮೆಯ ಸ್ಥಳದಲ್ಲಿ ಆಗಬೇಕಾಗಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳಿಸಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿಸಾಹೋ, ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪ ವಿಭಾಗಾಧಿಕಾರಿಗಳಾದ ಮಹೇಶ್ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

click me!