ವಿದ್ಯಾರ್ಥಿನಿಯರು ವಿದ್ಯಾಭ್ಯಾಸವನ್ನು ಪರಿಪೂರ್ಣಗೊಳಿಸಿ ಉನ್ನತ ಹುದ್ದೆ ಪಡೆಯುವ ಮೂಲಕ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಶಾಸಕ ಕೆ. ಹರೀಶ್‌ಗೌಡ ಕರೆ ನೀಡಿದರು.
ಮೈಸೂರು : ವಿದ್ಯಾರ್ಥಿನಿಯರು ವಿದ್ಯಾಭ್ಯಾಸವನ್ನು ಪರಿಪೂರ್ಣಗೊಳಿಸಿ ಉನ್ನತ ಹುದ್ದೆ ಪಡೆಯುವ ಮೂಲಕ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಶಾಸಕ ಕೆ. ಹರೀಶ್‌ಗೌಡ ಕರೆ ನೀಡಿದರು.
ನಗರದ ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕೆಂಪನಂಜಮ್ಮಣ್ಣಿ ವೇದಿಕೆಯಲ್ಲಿ ಗುರುವಾರ ಆಯೋಜಿಸಿದ್ಧ 2023- 24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
undefined
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಮಾತ್ರ ಬುದ್ಧಿವಂತರು, ಸರ್ಕಾರಿ ಶಾಲಾ ಕಾಲೇಜಿನಲ್ಲಿ ಶಿಕ್ಷಣ ಪಡೆದವರು ದಡ್ಡರು ಎಂಬ ಭಾವನೆ ಇರಬಾರದು. ಉತ್ತಮ ಸಾಧನೆ ಮಾಡಿರುವವರು ಎಲ್ಲರೂ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಪಡೆದವರು ಎಂದು ಅವರು ಹೇಳಿದರು.
ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಅತ್ಯಂತ ಅವಶ್ಯಕವಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿನಿಯರು ಹೆಚ್ಚು ಭಾಗವಹಿಸಿದಾಗ ಮಾತ್ರ ಕ್ರಿಯಾಶೀಲತೆ ಅಧಿಕವಾಗುತ್ತದೆ ಎಂದರು.
ಕಾರ್ಮಿಕರ ಶ್ರಮ ಹಣದಿಂದ ಅಳೆಯಬಾರದು
ಮೈಸೂರು (ಜೂ.02): ಕಾರ್ಮಿಕರ ಶ್ರಮವನ್ನು ನಾವು ಹಣದಿಂದ ಅಳೆಯಬಾರದು ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ಗೌಡ ಹೇಳಿದರು. ಮೈಸೂರು ಕನ್ನಡ ವೇದಿಕೆಯು ಕಾರ್ಮಿಕ ದಿನಾಚರಣೆ ಅಂಗವಾಗಿ ಸುಬ್ಬರಾಯನಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾಯಕಯೋಗಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾಜ ಕಟ್ಟುವಲ್ಲಿ ಕಾರ್ಮಿಕರ ಶ್ರಮ ಮುಖ್ಯ. ಕಾರ್ಮಿಕರ ಶ್ರಮಕ್ಕೆ ಅದರದೇ ಆದ ಗೌರವವಿದೆ. ಯಾರನ್ನು ನೋಯಿಸದೇ ಎಲ್ಲರನ್ನು ಒಳ್ಳೆಯ ರೀತಿಯಲ್ಲಿ ನೋಡುವ ಮನೋಭಾವನೆ ಬೆಳಸಿಕೊಳ್ಳಬೇಕು.
ಶ್ರಮಿಕರನ್ನು ಗುರುತಿಸಿ, ಸನ್ಮಾನಿಸಿದರೆ ಶ್ರಮಕರಿಗೆ ಅವರ ಮೇಲಿಯೇ ಗೌರವ ಹೆಚ್ಚಾಗುತ್ತದೆ. ಅಲ್ಲದೆ, ಸಂಸ್ಥೆಗಳ ಗೌರವ ಕೂಡ ಹೆಚ್ಚಾಗುತ್ತದೆ ಎಂದರು. ಮೈಸೂರು ಕನ್ನಡ ವೇದಿಕೆಯಿಂದ ಒಳ್ಳೆ ಕಾರ್ಯಕ್ರಮ ಮಾಡುತ್ತಿದೆ. ಸಣ್ಣಪುಟ್ಟಶ್ರಮಿಕರನ್ನು ಗುರುತಿಸಿ ಅವರಿಗೆ ಸ್ಫೂರ್ತಿ ಬರುವಂತೆ ಮಾಡಿದ್ದಾರೆ. ಕಾಯಕಯೋಗಿ ಪ್ರಶಸ್ತಿಗೆ ಇವರು ಆಯ್ಕೆ ಮಾಡಿರುವ ಎಲ್ಲಾ ಕಾರ್ಮಿಕರು ಅರ್ಹರಿದ್ದಾರೆ ಎಂದರು. ಸಾಮಾನ್ಯರಲ್ಲಿ ಸಾಮಾನ್ಯ ಸಂಘಟನೆಗಳು ಇಂತಹ ಕೆಲಸ ಮಾಡಬೇಕು. ಸಮಾಜಕ್ಕೆ ಮಾದರಿಯಾಗಬೇಕು. ಸಂಘಟನೆಗಳು ಕೇವಲ ಹೋರಾಟಕ್ಕೆ ಒತ್ತು ನೀಡದೆ ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡರೆ ಸಮಾಜ ಸೇವೆ ಮಾಡುತ್ತಿರುವ ವ್ಯಕ್ತಿಗಳನ್ನು ಬೆಳಕಿಗೆ ತಂದಂತಾಗುತ್ತದೆ ಎಂದರು.
ದೇವನಹಳ್ಳಿ-ವಿಜಯಪುರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಸಚಿವ ಮುನಿಯಪ್ಪ
ಕುಮಾರ, ಕೋಮಲಾ, ಚೆಲುವರಾಜು, ಮೀನಾಕ್ಷಿ ವಿಜಯ್, ಎಂ.ಎಸ್. ಸುರೇಶ್‌ಕುಮಾರ್, ಜೆ. ಧನೋಜಿರಾವ್, ಕಿಶೋರ್ ನಾಗ್, ಎಸ್. ಮಹೇಶ್‌ಕುಮಾರ್, ನಾಗರಾಜು, ನವೀನ ಇವರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಪಿಎನ್ ವ್ಯವಸ್ಥಾಪಕ ಪಾಲುದಾರ ಎ.ಪಿ. ನಾಗೇಶ್, ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ, ವೇದಿಕೆ ಪದಾಧಿಕಾರಿಗಳಾದ ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೇಸ್ ಬಾಬು, ಗೋಪಿ, ಕಾವೇರಮ್ಮ, ಮಾಲಿನಿ, ಪೂರ್ಣಿಮಾ, ಮಹದೇವಸ್ವಾಮಿ ಇದ್ದರು.
ರೈತರ ಸಂಕಷ್ಟಪರಿಹರಿಸಲು ಸಹಕಾರಿ ಸಂಘಗಳ ಆದ್ಯತೆ: ರೈತ ಸಮುದಾಯದ ಆರ್ಥಿಕ ಸಂಕಷ್ಟಗಳನ್ನು ಪರಿಹರಿಸುವತ್ತ ಸಹಕಾರಿ ಸಂಘಗಳು ಪ್ರಥಮ ಆದ್ಯತೆ ನೀಡಿವೆ ಎಂದು ಶಾಸಕ ಜಿ.ಡಿ. ಹರೀಶ್‌ಗೌಡ ಅಭಿಪ್ರಾಯಪಟ್ಟರು. ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಸಹಕಾರಿ ರಂಗದ ಧುರೀಣ ಸಿದ್ದನಗೌಡ ಪಾಟೀಲರು ಸಹಕಾರಿ ಸಂಘಗಳನ್ನು ಹುಟ್ಟು ಹಾಕಿದರು. ಇಂದು ಸಹಕಾರಿ ಸಂಸ್ಥೆಗಳು ಹೆಮ್ಮರವಾಗಿ ಬೆಳೆದು ನಿಂತಿದೆ. ಮಾತ್ರವಲ್ಲದೇ ರೈತ ಸಮುದಾಯದ ನಿತ್ಯಜೀವನದ ಅವಿಭಾಜ್ಯ ಅಂಗವಾಗಿದೆ.
ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ 117 ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ನಗರ ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ನಿವೃತ್ತ ಪ್ರಾಂಶುಪಾಲ ವ.ನಂ. ಶಿವರಾಮು, ಕಾಲೇಜಿನ ಪ್ರಾಂಶುಪಾಲ ಪಿ. ಸೋಮಣ್ಣ, ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲೆ ತಿರುಮಲಾಂಬ ಮೊದಲಾದವರು ಇದ್ದರು.