ಬಿಜೆಪಿಯಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿ: ಶಿವಪ್ರಸಾದ್‌

By Kannadaprabha News  |  First Published May 1, 2023, 5:21 AM IST

ಪ್ರಧಾನಿ ಮೋದಿ ಜಾರಿಗೆ ತಂದ ಜನಪರ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ತಾಲೂಕು ಸರ್ವತೋಮುಖ ಅಭಿವೃದ್ಧಿಗೆ ಇಲ್ಲಿನ ಬಿಜೆಪಿ ಅಭ್ಯರ್ಥಿ ಕೃಷ್ಣನಾಯಕ್‌ರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ರಾಜ್ಯ ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಪಾವಗಡದ ಎಸ್‌.ಶಿವಪ್ರಸಾದ್‌ ಕರೆ ನೀಡಿದರು.


 ಪಾವಗಡ:  ಪ್ರಧಾನಿ ಮೋದಿ ಜಾರಿಗೆ ತಂದ ಜನಪರ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ತಾಲೂಕು ಸರ್ವತೋಮುಖ ಅಭಿವೃದ್ಧಿಗೆ ಇಲ್ಲಿನ ಬಿಜೆಪಿ ಅಭ್ಯರ್ಥಿ ಕೃಷ್ಣನಾಯಕ್‌ರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ರಾಜ್ಯ ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಪಾವಗಡದ ಎಸ್‌.ಶಿವಪ್ರಸಾದ್‌ ಕರೆ ನೀಡಿದರು.

ಭಾನುವಾರದಂದು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನ ಜನತೆ ಬದಲಾವಣೆ ಆಗಬೇಕು. ಯೋಜಿಸಿ ಕ್ಷೇತ್ರದ ಸಮಗ್ರ ಪ್ರಗತಿಗೆ ಬೆಂಬಲಿಸಿ ಇಲ್ಲಿನ ಅಭ್ಯರ್ಥಿ ನಾಯ್‌್ಕರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

Tap to resize

Latest Videos

ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸುವುದು ಖಚಿತ. ಉದ್ಯೋಗ ಸೃಷ್ಟಿ, ಕೈಗಾರಿಕೆ, ನೀರಾವರಿ ಯೋಜನೆಗಳ ಪ್ರಗತಿ ಸೇರಿದಂತೆ ಶೈಕ್ಷಣಿಕ ಅಭಿವೃದ್ಧಿಗೆ ತಾಲೂಕಿನಲ್ಲಿ ಬಿಜೆಪಿ ಬೆಂಬಲಿಸಿ ಗೆಲ್ಲಿಸುವಂತೆ ಮನವಿ ಮಾಡಿದರು.

ತಾಲೂಕು ಬಿಜೆಪಿ ಅಧ್ಯಕ್ಷ ರವಿಶಂಕರನಾಯ್‌್ಕ, ನಿಕಟಪೂರ್ವ ಅಧ್ಯಕ್ಷ ಜಿ.ಟಿ.ಗಿರೀಶ್‌ ಮಾತನಾಡಿ, ತಾಲೂಕು ಪ್ರಗತಿಗೆ ಬಿಜೆಪಿ ಅಭ್ಯರ್ಥಿ ಕೃಷ್ಣನಾಯಕ್‌ರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಮಂಡಲ ಕಾರ್ಯದರ್ಶಿ ಶೇಖರ್‌ಬಾಬು, ಎಸ್‌ಟಿ ಮೋರ್ಚಾ ಅಧ್ಯಕ್ಷ ಬ್ಯಾಡನೂರು ಶಿವು, ವಕ್ತಾರ ಗ್ರಾಪಂ ಸದಸ್ಯ ಕಡಪಲಕರೆ ನವೀನ್‌, ಮುಖಂಡರಾದ ಗುಂಡರ್ಲಹಳ್ಳಿ ತಿಪ್ಪೇಸ್ವಾಮಿ, ಅಲ್ಕಂದರಾಜ್‌, ಸಿಂಗರೆಡ್ಡಿಹಳ್ಳಿ ಪುರುಷೋತ್ತಮ್‌, ತಿರುಮಣಿ ಗ್ರಾಪಂ ಸದಸ್ಯ ಅರುಣ್‌ಕುಮಾರ್‌ ಇತರೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಫೋಟೋ 31ಪಿವಿಡಿ2

ಪಾವಗಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್‌.ಶಿವಪ್ರಸಾದ್

ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ

ಮೈಸೂರು (ಮೇ.01): ಯಾವುದೇ ಕಾರಣಕ್ಕೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಪ್ರಧಾನಿ ಮೋದಿ ಭೇಟಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್‌.ವಿಶ್ವನಾಥ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಂತಹವರು, ಕುಮಾರಸ್ವಾಮಿ ಅಂತಹವರ ನೆರವಿನಿಂದ ಬಿಜೆಪಿ ಅಧಿಕಾರಕ್ಕೆ ಬಂತು. ಇನ್ನೆಂದಿಗೂ ಕರ್ನಾಟಕ ಮಾತ್ರವಲ್ಲದೆ ಇಡೀ ದಕ್ಷಿಣ ಭಾರತದಲ್ಲೇ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದರು. ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ಮೋದಿ ಅವರು ನಮ್ಮ ರಾಜ್ಯಕ್ಕೆ ನೀಡಿರುವ ಕೊಡುಗೆಯಾದರೂ ಏನು?, ಬೇರೆ ಬ್ಯಾಂಕುಗಳ ಜೊತೆ ವಿಲೀನಗೊಳಿಸಿರುವ ನಮ್ಮ ಬ್ಯಾಂಕುಗಳನ್ನು ವಾಪಸ್‌ ಕೊಡಿ. ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕು. 

ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರಬೇಡಿ ಎಂದು ಆಗ್ರಹಿಸಿದರು. ದಕ್ಷಿಣ ಭಾರತದ ಮೇಲೆ ಉತ್ತರ ಭಾರತದವರ ಯಜಮಾನಿಕೆ ಜಾಸ್ತಿಯಾಗುತ್ತಿದೆ. ಕರ್ನಾಟಕದ ಮೇಲೆ ಕೇಂದ್ರದ ಯಜಮಾನಿಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ವಿಚಾರಕ್ಕೂ ಜಿಎಸ್‌ಟಿ ಪಾವತಿ ಮಾಡಬೇಕಾಗಿದೆ. ಅಗತ್ಯ ವಸ್ತುಗಳ ಬೆಲೆ ಏರುತ್ತಿದ್ದು, ಹೆಣ್ಣು ಮಕ್ಕಳು ಶಾಪ ಹಾಕುತ್ತಿದ್ದಾರೆ. ರಾಜ್ಯದ ಜಿಎಸ್‌ಟಿ ಪಾಲು ಸರಿಯಾಗಿ ಸಿಗುತ್ತಿಲ್ಲ. ನಮ್ಮ ರಾಜ್ಯದ ಜಿಎಸ್‌ಟಿ ಪಾಲು ಉತ್ತರದ ರಾಜ್ಯಗಳತ್ತ ಹರಿದು ಹೋಗುತ್ತಿದೆ. ಉತ್ತರದವರ ಯಜಮಾನಿಕೆಯಿಂದ ದಕ್ಷಿಣದ ನಾವು ತತ್ತರಿಸುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

click me!