Covid-19 Threat: ಕ್ರಿಸ್‌ಮಸ್‌ ಆಚರಣೆಗೆ ಷರತ್ತುಬದ್ಧ ಅನುಮತಿ, ಯಾವೆಲ್ಲಾ ರೂಲ್ಸ್‌ ಫಾಲೋ ಮಾಡ್ಬೇಕು?

By Kannadaprabha News  |  First Published Dec 11, 2021, 9:19 AM IST

*   ಕೊರೋನಾ ಮಾರ್ಗಸೂಚಿ ಪಾಲನೆ ಕಡ್ಡಾಯ
*   ಜನ ದಟ್ಟಣೆ ಮೇಲೆ ಪಾಲಿಕೆ ನಿಗಾ
*   ಚರ್ಚ್‌ಗಳಲ್ಲಿ ಸಾಮಾಜಿಕ ಅಂತರ 
 


ಬೆಂಗಳೂರು(ಡಿ.11):  ಕ್ರಿಸ್‌ಮಸ್‌(Christmas) ಆಚರಣೆಗೆ ಯಾವುದೇ ವಿಶೇಷ ಮಾರ್ಗಸೂಚಿ(Special Guidelines) ಇರುವುದಿಲ್ಲ, ಆದರೆ ಕಡ್ಡಾಯವಾಗಿ ಕೊರೋನಾ ಮಾರ್ಗಸೂಚಿಗಳನ್ನು(Corona Guidelines) ಅನುಸರಿಸಲೇಬೇಕು ಎಂದು ಬಿಬಿಎಂಪಿ ತಿಳಿಸಿದೆ.

ಶುಕ್ರವಾರ ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ಮುಖ್ಯ ಆಯುಕ್ತ ಗೌರವ್‌ ಗುಪ್ತಾ(Gaurav Gupta), ಕ್ರಿಸ್‌ಮಸ್‌ ಆಚರಣೆಗೆ ಅನುಮತಿ ನೀಡಲಾಗಿದ್ದು, ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಚರ್ಚ್‌ಗಳ(Church) ಬಳಿ ಜನದಟ್ಟಣೆ ಹೆಚ್ಚದಂತೆ ನೋಡಿಕೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Tap to resize

Latest Videos

undefined

Omicron Threat: ವಿದೇಶದಿಂದ ಬಂದ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಮೇಲೆ ಒಲವು

ಚರ್ಚ್‌ಗಳಲ್ಲಿ ಸಾಮಾಜಿಕ ಅಂತರ(Social Distance), ಪ್ರಾರ್ಥನೆ(Prayer) ವೇಳೆ ಕಡ್ಡಾಯವಾಗಿ ಮಾಸ್ಕ್‌(Mask) ಧರಿಸಿರಬೇಕು. ಎರಡು ಡೋಸ್‌ ಲಸಿಕೆ(Two Dose Vaccine) ಪಡೆದಿರಲೇಬೇಕು ಎಂಬ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಮುಖ್ಯವಾಗಿ ಸ್ಯಾನಿಟೈಸರ್‌(Sanitizer) ಬಳಕೆ ಮಾಡಬೇಕು ಎಂದು ಅವರು ಹೇಳಿದರು.

ಹೆಚ್ಚುತ್ತಿರುವ ಕೊರೋನಾ(Coronavirus) ಸೋಂಕು ಪ್ರಕರಣ ಮತ್ತು ಒಮಿಕ್ರೋನ್‌(Omicron) ಭೀತಿಯಿಂದಾಗಿ ನಗರದಾದ್ಯಂತ(Bengaluru) ಕೊರೋನಾ ಪರೀಕ್ಷೆ(Covid Test) ಹೆಚ್ಚಿಸಲಾಗಿದೆ. ಪ್ರತಿನಿತ್ಯ 40ರಿಂದ 50 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗುತ್ತಿದೆ. ಅವಶ್ಯಕತೆ ಬಿದ್ದರೆ ಪರೀಕ್ಷೆ ಪ್ರಮಾಣವನ್ನು ಇನ್ನೂ ಹೆಚ್ಚಿಸಲಾಗುವುದು. ರೋಗ ಲಕ್ಷಣ ಇದ್ದವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಂಡು ಹೋಂ ಐಸೋಲೇಷನ್‌ನಲ್ಲಿ ಇರಬೇಕು. ನೆಗಡಿ, ಕೆಮ್ಮು ಮತ್ತಿತರ ರೋಗ ಲಕ್ಷಣಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೊರೋನಾ ತಪಾಸಣೆ ನಡೆಸುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಮಳೆ ಕಡಿಮೆಯಾಗಿದ್ದು, ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಪಾಲಿಕೆ ಗಮನಹರಿಸಿದೆ. ಜನರಿಗೆ ತೊಂದರೆ ಆಗದಂತೆ ಸಮರೋಪಾದಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ. ರಾಜಕಾಲುವೆಗಳ ಒತ್ತುವರಿ, ಅಗಲೀಕರಣ ಮತ್ತು ರಸ್ತೆ ಗುಂಡಿ ಮುಚ್ಚುವ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತಾ ತಿಳಿಸಿದ್ದಾರೆ.  

ಒಮಿಕ್ರೋನ್‌ ಸೋಂಕು ತಗುಲಿದವರಿಗೆ ಕರ್ನಾಟಕದಲ್ಲಿ ಹೊಸ ರೂಲ್ಸ್!

ಕೊರೋನಾದ(Coronavirus) ರೂಪಾಂತರಿ ತಳಿ ಒಮಿಕ್ರೋನ್‌ ಸೋಂಕು ದೃಢಪಟ್ಟವರಿಗೆ ಕಡ್ಡಾಯವಾಗಿ 10 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ಬಿಡುಗಡೆಗೂ ಮುನ್ನ ಎರಡು ಬಾರಿ ನೆಗೆಟಿವ್‌ ವರದಿ ಹಾಗೂ ಒಂದು ವಾರ ಹೋಂ ಕ್ವಾರಂಟೈನ್‌ಗೆ ಸೂಚಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ತಜ್ಞರ ಸಮಿತಿ ಚರ್ಚಿಸಿ ನೀಡಿದ ಸಲಹೆ ಆಧರಿಸಿ ಇಲಾಖೆಯು ಒಮಿಕ್ರೋನ್‌ ಸೋಂಕು ಪರೀಕ್ಷೆ, ಚಿಕಿತ್ಸೆಗಳ ಕುರಿತು ಮಾರ್ಗಸೂಚಿ ಪ್ರಕಟಿಸಿದೆ.

Covid-19 Variant: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಂದು 30 ಲಕ್ಷಕ್ಕೆ?

ಒಮಿಕ್ರೋನ್‌ ಸೋಂಕಿತರಿಗೆ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ(Hospital) ದಾಖಲಿಸಿ 10 ದಿನ ಚಿಕಿತ್ಸೆ ನೀಡಬೇಕು. ಬಿಡುಗಡೆಗೂ ಸತತ ಮೂರು ದಿನ ಮುನ್ನ ಸೋಂಕಿನ ಲಕ್ಷಣಗಳಿರಬಾರದು. ಸತತ ನಾಲ್ಕು ದಿನ ರಕ್ತದಲ್ಲಿನ ಆಮ್ಲಜನಕ ಪ್ರಮಾಣ (ಸ್ಯಾಚುರೇಷನ್‌) ಶೇ.95ಕ್ಕಿಂತ ಹೆಚ್ಚಿರಬೇಕು. ಮುಖ್ಯವಾಗಿ ಆಸ್ಪತ್ರೆಯಿಂದ ಬಿಡುಗಡೆಗೂ ಮುನ್ನ 24 ಗಂಟೆಗಳಲ್ಲಿ ಎರಡು ಬಾರಿ ಸೋಂಕು ಪರೀಕ್ಷೆ ವರದಿ ನೆಗೆಟಿವ್‌ ಬರಬೇಕು. ಒಂದು ವೇಳೆ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟರೆ ಮತ್ತೆ 48 ಗಂಟೆಗಳ ಬಳಿಕ ಪರೀಕ್ಷೆ ನಡೆಸಬೇಕು. ಇವುಗಳ ಜತೆಗೆ ಬಿಡುಗಡೆ ಸಂದರ್ಭದಲ್ಲಿ ಡಿ-ಡಿಮ್ಮರ್‌, ಎಸ್‌.ಫೆರಿಟಿನ್‌, ಎಸ್‌.ಎಲ್‌ಡಿಎಚ್‌ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ಸಮಾಧಾಕರವಾಗಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಸೋಂಕಿತರಿಗೆ ಏಳು ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ಗೆ(Home Quarantine) ಸೂಚಿಸಬೇಕು. ಒಂದು ವೇಳೆ ಹೋಂ ಕ್ವಾರಂಟೈನ್‌ ಸೌಲಭ್ಯ ಇಲ್ಲವಾದರೆ ಸಾಂಸ್ಥಿಕ ಕ್ವಾರಂಟೈನ್‌ಗೆ ಸಲಹೆ ನೀಡಬೇಕು. ಈ ಅವಧಿಯಲ್ಲಿ ಆರೋಗ್ಯ ಸಿಬ್ಬಂದಿ ದೂರವಾಣಿ ಮೂಲಕ ನಿಗಾವಹಿಸಬೇಕು.

click me!