ತಾಲೂಕಿನ ಕರಡಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಯೋಜನೆಗಳೊಂದಿಗೆ ಸರ್ಕಾರ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಆಯೋಜಿಸಲಾಗಿತ್ತು.
ತಿಪಟೂರು: ತಾಲೂಕಿನ ಕರಡಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಯೋಜನೆಗಳೊಂದಿಗೆ ಸರ್ಕಾರ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಆಯೋಜಿಸಲಾಗಿತ್ತು.
ಈ ವೇಳೆ ಶಾಸಕ ಕೆ. ಷಡಕ್ಷರಿ ಮಾತನಾಡಿ, ನಮ್ಮ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದ್ದು ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು. ಯಾರಿಗೆ ಯೋಜನೆ ಫಲ ಸಿಗುತ್ತಿಲ್ಲವೋ ಅಂತವರಿಗೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಮಾಹಿತಿ ಕೊಡಿಸಿ ಯೋಜನೆ ಸಿಗುವಂತೆ ಮಾಡಲಾಯಿತು.
undefined
ಈ ಸಂದರ್ಭದಲ್ಲಿ ಕರಡಿ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್. ದೇವರಾಜು ಶಾಸಕರಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ದೇವಿರಮ್ಮ, ಪಿಡಿಒ ಕವಿತಾ, ಬಿಲ್ ಕಲೆಕ್ಟರ್ ನಟರಾಜು, ಸಿಡಿಪಿಒ ಅಶೋಕ್, ತಾಪಂ ಇಒ ಸುದರ್ಶನ್ ಸೇರಿದಂತೆ ಗ್ರಾ.ಪಂ ಎಲ್ಲಾ ಸದಸ್ಯರು ಭಾಗವಹಿಸಿದ್ದರು.
ಕಾಂಗ್ರೆಸ್‌ಗೆ ಲಾಭವಾಗದು
ಡಂಬಳ(ಫೆ.12): ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಮತವಾಗಿ ಪರಿವರ್ತನೆಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ಡಂಬಳ ಮಂಡಳ ಅಧ್ಯಕ್ಷ ರವಿ ಕರಿಗಾರ ಹೇಳಿದರು.
ಡಂಬಳ ಹೋಬಳಿ ಡೋಣಿ, ಹಾರೂಗೇರಿ, ದಿಂಡುರತಾಂಡ ಗ್ರಾಮದಲ್ಲಿ ಶನಿವಾರ ಮನೆ ಮನೆಗೆ ತೆರಳಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಶದ ಜನತೆ ಮತ್ತೊಮ್ಮೆ ನರೇಂದ್ರಿ ಮೋದಿ ಪ್ರಧಾನ ಮಂತ್ರಿಯಾಗುವುದನ್ನು ಎದುರು ನೋಡುತ್ತಿದ್ದಾರೆ. ಪ್ರತಿಯೊಂದು ಜಾತಿ-ಧರ್ಮದವರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎನ್ನುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಕೇಂದ್ರದಲ್ಲಿ ಮತ್ತೆ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.
ಬಿಜೆಪಿಯಿಂದ ಧರ್ಮದ ಹೆಸರಿನಲ್ಲಿ ಜನರ ಮಧ್ಯೆ ವಿಷಬೀಜ ಬಿತ್ತುವ ರಾಜಕಾರಣ: ಸಚಿವ ಮಹದೇವಪ್ಪ
ದೇಶದಲ್ಲಿ ಭ್ರಷ್ಟಾಚಾರರಹಿತ ಆಡಳಿತ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ನೇರವಾಗಿ ಜಮಾ ಆಗುವುದು, ಆಯುಷ್ಮಾನ್ ಭಾರತ ಯೋಜನೆ, ಆರೋಗ್ಯ ರಕ್ಷಣೆ, ಕಿಸಾನ್ ಸಮ್ಮಾನ್ ಯೋಜನೆ, ಜಲಜೀವನ ಮಿಷನ್ ಯೋಜನೆ ಸೇರಿದಂತೆ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದ್ದು, ಇಡೀ ವಿಶ್ವದ ಜನ ಮೋದಿ ಆಡಳಿತವನ್ನು ಮೆಚ್ಚಿಕೊಂಡಿದ್ದು, ದೇಶದ ಭದ್ರತೆ, ಜನರ ಸುರಕ್ಷತೆ ಮತ್ತು ದೇಶದಲ್ಲಿ ಶಾಂತಿ ನೆಲೆಸಲು ಅಭಿವೃದ್ಧಿ ವೇಗ ಪಡೆಯಲು ಮತ್ತೊಮ್ಮೆ ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿಯಾಗಲು ಎಲ್ಲರೂ ಪಣ ತೊಡೋಣ ಎಂದರು.
ಈ ಸಮಯದಲ್ಲಿ ಸಿದ್ದನಗೌಡ ಪಾಟೀಲ, ಲಿಂಗನಗೌಡ ಹರ್ತಿ, ಪ್ರಭು ಕೊರ್ಲಹಳ್ಳಿ, ಈಶ್ವರಗೌಡ ಪಾಟೀಲ, ಪ್ರಕಾಶ ಓಲಿ, ಯಲ್ಲಪ್ಪ ಜಂಗಳಿ, ಜಗದೀಶ ತಳವಾರ, ರಮೇಶ ಹಡಪದ, ತೊಗರೆಪ್ಪ ಕೊರವರ, ಪ್ರಕಾಶ ಕೋತಂಬ್ರಿ, ನಾಗಪ್ಪ ಒಡ್ಡರ ಇದ್ದರು.