
ಹುಬ್ಬಳ್ಳಿ(ಜ.18): ಹುಬ್ಬಳ್ಳಿ- ಧಾರವಾಡ ಮಧ್ಯದ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ನಗರದ ಬೈಪಾಸ್ ಟೋಲ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಇಂದು(ಸೋಮವಾರ) ಪ್ರತಿಭಟನೆ ನಡೆಸಿದ್ದಾರೆ.
ಗಬ್ಬೂರು ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಕೈ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದೆ. ಉದ್ರಿಕ್ತರಾದ ಕಾಂಗ್ರೆಸ್ ಕಾರ್ಯಕರ್ತರು ವಾಹನಗಳ ಮೇಲೆ ಕಲ್ಲು ತೂರಲು ಮುಂದಾಗಿದ್ದರು. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿಲು ಮುಂದಾದಾಗ ಪೊಲೀಸರ ಜತೆ ಮಾತಿನ ಚಕಮಕಿ ನಡೆದಿದೆ.
ಮಾಜಿ ಸಿಎಂ ಪಟೇಲರ ಸಂಬಂಧಿ, ಇಂಜಿನಿಯರಿಂಗ್ ಸ್ಟೂಡೆಂಟ್ ಬಲಿಪಡೆದ ಟಿಪ್ಪರ್..ಕಣ್ಣೀರ ಕತೆಗಳು
ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದದಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ನಾಲ್ಕು ದಿನದ ಹಿಂದೆ ಇದೇ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದಾವಣಗೆರೆ ಮೂಲದ 12 ಜನ ಮೃತಪಟ್ಟಿದ್ದರು.