ಬಿಜೆಪಿ ಜೊತೆ ಕಾಂಗ್ರೆಸ್‌ ಮೈತ್ರಿ : ಭರ್ಜರಿ ಜಯ

Kannadaprabha News   | Asianet News
Published : Feb 27, 2020, 10:11 AM IST
ಬಿಜೆಪಿ ಜೊತೆ ಕಾಂಗ್ರೆಸ್‌ ಮೈತ್ರಿ : ಭರ್ಜರಿ ಜಯ

ಸಾರಾಂಶ

ರಾಷ್ಟ್ರ ರಾಜಕಾರಣದಲ್ಲಿ ವಿರುದ್ಧ ರಾಜಕೀಯ ನಡೆಸುವ ಬಿಜೆಪಿ ಕಾಂಗ್ರೆಸ್ ನಡುವೆ ಇಲ್ಲಿ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದು ಮೈತ್ರಿಕೂಟಕ್ಕೆ ಭರ್ಜರಿ ಜಯ ದೊರಕಿದೆ. 

ಸಕಲೇಶಪುರ [ಫೆ.27]: ತಾಲೂಕಿನ ಹೆತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಆಯ್ಕೆಯಾಗಿದ್ದಾರೆ.

ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿಯ ರಾಜ್ಯ ಪರಿಷತ್‌ ಸದಸ್ಯ ಎಚ್‌.ಎಂ. ವಿಜಯ್‌ಕುಮಾರ್‌ ಮತ್ತು ಉಪಾಧ್ಯಕ್ಷರಾಗಿ ಕೆ.ಕೆ. ಪ್ರಸನ್ನ ಆಯ್ಕೆಯಾಗಿದ್ದಾರೆ. 

ಸುದೀರ್ಘ ರಜೆಯಲ್ಲಿ ರಾಜ್ಯ ಕಾಂಗ್ರೆಸ್‌, ಚಟುವಟಿಕೆಗಳೂ ಬಂದ್!...

ಕಾಂಗ್ರೆಸ್‌ ಹಾಗೂ ಬಿಜೆಪಿ ಮೈತ್ರಿಕೂಟ ಇಲ್ಲಿ ಗೆಲುವು ಸಾಧಿಸಿದೆ. ಯುವ ಬಿಜೆಪಿ ಮುಖಂಡ ವಳಲಹಳ್ಳಿ ಅಶ್ವಥ್‌, ಗ್ರಾಪಂ ಅಧ್ಯಕ್ಷೆ ಮಹಾದೇವಮ್ಮ, ಮುಖಂಡರಾದ ಧರ್ಮರಾಜು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಕಬ್ಬಿನಹಳ್ಳಿ ಜಗದೀಶ್‌, ಮೇಲ್ವಿಚಾರಕ ನವೀನ್‌, ತಾಪಂ ಉಪಾಧ್ಯಕ್ಷ ಕೃಷ್ಣೇಗೌಡ ಸೇರಿದಂತೆ ಇತರೆ ನಿರ್ದೇಶಕರು ಇದ್ದರು.

ಕೊನೆಗೂ ಅಳೆದು ತೂಗಿ KPCC ಅಧ್ಯಕ್ಷರ ಆಯ್ಕೆ: ಅಧಿಕೃತ ಘೋಷಣೆಯೊಂದೇ ಬಾಕಿ.

ರಾಷ್ಟ್ರ ರಾಜಕೀಯದಲ್ಲಿ ವಿರುದ್ಧ ರಾಜಕೀಯ ನಡೆಸುವ ಎರಡು ರಾಷ್ಟ್ರೀಯ ಪಕ್ಷಗಳು ಇಲ್ಲಿ ಮೈತ್ರಿ ಮಾಡಿಕೊಂಡು ವಿಜಯ ಸಾಧಿಸಿವೆ. ಅಲ್ಲದೇ ಜೆಡಿಎಸ್ ಭದ್ರಕೋಟೆ ಎಂದು ಕರೆಸಿಕೊಳ್ಳುವ ಹಾಸನ ಕ್ಷೇತ್ರದಲ್ಲಿ ಈ ಬೆಳವಣಿಗೆಯಾಗಿದೆ.

PREV
click me!

Recommended Stories

ಆತಂಕದ ವಿಷಯ: ಬೆಂಗಳೂರಿನಲ್ಲಿ 11 ವರ್ಷದ ಮಕ್ಕಳಿಗೂ ಡ್ರಗ್ಸ್‌ ಚಟ!
ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!