ರಾಮನಗರ (ಸೆ.06): ನಗರಸಭೆಯ 4 ನೇ ವಾರ್ಡ್ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಜಯ ಒಲಿದಿದೆ.
ರಾಮನಗರದಲ್ಲಿ ಸದ್ಯ ಜೆಡಿಎಸ್ ಶಾಸಕರಿದ್ದರೂ ಕಾಂಗ್ರೆಸ್ ಅಭ್ಯರ್ಥಿ ತೇಜಸ್ವಿನಿ ಸುರೇಶ್ ಗೆಲವು ಸಾಧಿಸಿದ್ದು, ಡಿಕೆ ಬ್ರದರ್ಸ್ ರಾಜಕಾರಣ ಇಲ್ಲಿ ಕೆಲಸ ಮಾಡಿದೆ.
ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿಗೆ ಸೋಲುಂಟಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ತೇಜಸ್ವಿನಿ 899 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕೇವಲ 191 ಮತಗಳನ್ನು ಪಡೆಯುವ ಮೂಲಕ ಸೋಲಿಗೆ ಶರಣಾಗಿದ್ದಾರೆ.
ಶಕ್ತಿ ತೋರಿಸಿದ ಜಿಟಿಡಿ : ಕಾಂಗ್ರೆಸ್‌ಗೆ ಭರ್ಜರಿ ಗೆಲುವು
ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಇದ್ದರೂ ಅವರ ಕಾರ್ಯವೈಖರಿ ಇಲ್ಲಿ ವರ್ಕೌಟ್ ಅದಂತೆ ಕಾಣುತ್ತಿಲ್ಲ. ಡಿಕೆ ಬ್ರದರ್ಸ್ ಕ್ಷೇತ್ರವೆಂದೇ ಕರೆಸಿಕೊಳ್ಳುವ ರಾಮನಗರದಲ್ಲಿ ಕಾಂಗ್ರೆಸ್ ಪ್ರಾಭಲ್ಯ ಈ ಮೂಲಕ ಮತ್ತೊಮ್ಮೆ ಸಾಬೀತಾದಂತಾಗಿದೆ.