ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ 'ರೌಡಿ ಶೀಟರ್' ವಿವಾದ!

By Kannadaprabha News  |  First Published Nov 12, 2024, 11:39 AM IST

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ 184 ರೌಡಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಮುಚ್ಚಳಿಕೆ ಪತ್ರ ಬರೆಸಿಕೊಂಡು ಎಚ್ಚರಿಕೆ ನೀಡಲಾಗಿದೆ. ಚುನಾವಣೆ ಅಕ್ರಮಕ್ಕೆ ಸಂಬಂಧಿಸಿದಂತೆ 3 ಎಫ್ ಐಆರ್ ಹಾಗೂ 2 ಎನ್‌ಸಿಆರ್‌ ದಾಖಲಿಸಿಕೊಂಡಿದ್ದೇವೆ ಎಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ 


ಹಾವೇರಿ(ನ.12):  ಶಿಗ್ಗಾಂವಿ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಹೆಸರು ರೌಡಿಶೀಟರ್ ಪಟ್ಟಿಯಲ್ಲಿದೆ ಎಂಬ ವಿಷಯ ವಿವಾದಕ್ಕೆ ಕಾರಣವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕು ಮಾರ್ ಸ್ಪಷ್ಟನೆ ನೀಡಿದ್ದು, ವಿವಾದಕ್ಕೆ ತೆರೆ ಬಿದ್ದಿದೆ. 

ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾ‌ರ್ ಹಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮತದಾನದ ಭದ್ರತೆಗೆ ಕೈಗೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. 

Tap to resize

Latest Videos

undefined

3 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲುತ್ತೆ, ನೀವು ಎಲ್ಲಿ ಗೆಲ್ತೀರಿ ಹೇಳಿ ಸಿದ್ದು: ಯಡಿಯೂರಪ್ಪ

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ 184 ರೌಡಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಮುಚ್ಚಳಿಕೆ ಪತ್ರ ಬರೆಸಿಕೊಂಡು ಎಚ್ಚರಿಕೆ ನೀಡಲಾಗಿದೆ. ಚುನಾವಣೆ ಅಕ್ರಮಕ್ಕೆ ಸಂಬಂಧಿಸಿದಂತೆ 3 ಎಫ್ ಐಆರ್ ಹಾಗೂ 2 ಎನ್‌ಸಿಆರ್‌ ದಾಖಲಿಸಿಕೊಂಡಿದ್ದೇವೆ ಎಂದರು. 

ಈ ವೇಳೆ, ರೌಡಿಗಳ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರು ಇದೆಯಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, 'ಹೌದು ಇದೆ. ಸಂಬಂಧಪಟ್ಟ ಠಾಣೆಯ ಪೊಲೀಸರು, ಅವರಿಂದಲೂ ಮುಚ್ಚಳಿಕೆ ಬರೆಸಿಕೊಂಡಿರಬಹುದು ಎಂದರು. 
ಇದು ವಿವಾದಕ್ಕೆ ಕಾರಣವಾಯಿತು. ಬಿಜೆಪಿ ನಾಯಕರು ಪ್ರತಿಕ್ರಿಯಿಸಿ, ಶಿಗ್ಗಾಂವಿ ಅಭ್ಯರ್ಥಿ ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿ ಡವಿಟ್‌ನಲ್ಲಿ ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಕೇಸ್ ಇಲ್ಲ ಎಂದು ಹೇಳಿದ್ದಾರೆ. ಈಗ ಅವರ ಹೆಸರು ರೌಡಿಶೀಟರ್ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಿಎಂ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದರು. ಬಳಿಕ, ಸಂಜೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಎಸ್ಪಿ ಅಂಶುಕುಮಾ‌ರ್, ಶಿಗ್ಗಾಂವಿ ಕೈ ಅಭ್ಯರ್ಥಿ ಮೇಲೆ ಯಾವುದೇ ರೌಡಿಶೀಟರ್‌ ಕೇಸ್‌ ಇಲ್ಲ ಎಂದು ಸ್ಪಷ್ಟಪಡಿಸಿದರು. 

click me!