ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಬಾಗೇಪಲ್ಲಿ(ಮೇ 29): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಭವಿಷ್ಯ ನುಡಿದರು.
ಗುರುವಾರ ಬಾಗೇಪಲ್ಲಿ ಮತ್ತು ಗುಡಿಬಂಡೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣದ ದ್ವಾರಕ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಜೂನ್ 7ರಂದು ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವುದು ಸಂಪ್ರದಾಯವಾಗಿದೆ.
ಕೃಷಿಕರಲ್ಲಿ ಆತಂಕ ಹುಟ್ಟಿಸಿದ ಮಿಡತೆಗಳು: ಕೇಂದ್ರ ವಿಜ್ಞಾನಿಗಳ ತಂಡ ಸ್ಥಳಕ್ಕೆ ಭೇಟಿ
ಈ ಹಿಂದಿನ ಅಧ್ಯಕ್ಷರಾದವರು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮದಲ್ಲಿ ಅಧಿಕಾರವನ್ನು ಸ್ವೀಕರಿಸುತ್ತಿದ್ದರು ಆದರೆ ಇಡೀ ಜಗತ್ತನ್ನೇ ನಡಗುಸುತ್ತಿರುವ ಕೊರೋನಾದಿಂದಾಗಿ ಡಿ.ಕೆ.ಶಿವಕುಮಾರ್ ರವರು ಕೇವಲ ಕೆಲವೇ ಆಹ್ವಾನಿತರ ಸಮ್ಮುಖದಲ್ಲಿ ಸರಳವಾಗಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದರು.
ಶಾಸಕ ಎಸ್,ಎನ್.ಸುಬ್ಬಾರೆಡ್ಡಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷದ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರು ಕೈಬಲಪಡಿಸುವಂತೆ ಹಾಗೂ ಜೂನ್ 7ರಂದು ಕರ್ನಾಟಕ ಪ್ರದೇಶ ಸಮಿತಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ರವರು ಪದಗ್ರಹಣ ಮಾಡುವ ಕಾರ್ಯಕ್ರಮವನ್ನು ನಮ್ಮ ಕ್ಷೇತ್ರದಲ್ಲಿ ಅರ್ಧಪೂರ್ಣವಾಗಿ ಆಚರಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಉಡುಪಿಗೆ ಮತ್ತೆ 'ಮಹಾ' ಸೋಂಕು: ಒಂದೇ ದಿನ 27 ಪ್ರಕರಣಗಳು
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಉದಯ್ ಕುಮಾರ್, ಅಮರನಾಧರೆಡ್ಡಿ, ಜಿ.ಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಜಿ.ಪಂ ಸದಸ್ಯ ನರಸಿಂಹಪ್ಪ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಆರ್.ನರೇಂದ್ರ, ಕೋಚಿಮುಲ್ ನಿದೇರ್ಶಕ ಬಿ.ವಿ.ಮಂಜುನಾಥರೆಡ್ಡಿ ಮತ್ತಿತರರು ಭಾಗವಹಿಸಿದ್ದರು.