Chikkamagaluru; ಸಿದ್ದು ಕಾರಿಗೆ ಮೊಟ್ಟೆ ಎಸೆತ ಪ್ರಕರಣ, ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಮೊಟ್ಟೆ ವಿತರಣೆ

By Gowthami K  |  First Published Aug 22, 2022, 6:56 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಹೊಡೆದಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ವಿನೂತವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.


ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ಚಿಕ್ಕಮಗಳೂರು (ಆ.22): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತೀವೃಷ್ಟಿ ಪರಿಶೀಲನೆ ವೇಳೆ  ಬಿಜೆಪಿ ಮುಖಂಡರು, ಹಿಂದೂಪರ ಸಂಘಟನೆಗಳಿಂದ ಕಪ್ಪುಪಟ್ಟಿ ಪ್ರದರ್ಶನ ಹಾಗೂ ಮೊಟ್ಟೆ ಹೊಡೆದಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ವಿನೂತವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಮಾಜಿ  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನಡೆಸಿದ ಪ್ರತಿಭಟನೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಪ್ರದರ್ಶಿಸುವ ಮೂಲಕ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.  ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಬಿಜೆಪಿ ನಾಯಕರು ಹಾಗೂ ಸಂಘಪರಿವಾರದವರ ವಿರುದ್ದ ಘೋಷಣೆ ಕೂಗುತ್ತಾ ಮೆರವಣಿಗೆ ಮೂಲಕ ಸಾಗಿ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ರಸ್ತೆ ತಡೆ ವೇಳೆಯಲ್ಲಿ ಮೊಟ್ಟೆ ಪ್ರದರ್ಶನ ಮಾಡಿ ಬಿಜೆಪಿ, ಹಿಂದೂಪರ ಸಂಘಟನೆಗಳ ವಿರುದ್ದ ಆಕ್ರೋಶ ಹೊರಹಾಕಿದರು. 

Tap to resize

Latest Videos

ಸರ್ಕಾರಿ ಶಾಲೆಗೆ ಮೊಟ್ಟೆ ವಿತರಿಸಿ ವಿನೂತನ ಪ್ರತಿಭಟನೆ: ಪ್ರತಿಭಟನೆ ನಡೆಸಿದ ಬಳಿಕ ಕಾಂಗ್ರೇಸ್ ಕಾರ್ಯಕರ್ತರು ನಗರದ ರಾಮನಹಳ್ಳಿಯಲ್ಲಿ ಇರುವ ಸರ್ಕಾರಿ ಶಾಲೆಗೆ ತೆರಳಿ ಸರ್ಕಾರಿ ಶಾಲೆಗೆ ಮೊಟ್ಟೆ ವಿತರಿಸಿ ವಿನೂತನ ಪ್ರತಿಭಟನೆ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ಸತತ ಅತೀವೃಷ್ಟಿಯಿಂದ ಸಮಸ್ಯೆಯ ಧ್ವನಿಯಾಗಿ ನಿಲ್ಲಬೇಕಾಕಿದ್ದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರವಾಸ ಕೈಗೊಂಡು ರೈತರ ಕಷ್ಟಕೇಳುವ ಸಂದರ್ಭದಲ್ಲಿ ಮೊಟ್ಟೆ ಎಸೆದು , ಕಪ್ಪು ಪಟ್ಟಿ ಪ್ರದಶಿಸುವ ಮೂಲಕ ಅವಮಾನಿಸಿರುವುದಲ್ಲದೆ ಸರ್ಕಾರದ ಪ್ರಾಯೋಜಿತ ಪ್ರತಿಭಟನೆ ಮಾಡಿ ಕೀಳುಮಟ್ಟದ ರಾಜಕೀಯ ಹೋರಾಟವನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದುಗೆ ಮೊಟ್ಟೆ ಎಸೆತ ಬಗ್ಗೆ ತನಿಖೆ: ಸಿಎಂ ಬೊಮ್ಮಾಯಿ

ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೆರೆಹಾನಿ ಸ್ಥಳ ವೀಕ್ಷಣೆಗೆ ತೆರಳಿ ರೈತರ ಸಮಸ್ಯೆ ಆಲಿಸಲು ಮುಂದಾದರೆ ಬಿಜೆಪಿಗರು ಮೊಟ್ಟೆ ಎಸೆದು , ಕಪ್ಪುಪಟ್ಟಿ ಕಾರಿಗೆ ಹಾಕಿ ಅವಮಾನ ಮಾಡಿರುವುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಖಂಡಿಸಬೇಕು ಎಂದರು.

ಸಿದ್ದು ಕಾರಿಗೆ ಮೊಟ್ಟೆ ಎಸೆದಿದ್ದು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ದಾವಣೆಗೆರೆಯ ಸಿದ್ದರಾಮೋತ್ಸವದಲ್ಲಿ ಸೇರಿದ್ದ ಲಕ್ಷಾಂತರ ಜನರನ್ನು ನೋಡಿ ಬಿಜೆಪಿಗರು ತಲೆಕೆಡಿಸಿಕೊಂಡು ಹುಚ್ಚುಹಿಡಿದು ಮೊಟ್ಟೆ, ಕಪ್ಪುಪಟ್ಟಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದು ಅವರ ಕೊನೆ ಹಂತ ಹತಾಷರಾಗಿದ್ದಾರೆ ಎಂದರು. ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಸೇರಿದಂತೆ ಕಾಂಗ್ರೇಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

click me!