ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

By Sathish Kumar KH  |  First Published Jun 18, 2023, 7:23 PM IST

ರಾಜ್ಯ ಸರ್ಕಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ರಾಜ್ಯಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಹಾವೇರಿ (ಜೂ.18): ರಾಜ್ಯ ಸರ್ಕಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ರಾಜ್ಯಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನೂತನ ಶಾಲಾ ಕಟ್ಟಡಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ. ದರ ಕಟ್ಟಲಿಲ್ಲಾ ಎಂದರೆ ಕರೆಂಟ್ ಸಪ್ಲೆ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಆಗಿದೆ. ರೈತರಿಗೂ ಹಾಗೂ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ. ಜನಗಳಿಗೆ ಕುಡಿಯುವ ನೀರು ಸರಬರಾಜು ಆಗಲು ವಿದ್ಯುತ್ ಬೇಕು. ಬೋರ್ ವೆಲ್ ಗಳಿಂದ ಹಾಗೂ ಅನೇಕ ಕೆಲಸಗಳಿಗೆ ವಿದ್ಯುತ್ ಬೇಕೆ ಬೇಕು. ಸರ್ಕಾರ ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಆಹಾಕಾರ ಆಗುತ್ತದೆ. ಹೈಡ್ರೊ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ಹೀಗಾಗಿ ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕು. ಇವರು ಸರಿಯಾದ ಕ್ರಮ ತೆಗೆದಕೊಳ್ಳದಿದ್ದರೆ, ವಿದ್ಯುತ್ ಶಕ್ತಿಯ ಕ್ಷಾಮ ಆಗುತ್ತದೆ ಎಂದು ಹೇಳಿದರು.

Latest Videos

undefined

ಕಾಂಗ್ರೆಸ್‌ ಕೈಬಿಟ್ಟ ಪಠ್ಯಕ್ಕೆ ವಿಜಯಪುರ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಪಾಠವನ್ನು ಸೇರಿಸಿ

ಉಚಿತ ಕೊಡುಗೆ ಈಡೇರಿಕೆಯಲ್ಲಿ ಅಭಿವೃದ್ಧಿ ನಿಲ್ಲಿಸಬೇಡಿ: ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ‌ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಗೆ ಅನುದಾನ ಪಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕು. ಶಿಗ್ಗಾವಿ ಕ್ಷೇತ್ರದಲ್ಲಿ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಮಾಜಿ ಸಿಎಂ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. ನಾನು ರಾಜ್ಯದ ಭವಿಷ್ಯ ಬರೆಯುವ ದೇಗುಲಗಳ ಉದ್ಘಾಟನೆ ಮಾಡಿದ್ದೇನೆ‌ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಕ್ಷಣಕ್ಕೆ ಬಜೆಟ್‌ ಶೇ.13 ಅನುದಾನ ನೀಡಿದ್ದೇನೆ: ಒಂದು ಗ್ರಾಮಕ್ಕೆ ಕುಡಿಯುವ ನೀರು ಆರೋಗ್ಯದ ಜೊತೆಗೆ ಶಾಲಾ ಕೊಠಡಿಗಳು ಮುಖ್ಯವಾಗಿದೆ. ಅದಕ್ಕಾಗಿ ನಾನು ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ವಿವೇಕ ಯೋಜನೆ ಅಡಿಯಲ್ಲಿ  ಸುಮಾರು 9235 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶ ಮಾಡಿದ್ದೇವೆ. ರೈತನ ಭೂಮಿ ಎಷ್ಟಿದೆ ಅಷ್ಟೇ ಇದೆ. ಆದರೆ, ಕುಟುಂಬದ ಸದಸ್ಯರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಶಿಕ್ಷಣ ಅತ್ಯಂತ ಮುಖ್ಯ ಆದ್ದರಿಂದ ನಾನು ಶಿಕ್ಷಣಕ್ಕೆ 13% ಅನುದಾನ ನೀಡಿದ್ದೇನೆ. ಆರೋಗ್ಯ ಕ್ಷೇತ್ರಕ್ಕೆ 12% ಅನುದಾನ ನೀಡಿದ್ದೇನೆ ಎಂದರು.

ವಿದ್ಯುತ್ ದರ ಕಡಿಮೆಯಾಗಲ್ಲ ಎಂದ ಸಿಎಂ: ಕರ್ನಾಟಕ ಬಂದ್‌ಗೆ ಕರೆಕೊಟ್ಟ ಕೆಸಿಸಿಐ

ಸ್ವಂತ ಟ್ರಸ್ಟ್‌ನಿಂದ ಶಿಕ್ಷಕರನ್ನು ಕಳಿಸ್ತೇನೆ: ನಮ್ಮ ಅವಧಿಯಲ್ಲಿ 15,000 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಶಿಕ್ಷಕರ ಕೊರತೆ ಉಂಟಾದರೆ ನಮ್ಮ ಸ್ವಂತ ಟ್ರಸ್ಟ್‌ ನಿಂದ ಶಿಕ್ಷಕರನ್ನು ನೀಡಲಾಗುವುದು. ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಶೌಚಾಲಯ ನಿರ್ಮಾಣಕ್ಕೆ 250 ಕೋಟಿ ರೂ. ನೀಡಿದ್ದೇನೆ. ಪದವಿ ವರೆಗೆ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣಕ್ಕೆ ಅವಕಾಶ ನೀಡಲಾಗಿದೆ. ಬಸ್ ನಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಆಗಿರುವುದರಿಂದ ಎಲ್ಲ ವಿದ್ಯಾರ್ಥಿನಿಯರಿಗೂ ಅನುಕೂಲ ಆಗಿದೆ ಎಂದರು.

click me!