ನಾನು ಬಿಜೆಪಿ ತೊರೆದು, ಕಾಂಗ್ರೆಸ್ ಸೇರುತ್ತೇನೆಂಬುದು ಸುಳ್ಳು. ಇಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕಾರ್ಯಕರ್ತರಿಗೆ ಮಾಜಿ ಸಚಿವ ಜಿ.ಸಿ.ಮಾಧುಸ್ವಾಮಿ ತಿಳಿಸಿದರು.
ಚಿಕ್ಕನಾಯಕನಹಳ್ಳಿ : ನಾನು ಬಿಜೆಪಿ ತೊರೆದು, ಕಾಂಗ್ರೆಸ್ ಸೇರುತ್ತೇನೆಂಬುದು ಸುಳ್ಳು. ಇಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕಾರ್ಯಕರ್ತರಿಗೆ ಮಾಜಿ ಸಚಿವ ಜಿ.ಸಿ.ಮಾಧುಸ್ವಾಮಿ ತಿಳಿಸಿದರು. ನವೋದಯ ಪದವಿ ಕಾಲೇಜು ಆವರಣದಲ್ಲಿ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿ ಮಾತನಾಡಿದ ಅವರು ಬಿಜೆಪಿ ಪಕ್ಷ ಸಾಮಾನ್ಯ ಕಾರ್ಯಕರ್ತನಾದ ನನಗೆ ಎಲ್ಲಾ ರೀತಿಯ ಮಂತ್ರಿ ಪದವಿ, ಗೌರವ ನೀಡಿದ್ದು, ನನ್ನನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದೆ.
ಅಂತಹ ಪಕ್ಷವನ್ನು ತೊರೆದು ನಾನು ಪಕ್ಷಕ್ಕೆ ದ್ರೋ ಹ ಮಾಡುವುದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭವಿಷ್ಯವಿಲ್ಲ . ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಹೆಚ್ಚುಕಾಲ ಸರ್ಕಾರ ಅಸ್ತಿತ್ವದಲ್ಲಿರುವುದಿಲ್ಲ. ಉಭಯ ನಾಯಕರ ನಡುವೆ ಅಧಿಕಾರ ಹಂಚಿಕೆಯ ಒಳ ಜಗಳ ನಡೆಯುತ್ತಿದ್ದು, ಲೋಕಸಭಾ ಚುನಾವಣೆಯ ನಂತರ ಈ ಸರ್ಕಾರ ಪತನಗೊಳ್ಳುತ್ತದೆ ಎಂದರು.
undefined
ಬಿಜೆಪಿ - ಕಾಂಗ್ರೆಸ್ ಕದನ
ಬೆಂಗಳೂರು (ಜು.3) ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್ ನಡುವೆ ‘ಜಂಗೀ ಕುಸ್ತಿ’ ನಡೆಯುವ ಸಾಧ್ಯತೆಯಿದೆ.
ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ, ಎಪಿಎಂಸಿ ಕಾಯ್ದೆಯಂತಹ ವಿವಾದಿತ ಕಾಯಿದೆ ರದ್ದುಗೊಳಿಸಲು ತಿದ್ದುಪಡಿ ವಿಧೇಯಕಗಳ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕೆ ಪ್ರತಿಯಾಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪ ಸೇರಿದಂತೆ ವಿವಿಧ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅದಕ್ಕೆ ಆಡಳಿತ ಪಕ್ಷ ತಿರುಗೇಟು ನೀಡಲು ತಯಾರಾಗಿದೆ. ಹೀಗಾಗಿ ಹತ್ತು ದಿನಗಳ ಸದನದಲ್ಲಿ ‘ಗ್ಯಾರಂಟಿ ಕದನ’ ಖಚಿತ ಎಂಬಂತಾಗಿದೆ.
ನಾಳೆ ಸದನದ ಒಳಗೆ, ಹೊರಗೆ ಬಿಜೆಪಿ ‘ಗ್ಯಾರಂಟಿ ಹೋರಾಟ’: ಅಶ್ವತ್ಥನಾರಾಯಣ
ಗೃಹ ಜ್ಯೋತಿ, ಗೃಹ ಲಕ್ಷ್ಮೇ ಯೋಜನೆಗೆ ನಿಬಂಧನೆ ವಿಧಿಸಿರುವುದು, ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಬದಲು ಹಣ ನೀಡಲು ಮುಂದಾಗಿರುವುದು, ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಬಿಜೆಪಿ ಮುಗಿಬೀಳಲು ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ಸರ್ಕಾರದ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ, ಪ್ರತಿಪಕ್ಷ ಬಿಜೆಪಿಯಲ್ಲಿ ಉಂಟಾಗುತ್ತಿರುವ ಬಹಿರಂಗ ತಿಕ್ಕಾಟ, ಅಶಿಸ್ತಿನ ಹೇಳಿಕೆಗಳು, ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಯ ಪ್ರಹಸನ, ಹಿಂದಿನ ಸರ್ಕಾರದ ಹಗರಣ, ಬಡವರ ಪರ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರುವ ಪರಿ ವಿರುದ್ಧ ಬಲವಾಗಿ ತಿರುಗೇಟು ನೀಡಲು ಕಾಂಗ್ರೆಸ್ ಸಜ್ಜಾಗಿದೆ. ಹಣ ನೀಡಲು ಮುಂದಾದರೂ ಅಕ್ಕಿ ನೀಡದ ಕೇಂದ್ರ ಹಾಗೂ ಬಿಜೆಪಿಯವರ ನಿಲುವನ್ನು ಪ್ರಸ್ತಾಪಿಸಿ ಸರ್ಕಾರ ಪ್ರತಿದಾಳಿ ನಡೆಸುವ ಸಾಧ್ಯತೆಯಿದೆ.
ಅಧಿವೇಶನದ ಮೊದಲ ದಿನವಾದ ಸೋಮವಾರ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಭಾಷಣ ಮಾಡಲಿದ್ದಾರೆ. ಜು.3ರಿಂದ 14ರವರೆಗೆ 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಜು.7ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ