ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ಗೆ ಗ್ಯಾರೆಂಟಿಯೇ ಇಲ್ಲ : ರಾಜೇಶ್‌ ಗೌಡ

By Kannadaprabha News  |  First Published Apr 11, 2023, 8:12 AM IST

ಮಾಜಿ ಸಚಿವರು ಕಳೆದ ಹತ್ತು ವರ್ಷದ ತಮ್ಮ ಅಧಿಕಾರ ಅವಧಿಯಲ್ಲಿ 2500 ಕೋಟಿ ರೂಪಾಯಿ ಅನುದಾನದಿಂದ ಅಭಿವೃದ್ಧಿ ಕಾರ್ಯ ಮಾಡಿರುವುದಾಗಿ ಹೇಳುತ್ತಾರೆ. ಆದರೆ ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಅಂಗನವಾಡಿ, ಶಾಲೆಗಳು ಅಭಿವೃದ್ಧಿಯಾಗಿಲ್ಲ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಕಾರ್ಡ್‌ಗೆ ಯಾವ ಗ್ಯಾರಂಟಿನೂ ಇಲ್ಲ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.


 ಶಿರಾ : ಮಾಜಿ ಸಚಿವರು ಕಳೆದ ಹತ್ತು ವರ್ಷದ ತಮ್ಮ ಅಧಿಕಾರ ಅವಧಿಯಲ್ಲಿ 2500 ಕೋಟಿ ರೂಪಾಯಿ ಅನುದಾನದಿಂದ ಅಭಿವೃದ್ಧಿ ಕಾರ್ಯ ಮಾಡಿರುವುದಾಗಿ ಹೇಳುತ್ತಾರೆ. ಆದರೆ ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಅಂಗನವಾಡಿ, ಶಾಲೆಗಳು ಅಭಿವೃದ್ಧಿಯಾಗಿಲ್ಲ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಕಾರ್ಡ್‌ಗೆ ಯಾವ ಗ್ಯಾರಂಟಿನೂ ಇಲ್ಲ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

ಅವರು ತಾಲೂಕಿನ ಹುಲಿಕುಂಟೆ ಹೋಬಳಿಯ ತಡಕಲೂರು ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ನಾನು ಶಾಸಕನಾದ ಎರಡುವರೆ ವರ್ಷದಲ್ಲಿ ಕ್ಷೇತ್ರದಲ್ಲಿ 140 ಪರ್ಸೆಂಟ್‌ ಅಭಿವೃದ್ಧಿ ಮಾಡಿದ್ದೇನೆ. ಬಿಜೆಪಿ ಸರಕಾರ ಕೊಟ್ಟಮಾತಿನಂತೆ, ಮದಲೂರು ಕೆರೆಗೆ ಮೂರು ಬಾರಿ ಹೇಮಾವತಿ ನೀರು ಹರಿಸಿ ಶಿರಾ ತಾಲೂಕಿನ ಕುಡಿಯುವ ನೀರಿನ ಭವಣಿಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಿದೆ. 2023ರ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ರಾಜ್ಯದಲ್ಲಿ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಸರಕಾರ ರಚನೆ ಮಾಡಲಿದೆ. ಶಿರಾ ಕ್ಷೇತ್ರದ ಮತದಾರರು ಬಿಜೆಪಿ ಪರ ಇದ್ದು, ಮತ್ತೊಮ್ಮೆ ನನಗೆ ಅವಕಾಶ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

Tap to resize

Latest Videos

ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಧ್ಯಕ್ಷ ಚಂಗಾವರ ಮಾರಣ್ಣ, ಮಾತನಾಡಿದರು. ಟಿಎಪಿಎಂಎಸ್‌ ಅಧ್ಯಕ್ಷ ಹುಣಸೆಹಳ್ಳಿ ಶಿವಕುಮಾರ್‌, ನಗರಸಭೆ ಮಾಜಿ ಸದಸ್ಯ ಪ್ರಕಾಶ್‌ ಮುದ್ದುರಾಜ್‌, ಕಾಡುಗೊಲ್ಲ ಮುಖಂಡ ಶಶಿ, ಜಿಲ್ಲಾ ಉಪಾಧ್ಯಕ್ಷ ಗಿರಿಧರ, ಪ್ರಕಾಶ್‌ ಮಂಜುನಾಥ್‌, ಹನುಮಂತ ನಾಯಕ್‌, ಬೆಜ್ಜಿಹಳ್ಳಿ ಪರಮೇಶ್‌, ವೆಂಕಟೇಶ್‌, ಗ್ರಾಮ ಪಂಚಾಯತಿ ಸದಸ್ಯ ಶಿವಣ್ಣ, ದಿಬ್ಬದ ಹಟ್ಟಿಮಹೇಶ್‌ ಮಂಜುನಾಥ್‌ , ಜಗದೀಶ್‌, ಹಾಲು ಒಕ್ಕೂಟದ ಅಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷ ತೊರೆದು ಹಲವಾರು ಮುಖಂಡರು ಶಾಸಕ ರಾಜೇಶ್‌ ಗೌಡ ಸಮಕ್ಷಮದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಬಂಡಾಯಗಾರರಿಂದ ಪಕ್ಷಾಂತರ

ಬೆಂಗಳೂರು (ಏ.10): ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ನಂತರ ಪಕ್ಷದಲ್ಲಿ ಉದ್ಭವಿಸಿರುವ ಬಂಡಾಯ ಮುಂದುವರಿದಿದ್ದು, ಪಕ್ಷೇತರ, ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಬರೆದಿದೆ. ಧಾರವಾಡ ಜಿಲ್ಲೆ ಕಲಘಟಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದಕ್ಕೆ ಆಕ್ರೋಶಗೊಂಡಿರುವ ವಿಧಾನ ಪರಿಷತ್‌ ಮಾಜಿ ಸದಸ್ಯ ನಾಗರಾಜ ಛಬ್ಬಿ ಅವರು ದೆಹಲಿಯಲ್ಲಿ ಭಾನುವಾರ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ. ಇದೇ ವೇಳೆ, ಚಿತ್ರದುರ್ಗದಲ್ಲಿ ಟಿಕೆಟ್‌ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಅವರು ತಮ್ಮ ಪತ್ನಿ ಸೌಭಾಗ್ಯ ಬಸವರಾಜನ್‌ ಅವರನ್ನು ಪಕ್ಷೇತರರನ್ನಾಗಿ ಕಣಕ್ಕಿಳಿಸುವ ಘೋಷಣೆ ಮಾಡಿದ್ದಾರೆ. 

ಈ ಮಧ್ಯೆ, ಕಡೂರಿನಲ್ಲಿ ಟಿಕೆಟ್‌ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ವೈ.ಎಸ್‌.ವಿ.ದತ್ತ, ಸ್ವಾಭಿಮಾನದ ಸಂಕೇತವಾಗಿ ‘ಟವೆಲ್‌’ ಚಿಹ್ನೆಯಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಈ ನಡುವೆ, ಚಿತ್ರದುರ್ಗದಲ್ಲಿ ಭಾನುವಾರ ವಿಧಾನಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್‌ ಅವರು ಬೆಂಬಲಿಗರ ಸಭೆ ನಡೆಸಿದ್ದು, ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬೆಂಬಲಿಗರು ಸಲಹೆ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟ?: ಅಭ್ಯರ್ಥಿ ಅಂತಿಮಗೊಳಿಸಲು ಮೋದಿ 2 ಗಂಟೆ ಕಸರತ್ತು

ಕಮಲ ಹಿಡಿದ ಛಬ್ಬಿ: ಕಲಘಟಗಿ ಕ್ಷೇತ್ರದಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ವಿಧಾನಪರಿಷತ್‌ ಮಾಜಿ ಸದಸ್ಯ ನಾಗರಾಜ ಛಬ್ಬಿ ಅವರು ದೆಹಲಿಯಲ್ಲಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಅವರು ಬಿಜೆಪಿಯಿಂದ ಕಲಘಟಗಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಮಧ್ಯೆ, ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಭಾನುವಾರ ಅಭಿಮಾನಿಗಳ ಸಭೆ ನಡೆಸಿದ ಮಾಜಿ ಶಾಸಕ ವೈ.ಎಸ್‌.ವಿ.ದತ್ತ, ಮುಂದಿನ ಚುನಾವಣೆಯಲ್ಲಿ ಕಡೂರಿನಿಂದ ‘ಟವೆಲ್‌’ ಚಿಹ್ನೆಯಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದರು. 

ಈ ಮಧ್ಯೆ, ಚಿತ್ರದುರ್ಗದಲ್ಲಿ ಟಿಕೆಟ್‌ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಎಸ್‌.ಕೆ. ಬಸವರಾಜನ್‌ ಅವರು, ತಮ್ಮ ಪತ್ನಿ ಸೌಭಾಗ್ಯ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ. ಇದೇ ವೇಳೆ, ವಿಧಾನಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್‌ ಅವರು ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಬೆಂಬಲಿಗರ ಸಭೆ ನಡೆಸಿದರು. ಚುನಾವಣೆಯಲ್ಲಿ ಜೆಡಿಎಸ್‌ನಿಂದಲೇ ಸ್ಪರ್ಧಿಸುವಂತೆ ಬೆಂಬಲಿಗರು ಅವರಿಗೆ ಸಲಹೆ ನೀಡಿದರು. ಇದೇ ವೇಳೆ, ಬೇಲೂರಿನಲ್ಲಿ ಅಭಿಮಾನಿಗಳ ಸಭೆ ನಡೆಸಿದ ಗ್ರಾನೈಟ್‌ ರಾಜಶೇಖರ್‌, ಬಂಡಾಯ ಅಭ್ಯರ್ಥಿಯಾಗಿ ಸ್ಪ​ರ್ಧಿಸುವ ಕುರಿತು ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. 

click me!