ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಉಡುಪಿಯಲ್ಲಿನ ಮಹಿಳೆಯರಿಗೂ ಯೋಜನೆಯ ಲಾಭ ಸಿಗಬೇಕು. ಹಾಗಾಗಿ ಖಾಸಗಿ ಬಸ್ ಗಳಿಗೂ ಉಚಿತ ಪ್ರಯಾಣ ಯೋಜನೆಯ ಲಾಭ ವಿಸ್ತರಿಸಬೇಕು ಎಂದು ಮಹಿಳೆಯರು ಒತ್ತಾಯಿಸಿದ್ದಾರೆ.
ವರದಿ- ಶಶಿಧರ ಮಾಸ್ತಿಬೈಲು ಏಷ್ಯಾ ನೆಟ್ ಸುವರ್ಣ ನ್ಯೂಸ್
ಉಡುಪಿ (ಜೂ.1) : ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಆದರೆ ಕರಾವಳಿ ಜಿಲ್ಲೆಗಳು ಅದರಲ್ಲೂ ಉಡುಪಿ ಜಿಲ್ಲೆಯ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ. ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ಪ್ರದೇಶದ ಮಹಿಳೆಯರಿಗೂ ಯೋಜನೆಯ ಲಾಭ ಸಿಗಬೇಕು. ಹಾಗಾಗಿ ಖಾಸಗಿ ಬಸ್ ಗಳಿಗೂ ಉಚಿತ ಪ್ರಯಾಣ ಯೋಜನೆಯ ಲಾಭ ವಿಸ್ತರಿಸಬೇಕು ಎಂದು ಮಹಿಳೆಯರು ಒತ್ತಾಯಿಸಿದ್ದಾರೆ.
undefined
ಉಡುಪಿ ಜಿಲ್ಲೆಯಲ್ಲಿ ಶೇಕಡ 90ರಷ್ಟು ಖಾಸಗಿ ಬಸ್ ಗಳೇ ಸಂಚಾರ ನಡೆಸುತ್ತವೆ. ಜಿಲ್ಲೆಯ ಮೂಲೆ ಮೂಲೆ ಗ್ರಾಮಗಳಿಗೂ, ಖಾಸಗಿ ಬಸ್ಸುಗಳು ಓಡಾಟ ನಡೆಸುತ್ತವೆ. ಈ ಬಸ್ ಗಳಲ್ಲಿ ಮಹಿಳೆಯರೇ ಹೆಚ್ಚು ಸಂಚಾರ ನಡೆಸುತ್ತಾರೆ. ಹಾಗಾಗಿ ಉಚಿತ ಪ್ರಯಾಣದ ಲಾಭ ಕರಾವಳಿ ಜಿಲ್ಲೆಗಳ ಮಹಿಳೆಯರಿಗೆ ಸಿಗುತ್ತಿಲ್ಲ.
ಮಹಿಳೆಯರಿಗೆ ಉಚಿತ ಪ್ರಯಾಣ: ಖಾಸಗಿ ಬಸ್‌ಗಳಿಗೆ ನಷ್ಟದ ಆತಂಕ
ಎರಡು ದಿನಗಳ ಹಿಂದೆ ಮಾಜಿ ಸಚಿವ ಕಾರ್ಕಳ ಶಾಸಕ ಸುನಿಲ್ ಕುಮಾರ್(Sunil kumar karkal MLA) ಈ ಕುರಿತು ಟ್ವೀಟ್ ಮಾಡಿದ್ದರು. ಖಾಸಗಿ ಬಸ್ ನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಬೇಕೆಂದು ಒತ್ತಾಯಿಸಿದ್ದರು. ಆದರೆ ಸರಕಾರದ ನೆರವಿಲ್ಲದೆ ಖಾಸಗಿ ಬಸ್ಸುಗಳು ಉಚಿತ ಪ್ರಯಾಣ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ.
ಸರಕಾರ ಸಹಕರಿಸಿದರೆ ನಾವು ರೆಡಿ! - ಖಾಸಗಿ ಬಸ್ ಮಾಲಕರು
ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆಗೊಳಿಸಲು ನಾವು ಸಿದ್ಧ, ಆದರೆ ಕಂಡಿಷನ್ಸ್ ಅಪ್ಲೈ.... ಎಂದು ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಖಾಸಗಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ನಮ್ಮ ಸಹಮತ ಇದೆ.ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ನಮ್ಮ ಸಹಮತ ಇದೆ.ಕರಾವಳಿ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಖಾಸಗಿ ಬಸ್ ಸಂಚಾರ ಇದೆ.
ಸರ್ಕಾರದ ವಾಗ್ದಾನದ ಪ್ರಕಾರ ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಘೋಷಣೆ ಯಾಗಿದೆ. ಸರಕಾರಿ ಬಸ್ಸುಗಳಿಗೆ ಕೊಡುವ ಅನುಕೂಲ ಖಾಸಗಿ ಬಸ್ಸುಗಳಿಗೂ ನೀಡಿ ಎಂದು ಆಗ್ರಹಿಸಿದ್ದಾರೆ.
ಹಣದ ರೂಪದಲ್ಲಿ ಅಲ್ಲವಾದರೂ ತೆರಿಗೆ ವಿನಾಯಿತಿ, ಡೀಸೆಲ್ ಸಬ್ಸಿಡಿ ರೂಪದಲ್ಲಿ ಕೊಡಿ.ನಮಗೆ ಆಗುವ ಹೊರೆಯನ್ನು ತುಂಬಿಸಿಕೊಟ್ಟರೆ ಉಚಿತ ಪ್ರಯಾಣಕ್ಕೆ ನಾವು ಸಿದ್ಧ.
ಇಲ್ಲವಾದರೆ ಖಾಸಗಿ ಬಸ್ಸುಗಳು ಓಡಾಡುವ ಜಿಲ್ಲೆಗಳ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗುತ್ತಾರೆ ಎಂದು ಸುರೇಶ ನಾಯಕ್ ಗಮನ ಸೆಳೆದಿದ್ದಾರೆ.
ಕೆ ಎಸ್ ಆರ್ ಟಿ ಸಿ ಗೆ ಅನುಸರಿಸುವ ಮಾನದಂಡ ನಮಗೂ ಅನುಸರಿಸಿ. ಉಚಿತವಾಗಿ ವ್ಯವಸ್ಥೆ ಕಲ್ಪಿಸಲು ನಾವು ತಯಾರಿದ್ದೇವೆ.ಹತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು ಖಾಸಗಿ ಬಸ್ ಇವೆ.ಏಳು ಜಿಲ್ಲೆಗಳಲ್ಲಿ ಖಾಸಗಿ ಬಸ್ಸುಗಳು ಭಾಗಶಹ ಇವೆ.ಮಂಗಳೂರು ಉಡುಪಿ ಶಿವಮೊಗ್ಗ ತುಮಕೂರು ಭಾಗದಲ್ಲಿ ಹೆಚ್ಚು ಖಾಸಗಿ ಬಸ್ಸುಗಳಿವೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ನೀವು ಹೇಳಿರುವ ಉಚಿತ ಸಮಗ್ರ ಜಾರಿಯಾಗಬೇಕು ಎಂದಿದ್ದಾರೆ .
ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಬಸ್ ನಲ್ಲಿ ಫ್ರೀ, ಯಾವುದೇ ಕಂಡೀಶನ್ ಇಲ್ಲ: ಸಾರಿಗೆ ಸಚಿವ ರೆಡ್ಡಿ
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ಕೊಯ್ಲಾಡಿ ಸುರೇಶ್ ನಾಯಕ್ ,ಈ ಯೋಜನೆ ಸರಕಾರಕ್ಕೆ ಹೊರೆಯಾಗಬಹುದು.ಅಭಿವೃದ್ಧಿ ಕುಂಠಿತವು ಆಗಬಹುದು.ಉಚಿತ ಅನ್ನುವ ವ್ಯವಸ್ಥೆ ಮುಂದೆ ದೇಶಕ್ಕೆ ಮಾರಕವೂ ಆಗಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.