* ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್
* ಪಾಲಿಕೆಯ 45 ವಾರ್ಡ್ ಗಳಲ್ಲಿ ಸಮಸ್ಯೆ ಹೇಳತೀರದಾಗಿದೆ
* ಸಾರ್ವಜನಿಕರ ಸಮಸ್ಯೆ ಕೇಳದ ಮೇಯರ್
ದಾವಣಗೆರೆ(ಜು.09): ದಾವಣಗೆರೆ ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷದ ಆಡಳಿತ ಸಂಪೂರ್ಣ ದಿವಾಳಿಯಾಗಿದ್ದು ಈ ಕೂಡಲೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡರು ಪಾಲಿಕೆ ಸದಸ್ಯರು ಮುಖ್ಯ ದ್ವಾರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಜಿ ಎಸ್ ಮಂಜುನಾಥ್ ಗಡಿಗುಡಾಳ್ 5ತಿಂಗಳಾದರೂ ಸಹ ಪಾಲಿಕೆಯಲ್ಲಿ ಸಾಮಾನ್ಯ ಸಭೆ ಕರೆದಿಲ್ಲ. ಇದರಿಂದಾಗಿ ನಗರದಾದ್ಯಂತ ಸಮಸ್ಯೆಗಳು ಉದ್ಭವಿಸುತ್ತವೆ. ಈ ಬಗ್ಗೆಯೂ ಆಡಳಿತ ಪಕ್ಷ ಗಮನಹರಿಸಿಲ್ಲ ಎಂದು ದೂರಿದರು.
BIG 3: ಶಾಲೆಯ ಪಕ್ಕದಲ್ಲಿ ಡೆಡ್ಲಿ ವಾಟರ್ ಟ್ಯಾಂಕ್, ಜೀವಭಯದಲ್ಲಿ ಮಕ್ಕಳು..!
ಕಾಂಗ್ರೆಸ್ ಪಾಲಿಕೆ ಸದಸ್ಯ ಎ.ನಾಗರಾಜ್ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ಕೇಳದ ಮೇಯರ್ ಸೇರಿದಂತೆ ಪಾಲಿಕೆ ಅಧಿಕಾರಿಗಳು ಯಾವುದೇ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಆಡಳಿತ ನಡೆಸುತ್ತಿರುವ ಬಿಜೆಪಿ ಆಡಳಿತ ಈ ಕೂಡಲೇ ತೊಲಗಬೇಕು. ಕೇವಲ ತಮ್ಮ ಪಕ್ಷದ ಜನಪ್ರತಿನಿಧಿಗಳ ಹುಟ್ಟುಹಬ್ಬಗಳನ್ನು ಆಚರಿಸುವ ಕೊಳ್ಳುವಲ್ಲಿ ಮಗ್ನನಾಗಿರುವ ಮೇಯರ್ ಹಾಗೂ ಆಡಳಿತ ಪಕ್ಷ ಯಾವುದೇ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.
ಕಾಂಗ್ರೆಸ್ ಮುಖಂಡ ಅಬ್ದುಲ್ ಲತೀಫ್ ಮಾತನಾಡಿ, ಮಹಾನಗರ ಪಾಲಿಕೆಯ 45 ವಾರ್ಡ್ ಗಳಲ್ಲಿ ಸಮಸ್ಯೆ ಹೇಳತೀರದಾಗಿದೆ. ಈ ಕುರಿತಂತೆ ಅಧಿಕಾರಿಗಳಿಗೆ ಕರೆ ಮಾಡದರೆ ಯಾರು ಫೋನ್ ತಗೆದುಕೊಳ್ಳುವುದಿಲ್ಲ. ಇದರಿಂದಾಗಿ ವಾರ್ಡುಗಳಲ್ಲಿ ಜನರು ನಮ್ಮನ್ನು ದೂರುತ್ತಿದ್ದಾರೆ. ಕಾರಣ ಇದನ್ನು ಖಂಡಿಸಿ ನಾವು ಮಹಾನಗರ ಪಾಲಿಕೆ ಆವರಣಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.