ಕಾಂಗ್ರೆಸ್‌ ಭ್ರಷ್ಟಾಚಾರದ ರಾಯಭಾರಿ ಇದ್ದಂತೆ; ಸಚಿವ ಶ್ರೀರಾಮುಲು ಟೀಕೆ

Published : Jan 27, 2023, 10:42 AM IST
 ಕಾಂಗ್ರೆಸ್‌ ಭ್ರಷ್ಟಾಚಾರದ ರಾಯಭಾರಿ ಇದ್ದಂತೆ; ಸಚಿವ ಶ್ರೀರಾಮುಲು ಟೀಕೆ

ಸಾರಾಂಶ

ಕಾಂಗ್ರೆಸ್‌ ಭ್ರಷ್ಟಾಚಾರದ ರಾಯಭಾರಿ ಇದ್ದಂತೆ. ಕಾಂಗ್ರೆಸ್ಸಿನ ಡಿಎನ್‌ಎಯಲ್ಲಿಯೇ ಭ್ರಷ್ಟಾಚಾರ ಅಡಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.

ಬಳ್ಳಾರಿ (ಜ.27) : ಕಾಂಗ್ರೆಸ್‌ ಭ್ರಷ್ಟಾಚಾರದ ರಾಯಭಾರಿ ಇದ್ದಂತೆ. ಕಾಂಗ್ರೆಸ್ಸಿನ ಡಿಎನ್‌ಎಯಲ್ಲಿಯೇ ಭ್ರಷ್ಟಾಚಾರ ಅಡಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.

ಇಲ್ಲಿನ ವಿಮ್ಸ್‌ ಮೈದಾನದಲ್ಲಿ ಗುರುವಾರ ಜರುಗಿದ 74ನೇ ಗಣರಾಜ್ಯೋತ್ಸವ ಸಮಾರಂಭ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಕಾಂಗ್ರೆಸ್‌ ನಾಯಕರ ಹೇಳಿಕೆಗಳನ್ನು ಗಮನಿಸಿದರೆ, ‘ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ’ ಎಂದು ಲೇವಡಿ ಮಾಡಿದರು.

ಬಿಜೆಪಿ ಎಂಬ ಬುಲ್ಡೋಜರ್‌ ಕಾಂಗ್ರೆಸನ್ನು ನೆಲಸಮ ಮಾಡಲಿದೆ: ಸಚಿವ ಶ್ರೀರಾಮುಲು

ಬಿಜೆಪಿ(BJP)ಯ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಕಾಂಗ್ರೆಸ್ಸಿನವರಿಗಿಲ್ಲ. ಬೌದ್ಧಿಕವಾಗಿ ದಿವಾಳಿಯಾಗಿರುವ ಕಾಂಗ್ರೆಸ್‌ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿನವರ ರಕ್ತದ ಕಣಕಣದಲ್ಲೂ ಭ್ರಷ್ಟಾಚಾರ ಅಡಗಿದ್ದು ಕಾಂಗ್ರೆಸ್‌ ನಾಯಕರ ಡಿಎನ್‌ಎ ಪರೀಕ್ಷೆ ಮಾಡಿದರೆ ಅವರ ಭ್ರಷ್ಟಾಚಾರ ಬಯಲಾಗುತ್ತದೆ ಎಂದರು.

ಡಿ.ಕೆ.ಶಿವಕುಮಾರ್‌(DK Shivakumar) ಹಾಗೂ ಸಿದ್ಧರಾಮಯ್ಯ(Siddaramaiah)ನವರ ದೋಸ್ತಿ ಹೊರ ನೋಟಕ್ಕಷ್ಟೇ. ಶೀಘ್ರದಲ್ಲಿಯೇ ಅವರ ನಿಜಬಣ್ಣ ಬಯಲಾಗಲಿದೆ. ಸಿದ್ದರಾಮಯ್ಯಗೆ ಸ್ಪರ್ಧೆ ಮಾಡಲು ಕ್ಷೇತ್ರವೇ ಸಿಗುತ್ತಿಲ್ಲ. ಅಲ್ಲಲ್ಲಿ ಓಡಾಡಿಕೊಂಡಿದ್ದಾರೆ. ಕೋಲಾರದಲ್ಲೂ ಸ್ಪರ್ಧೆ ಮಾಡುವುದಿಲ್ಲ. ಮತ್ತೆ ಅಲ್ಲಿಂದ ಬೇರೆ ಕ್ಷೇತ್ರ ಹುಡುಕಾಟ ನಡೆಸಲಿದ್ದಾರೆ ಎಂದು ತಿಳಿಸಿದರು.

Bellary Utsav 2023: ಇಂದು ಬಳ್ಳಾರಿ ಉತ್ಸವದ ಸಮಾರೋಪ ಸಮಾರಂಭ

ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಎಸ್ಪಿ ರಂಜಿತ್‌ಕುಮಾರ್‌ ಬಂಡಾರು ಇತರರಿದ್ದರು.

PREV
Read more Articles on
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ