ಬಿಜೆಪಿ ಸೇರಲು ಕೈ-ದಳ ಶಾಸಕರ ಒಲವು : ಆರ್. ಅಶೋಕ್‌

By Kannadaprabha NewsFirst Published Nov 2, 2022, 5:24 AM IST
Highlights

ಬಿಜೆಪಿಯು ನೀಡಿದ ಸದೃಢ ಆಡಳಿತವನ್ನು ಮೆಚ್ಚಿ ಜೆಡಿಎಸ್‌-ಕಾಂಗ್ರೆಸ್‌ ಪಕ್ಷದವರು ಬಿಜೆಪಿ ಸೇರುವುದಕ್ಕೆ ಒಲವು ವ್ಯಕ್ತಪಡಿಸಿದ್ದಾರೆ. ಡಿಸೆಂಬರ್‌ ವೇಳೆಗೆ ಅಂತಿಮ ಚಿತ್ರಣ ಹೊರಬೀಳಲಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

  ಮಂಡ್ಯ (ನ.02): ಬಿಜೆಪಿಯು ನೀಡಿದ ಸದೃಢ ಆಡಳಿತವನ್ನು ಮೆಚ್ಚಿ ಜೆಡಿಎಸ್‌-ಕಾಂಗ್ರೆಸ್‌ ಪಕ್ಷದವರು ಬಿಜೆಪಿ ಸೇರುವುದಕ್ಕೆ ಒಲವು ವ್ಯಕ್ತಪಡಿಸಿದ್ದಾರೆ. ಡಿಸೆಂಬರ್‌ ವೇಳೆಗೆ ಅಂತಿಮ ಚಿತ್ರಣ ಹೊರಬೀಳಲಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷ ಸೇರಲು ಬಯಸಿರುವ ಕಾಂಗ್ರೆಸ್‌- ಜೆಡಿಎಸ್‌ ಪಕ್ಷದ ಪ್ರಮುಖರ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದೇವೆ. ಡಿಸೆಂಬರ್‌ ವೇಳೆಗೆ ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರವಾಗಲಿದೆ ಎಂದು ತಿಳಿಸಿದರು.

Latest Videos

ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೆ.ಸಿ.ನಾರಾಯಣಗೌಡರು ಗೆದ್ದು ತೋರಿಸಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಇನ್ನಷ್ಟುಒಳ್ಳೆಯ ನಾಯಕರು ಬಿಜೆಪಿ ಸೇರಲಿದ್ದು, ಬಿಜೆಪಿಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಜಿಲ್ಲೆಯ ಮತ್ತಷ್ಟುಕ್ಷೇತ್ರಗಳಲ್ಲಿ ಬಿಜೆಪಿ ಅರಳುವುದು ನಿಚ್ಚಳವಾಗಿದೆ. ಶ್ರೀರಂಗಪಟ್ಟಣ ಕ್ಷೇತ್ರದ ಎಸ್‌.ಸಚ್ಚಿದಾನಂದ ಅವರೂ ಶೀಘ್ರದಲ್ಲೇ ಬಿಜೆಪಿ ಸೇರುವುದಾಗಿ ಹೇಳಿದರು.

ಅತಂತ್ರ ಸರ್ಕಾರದ ಸ್ಥಿತಿ ಬಗ್ಗೆ ಜನರಿಗೆ ಗೊತ್ತಿದೆ. 2006ರಲ್ಲಿ ಬಿಜೆಪಿ ಜೆಡಿಎಸ್‌ ಜೊತೆ ಸೇರಿ ಸರ್ಕಾರ ಮಾಡಿದ್ದೆವು. ಅಂದು ಮೋಸ ಮಾಡಿ ಸರ್ಕಾರ ಬೀಳಿಸಿದರು. 2018ರಲ್ಲಿ ಮತ್ತೆ ಕಾಂಗ್ರೆಸ್‌ ಜೊತೆ ಸೇರಿ ಜೆಡಿಎಸ್‌ ಸರ್ಕಾರ ರಚನೆ ಮಾಡಿದರು. ಅದೂ ಬಿದ್ದುಹೋಯಿತು. ಈ ಕಾರಣದಿಂದ ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರು ಸ್ಪಷ್ಟಬಹುಮತ ನೀಡಲಿದ್ದು, ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವುದು ಖಚಿತ ಎಂದು ಹೇಳಿದರು.

ಅತಂತ್ರ ಸರ್ಕಾರ ಬಾರದು:

ಬಿಜೆಪಿಯೊಳಗೆ ಮುಂದಿನ ಚುನಾವಣೆಗೆ ಪೂರ್ವಸಿದ್ಧತೆಗಳು ಆರಂಭಗೊಂಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್‌ ಶಾ, ನಡ್ಡಾ, ಯಡಿಯೂರಪ್ಪ ಸೇರಿದಂತೆ ಎಲ್ಲರೂ ಚುನಾವಣೆ ತಯಾರಿ ನಡೆಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಅತಂತ್ರ ಸರ್ಕಾರ ಇನ್ನು ಯಾವತ್ತೂ ಬರುವುದಿಲ್ಲ ಎಂದು ದೃಢವಾಗಿ ಹೇಳಿದರು.

ಮಾಲಿಕತ್ವ ಇಲ್ಲ

ಬಗರ್‌ ಹುಕುಂ ಸಾಗುವಳಿ ಹೆಸರಿನಲ್ಲಿ ನಡೆಯುತ್ತಿರುವ ಸರ್ಕಾರಿ ಜಮೀನು ಕಬಳಿಕೆ ತಡೆಗೆ ಮುಂಬರುವ ಅಧಿವೇಶನದಲ್ಲೇ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತರಲು ವಿಧೇಯಕ ಮಂಡಿಸಲಾಗುವುದು. ತನ್ಮೂಲಕ ಸರ್ಕಾರಿ ಭೂ ಮಂಜೂರಾತಿಗೆ ಅರ್ಜಿ ಸಲ್ಲಿಸುವ ಸಾಗುವಳಿದಾರರಿಗೆ ಮಾಲೀಕತ್ವದ ಹಕ್ಕು ನೀಡದೆ ಕೇವಲ ಗುತ್ತಿಗೆ ಆಧಾರದ ಮೇಲೆ ಭೂಮಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಇದರಿಂದ ಹೊಸದಾಗಿ ಸರ್ಕಾರಿ ಭೂಮಿ ಒತ್ತುವರಿಯಾಗುವುದನ್ನು ತಡೆಯಬಹುದು. 

ಜತೆಗೆ ಪ್ರಸ್ತುತ ಸಾಗುವಳಿದಾರರಿಂದ ಸಾಗುವಳಿ ಆಗುತ್ತಿರುವ ಸರ್ಕಾರಿ ಜಮೀನನ ಮಾಲೀಕತ್ವವೂ ಸರ್ಕಾರದ ಬಳಿಯೇ ಉಳಿಯಲಿದ್ದು, ಗುತ್ತಿಗೆ ಆಧಾರದ ಮೇಲೆ ಸಾಗುವಳಿಗೆ ನೀಡುವುದರಿಂದ ಆದಾಯವೂ ಬರಲಿದೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ಸರ್ಕಾರಿ ಗೋಮಾಳ, ಬೆಟ್ಟ, ಗುಡ್ಡ, ಅರಣ್ಯ ಪ್ರದೇಶದ ಜಾಗದಲ್ಲಿ ದೀರ್ಘಾವಧಿ ಕಾಲದಿಂದ ಸಾಗುವಳಿ ಮಾಡುತ್ತಿದ್ದೇವೆ ಎಂದು ಅರ್ಜಿ ಸಲ್ಲಿಸಿ ಸರ್ಕಾರ ಜಮೀನನ್ನು ಮಂಜೂರು ಮಾಡಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಭೂ ರಹಿತ ರೈತರ ಜತೆಗೆ ಸರ್ಕಾರಿ ಜಮೀನು ಕಬಳಿಕೆ ಮಾಡುವ ಮಾಫಿಯಾವು ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಇದರಿಂದ ಬಹುತೇಕ ಜಿಲ್ಲೆಗಳಲ್ಲಿ ಸರ್ಕಾರಿ ಜಮೀನುಗಳೇ ಖಾಲಿಯಾಗುವ ಸ್ಥಿತಿ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪರಿಷ್ಕೃತ ಪಠ್ಯಪುಸ್ತಕ ವಾಪಸಿಲ್ಲ: ಸಚಿವ ಅಶೋಕ್‌

ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯಲ್ಲಿ 40 ಸಾವಿರ ಎಕರೆ, ಹಾಸನದಲ್ಲಿ 50 ಸಾವಿರ ಎಕರೆ, ಕೊಡಗು 9 ಸಾವಿರ ಎಕರೆ ಭೂಮಿಗೆ ಬಗರ್‌ ಹುಕುಂ ಅಡಿ ಅರ್ಜಿ ಸಲ್ಲಿಸಿದ್ದಾರೆ. ಈ ರೀತಿ ಲಕ್ಷಾಂತರ ಎಕರೆ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಅರ್ಜಿಗಳು ಬಂದಿವೆ. ಈ ರೀತಿ ಸರ್ಕಾರಿ ಜಮೀನು ಖಾಸಗಿಯವರ ಪಾಲಾಗುವುದನ್ನು ತಡೆಯಲು ಕಾನೂನು ತರಲಾಗುತ್ತಿದೆ. ಈ ಕಾಯಿದೆ ಈಗಾಗಲೇ ಅರ್ಜಿ ಸಲ್ಲಿಸಿ ಮಂಜೂರಾತಿ ಹಂತದಲ್ಲಿರುವ ಸಾಗುವಳಿದಾರರಿಗೂ ಅನ್ವಯಿಸುತ್ತದೆಯೇ ಎಂಬ ಪ್ರಶ್ನೆಗೆ, ಯಾರಾರ‍ಯರಿಗೆ ಅನ್ವಯವಾಗಲಿದೆ, ಹೇಗೆ ಅನ್ವಯವಾಗಲಿದೆ ಎಂಬುದನ್ನು ಕಾಯಿದೆಯಲ್ಲಿ ವಿವರಿಸಲಾಗುವುದು ಎಂದು ಹೇಳಿದರು.

click me!