ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಕಾಂಗ್ರೆಸ್‌

By Kannadaprabha News  |  First Published Dec 30, 2022, 5:16 AM IST

ಭಾರತದ ಸ್ವಾತಂತ್ರ್ಯ ಆಂದೋಲನಕ್ಕೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಏ.ಓ.ಹ್ಯೂಮ್‌ ಅವರಿಂದ 1885ರಲ್ಲಿ ಆರಂಭಗೊಂಡ ಕಾಂಗ್ರೆಸ್‌ ಪಕ್ಷ, ದೇಶದ ಅಭಿವೃದ್ಧಿಯಲ್ಲಿ ಹಲವಾರು ಮೈಲಿಗಲ್ಲುಗಳನ್ನು ದಾಟಿ, ದೇಶಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರಗೌಡ ತಿಳಿಸಿದರು.


 ತುಮಕೂರು : ಭಾರತದ ಸ್ವಾತಂತ್ರ್ಯ ಆಂದೋಲನಕ್ಕೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಏ.ಓ.ಹ್ಯೂಮ್‌ ಅವರಿಂದ 1885ರಲ್ಲಿ ಆರಂಭಗೊಂಡ ಕಾಂಗ್ರೆಸ್‌ ಪಕ್ಷ, ದೇಶದ ಅಭಿವೃದ್ಧಿಯಲ್ಲಿ ಹಲವಾರು ಮೈಲಿಗಲ್ಲುಗಳನ್ನು ದಾಟಿ, ದೇಶಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರಗೌಡ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ನೆಹರು, ಇಂದಿರಾಗಾಂಧಿ, ರಾಜೀವಗಾಂಧಿಯಂತಹ ಮಹಾನ್‌ ನಾಯಕರ ತ್ಯಾಗ, ಬಲಿದಾನಗಳು ಪಕ್ಷಕ್ಕೆ ಬಲ ತುಂಬಿವೆ. ಅವರ ಆದರ್ಶನಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ನಾವೆಲ್ಲರೂ ಮತ್ತಷ್ಟುಬಲಿಷ್ಠವಾಗಿ ಪಕ್ಷವನ್ನು ಕಣ್ಣೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

Tap to resize

Latest Videos

ಮಾಜಿ ಶಾಸಕ ಎಸ್‌.ಷಪಿ ಅಹಮದ್‌ ಮಾತನಾಡಿ, 550ಕ್ಕೂ ಹೆಚ್ಚು ಸಂಸ್ಥಾನಗಳಾಗಿ ಒಡೆದು ಹೋಗಿದ್ದ ದೇಶವನ್ನು ಬ್ರಿಟಿಷರು ವಶಪಡಿಸಿಕೊಂಡು ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿದ್ದ ವೇಳೆ,ದೇಶದ ಪ್ರಾಕೃತಿಕ ಸಂಪತ್ತಿನ ಜೊತೆಗೆ, ಜನತೆಗೆ ರಾಜಕೀಯ, ಸಾಮಾಜಿಕ, ಆರ್ಥಿಕ ಸ್ವಾತಂತ್ರ ತಂದುಕೊಡಬೇಕೆಂಬ ಮಹಾತ್ವಾಕಾಂಕ್ಷೆಯಿಂದ ಹುಟ್ಟಿಕೊಂಡ ಕಾಂಗ್ರೆಸ್‌ ಪಕ್ಷ, ತನ್ನ ಹುಟ್ಟಿನ ಉದ್ದೇಶವನ್ನು ಈಡೇರಿಸಿದಲ್ಲದೆ, ಜನತೆಗೆ ಒಂದು ಭದ್ರ ಆಡಳಿತವನ್ನು ನೀಡಿ, ವಿಶ್ವದಲ್ಲಿಯೇ ಗುರುತಿಸಿಕೊಳ್ಳುವಂತೆ ಮಾಡಿದೆ. ಹಾಗಾಗಿ ನಾವೆಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಒಗ್ಗೂಡಿ, ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಚಮಾರಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ್‌ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ರೆಡ್ಡಿ ಚಿನ್ನಯಲ್ಲಪ್ಪ, ಎಚ್‌.ಸಿ.ಹನುಮಂತಯ್ಯ, ಶಿವಾಜಿ, ಲಿಂಗರಾಜು, ಮರಿಚನ್ನಮ್ಮ, ಅಫ್ತಾಬ್‌ ಅಹಮದ್‌,ಲೋಕೇಶ್‌, ನರಸೀಯಪ್ಪ,ನರಸಿಂಹಯ್ಯ, ಸುಜಾತ ಮತ್ತಿತರರು ಉಪಸ್ಥಿತರಿದ್ದರು

 ಕಾಂಗ್ರೆಸ್ ಬಿಜೆಪಿಗೆ ನಡುಕ

ತುರುವೇಕೆರೆ: ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಪರವಾದ ಸುನಾಮಿ ಎದ್ದಿದೆ. ಹಾಗಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ನಡುಕ ಆರಂಭವಾಗಿದೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಮಂಗಳವಾರ ಪಟ್ಟಣಕ್ಕೆ ಆಗಮಿಸಿದ ಪಂಚರತ್ನ ರಥಯಾತ್ರೆಯ ಕಾರ್ಯಕ್ರಮದ ನಿಮ್ಮಿತ್ತ ಪಟ್ಟಣದ ಉಡುಸಲಮ್ಮ ದೇವಾಲಯದ ಮುಂಭಾಗ ಆಯೋಜಿಸಿದ್ದ (JDS)  ಕಾರ್ಯಕರ್ತರ ಬೃಹತ್‌ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ  (Farmers)  ಪರ ಇರುವ ಏಕೈಕ ಪಕ್ಷವೆಂದರೆ ಎಚ್‌.ಡಿ.ದೇವೇಗೌಡರ ಆಶೀರ್ವಾದವಿರುವ ಜಾತ್ಯತೀತ ಜನತಾದಳ ಮಾತ್ರ. ಕುಮಾರಸ್ವಾಮಿಯವರು ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆ ರಾಜ್ಯಾದ್ಯಂತ ಮನೆ ಮಾತಾಗಿದೆ. ರಾಜ್ಯದ ಅಧಿಕಾರದ ಚುಕ್ಕಾಣಿ ಕುಮಾರಸ್ವಾಮಿಯವರ ಕೈಗೆ ದೊರೆತರೆ ಗ್ರಾಮಾಂತರ ಪ್ರದೇಶದ ಜನರ ಬದುಕು ಉತ್ತಮಗೊಳ್ಳಲಿದೆ. ಈ ಹಿಂದೆ ಆಡಳಿತ ಮಾಡಿದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೆ ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡಿದರು. ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 20 ಸಾವಿರ ರೈತರಿಗೆ ಸಾಲ ಮನ್ನಾ ಯೋಜನೆಯ ಅನುಕೂಲವಾಗಿದೆ. ಈಗ ಸ್ತ್ರೀಶಕ್ತಿ ಸಂಘಗಳ ಸದಸ್ಯರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ. ಅದನ್ನೂ ಅವರು ಈಡೇರಿಸುವರು ಎಂದು ಎಂ.ಟಿ.ಕೃಷ್ಣಪ್ಪ ಹೇಳಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಎಚ್‌.ಡಿ.ಕುಮಾರಸ್ವಾಮಿಯವರಿಗೆ ಬೃಹತ್‌ ಹಾರ ಹಾಕಿ ತಮ್ಮ ಅಭಿಮಾನ ಮೆರೆದರು.

ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಚೌಡರೆಡ್ಡಿ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಆಂಜನಪ್ಪ, ತಾಲೂಕು ಅಧ್ಯಕ್ಷ ಸ್ವಾಮಿ, ಗುಬ್ಬಿ ಜೆಡಿಎಸ್‌ ಅಭ್ಯರ್ಥಿ ನಾಗರಾಜು, ಅಂದಾನಪ್ಪ, ಮುಖಂಡರಾದ ರಾಜ್ಯ ಯುವ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟಚಂದ್ರೇಶ್‌, ತಾಲೂಕು ಯುವ ಜನತಾದಳ ಅಧ್ಯಕ್ಷ ಬಾಣಸಂದ್ರ ರಮೇಶ್‌, ವಕ್ತಾರ ವೆಂಕಟಾಪುರ ಯೋಗೀಶ್‌, ಶಂಕರೇಗೌಡ, ಸಿ.ಎಸ್‌.ಪುರ ಮೂರ್ತಿ, ಸಿಎಸ್‌ ಪುರ ನಂಜೇಗೌಡ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು. 

click me!