ಬಂಗಾರಪೇಟೆ (ಜೂ.09): ಬರುವ ಜಿಪಂ ಹಾಗು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಖಾತೆ ತೆರೆದರೆ ನಾನು ರಾಜಕೀಯ ನಿವೃತ್ತಿ ಹೊಂದುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಚಂದ್ರಾರೆಡ್ಡಿ ಸಂಸದ ಮುನಿಸ್ವಾಮಿಗೆ ಸವಾಲು ಹಾಕಿದ್ದಾರೆ.
ಪಟ್ಟಣದ ಎಸ್ ಎನ್ ರೆಸಾರ್ಟ್‌ನಲ್ಲಿ ಎಸ್ ಎನ್ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸವಿತಾ ಸಮಾಜ ಹಾಗೂ ಟೆಂಪೋ ಚಾಲಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.
ನಾಯಕತ್ವ ಬದಲಾವಣೆ ಚರ್ಚೆ: ಬಿಜೆಪಿ ಶಾಸಕರುಗಳಿಗೆ ಸ್ಪಷ್ಟ ಸಂದೇಶ ಕೊಟ್ಟ ಸಿಎಂ ...
8 ವರ್ಷಗಳಿಂದ ಕ್ಷೇತ್ರದಲ್ಲಿ ಶಾಸಕರಾಗಿರುವ ಎಸ್ ಎನ್ ನಾರಾಯಣಸ್ವಾಮಿ 60 ವರ್ಷಗಳಿಂದ ಆಗದ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿ ತೋರಿಸಿದ್ದಾರೆ ಎಂದರು.
ಕ್ಷೇತ್ರದಲ್ಲಿ ಬಿಜೆಪಿ ಒಂದೂ ಸ್ಥಾನ ಗೆಲ್ಲದು : ಕ್ಷೇತ್ರದಲ್ಲಿ ಬಿಜೆಪಿ ಅಭಿವೃದ್ದಿ ಮಾಡಿ ಜನ ಮನ್ನಣೆ ಗಳಿಸಿದ್ದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಲುತ್ತಿರಲಿಲ್ಲ. ಶಾಸಕರು ಉತ್ತಮ ಆಡಳಿತ ನೀಡಿದ್ದರಿಂದಲೇ 2 ನೇ ಸಲ ಜನ ಆಯ್ಕೆ ಮಾಡಿದ್ದಾರೆ. ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಶಕ್ತಿ ಏನೆಂಬುದು ತೊರಿಸಲಾಗಿದೆ. ಸಂಸದರಿಗೆ ತಾಕತ್ತಿದ್ದರೆ ಜಿಪಂ ತಾಪಂ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಒಂದೇ ಒಂದು ಸ್ಥಾನ ಗೆದ್ದರೂ ನಾನು ರಾಜಕೀಯವಾಗಿ ನಿವೃತ್ತಿ ಹೊಂದುವೆ ಎಂದು ಹೇಳಿದರು.
ಟೀಕೆಗಳಿಗೆ ಅಂಜುವುದಿಲ್ಲ. ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮಾತನಾಡಿ ನಾನು 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಬರೀ ಜನರ ಕಣ್ಣೊರೆಸುವ ಸಲುವಾಗಿ ಬಡವರಿಗೆ ಆಹಾರ ಕಿಟ್‌ಗಳನ್ನು ವಿತರಣೆ ಮಾಡುತ್ತಿಲ್ಲ. ಕೊರೋನಾ ಸಂಕಷ್ಟದಲ್ಲಿ ಅರ್ಹರಿಗೆ ಸ್ಪಂದಿಸಲು ನನ್ನ ಟ್ರಸ್ಟ್‌ನಿಂದ ದಿನಸಿ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರು.