ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ. ಇನಾಮದಾರ್ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ. ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ವಿಧಿವಶರಾಗಿದ್ದಾರೆ.
ಬೆಳಗಾವಿ(ಏ.25): ಬೆಳಗಾವಿಯ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ.ಇನಾಮದಾರ್ ಅವರು ಇಂದು(ಮಂಗಳವಾರ) ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ. ಇನಾಮದಾರ್ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ. ಚಿಕಿತ್ಸೆ ಫಲಕಾರಿಯಾಗದೆ ಡಿ.ಬಿ. ಇನಾಮದಾರ್ ಅವರು ತಡರಾತ್ರಿ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಳೆದೊಂದು ತಿಂಗಳಿಂದ ಡಿ.ಬಿ. ಇನಾಮದಾರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಅಂತ ತಿಳಿದು ಬಂದಿದೆ. ಇನಾಮದಾರ್ ನಿಧನದಿಂದ ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬೆಳಗಾವಿ ಕಾಂಗ್ರೆಸ್‌ಗೆ ಆಘಾತವಾಗಿದೆ.
ಮೈಸೂರು: ಹುಣಸೂರು ಬಿಜೆಪಿ ಅಭ್ಯರ್ಥಿ ದೇವರಳ್ಳಿ ಸೋಮಶೇಖರ್‌ಗೆ ಪಿತೃ ವಿಯೋಗ
ಡಿ.ಬಿ.ಇನಾಮದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಸಲ ಗೆಲುವು ಕಮಡಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿ ಇಂದಿನವರೆಗೂ ಇನಾಮದಾರ್ ಅವರು ಕಾಂಗ್ರೆಸ್‌ನಲ್ಲಿದ್ದರು. ಒಟ್ಟು 9 ಚುನಾವಣೆಗಳನ್ನ ಎದುರಿಸಿ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸ, ಎಸ್.ಎಂ ಕೃಷ್ಣಾ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.
2023 ರ ಚುನಾವಣೆಯಲ್ಲಿ ಕಿತ್ತೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಿ.ಬಿ ಇನಾಮದಾರ್ ಅವರಿಗೆ ಅನಾರೋಗ್ಯ ಕಾರಣಕ್ಕೆ ಇನಾಮದಾರ್ ಬದಲು ಬಾಬಾಸಾಹೇಬ್ ಪಾಟೀಲಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.