'ಸಚಿವರನ್ನಾಗಿ ಮಾಡೋ ಬದ್ಲು ಎಲ್ಲರನ್ನೂ ಉಪಮುಖ್ಯಮಂತ್ರಿ ಮಾಡಲಿ'

By Suvarna News  |  First Published Dec 15, 2019, 11:37 AM IST

ಪ್ರತಿಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ| ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಿನ್ನಡೆ ಅನುಭವಿಸಿದ್ದಕ್ಕೆ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ| ಇದು ಒಳ್ಳೆಯ ಬೆಳವಣಿಗೆ. ಆದರೆ, ಹೈಕಮಾಂಡ್‌ ಈ ರಾಜೀನಾಮೆಗಳನ್ನು ಅಂಗೀಕರಿಸಿಲ್ಲ| ಬಹುಶಃ ಅಂಗೀಕರಿಸುವುದಿಲ್ಲ ಎಂದ ಎಂ ಬಿ ಪಾಟೀಲ್|


ವಿಜಯಪುರ(ಡಿ.15): ವಿಧಾನಸಭೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ನೀಡಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಹಾಗಾಗಿ ಸದ್ಯಕ್ಕೆ ಈ ಎರಡೂ ಹುದ್ದೆಗಳು ಖಾಲಿ ಇಲ್ಲ. ಈ ಹಂತದಲ್ಲಿ ಈ ಹುದ್ದೆಗಳಿಗೆ ತಮ್ಮ ಹೆಸರು ಕೇಳಿ ಬರುತ್ತಿದೆ ಎಂಬುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

Latest Videos

undefined

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಿನ್ನಡೆ ಅನುಭವಿಸಿದ್ದಕ್ಕೆ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಆದರೆ, ಹೈಕಮಾಂಡ್‌ ಈ ರಾಜೀನಾಮೆಗಳನ್ನು ಅಂಗೀಕರಿಸಿಲ್ಲ, ಬಹುಶಃ ಅಂಗೀಕರಿಸುವುದಿಲ್ಲ ಎಂದರು.

ಎಲ್ಲರನ್ನು ಡಿಸಿಎಂ ಮಾಡಲಿ:

ಬಿಜೆಪಿ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಸ್ಥಾನದ ಕುರಿತು ವ್ಯಂಗ್ಯವಾಡಿದ ಎಂ.ಬಿ.ಪಾಟೀಲ್‌, ಉಪ ಮುಖ್ಯಮಂತ್ರಿ ಹುದ್ದೆ ಸಾಂವಿಧಾನಿಕವೋ? ಅಸಾಂವಿಧಾನಿಕವೋ? ಎಂಬ ವಿಚಾರ ಇನ್ನೂ ಚರ್ಚೆಯಲ್ಲಿದೆ. ಬಿಜೆಪಿ ದಿನೇ ದಿನೆ ಡಿಸಿಎಂಗಳ ಸಂಖ್ಯೆಯನ್ನು ಹೆಚ್ಚಿಸುವ ಬದಲು ಎಲ್ಲರನ್ನೂ ಡಿಸಿಎಂ ಮಾಡಲಿ ಎಂದು ವ್ಯಂಗ್ಯವಾಡಿದರು.
 

click me!