ಕಾಂಗ್ರೆಸ್‌ ಮುಖಂಡನ ಮನೆ, ಬೈಕ್‌ಗೆ ಕಿಡಿಗೇಡಿಗಳಿಂದ ಬೆಂಕಿ

Kannadaprabha News   | Asianet News
Published : Jan 14, 2020, 07:59 AM ISTUpdated : Jan 14, 2020, 08:02 AM IST
ಕಾಂಗ್ರೆಸ್‌ ಮುಖಂಡನ ಮನೆ, ಬೈಕ್‌ಗೆ ಕಿಡಿಗೇಡಿಗಳಿಂದ ಬೆಂಕಿ

ಸಾರಾಂಶ

ಕಾಂಗ್ರೆಸ್ ಮುಖಂಡರೋರ್ವರ ಮನೆ ಹಾಗೂ ಬೈಕಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಈ ವೇಳೆ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. 

ಬೆಂಗಳೂರು [ನ.14]:  ದಾಸರಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷ ನರಸಿಂಹಮೂರ್ತಿ ಎಂಬುವರ ಮನೆ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಸೋಮವಾರ ನಸುಕಿನಲ್ಲಿ ಬೆಂಕಿ ಹಚ್ಚಿದ್ದಾರೆ.

ಬಾಗಲಗುಂಟೆಯಲ್ಲಿ ಸೋಮವಾರ ನಸುಕಿನಲ್ಲಿ ಘಟನೆ ನಡೆದಿದ್ದು, ಸ್ಕೂಟರ್‌ ಜೊತೆಗೆ ಮನೆಯ ಕಿಟಕಿ ಸೇರಿದಂತೆ ಇನ್ನಿತರ ವಸ್ತುಗಳು ಹಾನಿಯಾಗಿವೆ.

ಸ್ಕೂಟರ್‌ಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು, ನರಸಿಂಹಮೂರ್ತಿ ಮತ್ತು ಅವರ ಪುತ್ರಿಯನ್ನು ಉದ್ದೇಶಿಸಿ ಬೆದರಿಕೆ ಪತ್ರ ಬರೆದಿಟ್ಟು ಹೋಗಿದ್ದಾರೆ. ವಾಹನಗಳಿಗೆ ಬೆಂಕಿ ಹಚ್ಚಿರುವುದು ಎಚ್ಚರಿಕೆಯಾಗಿದ್ದು, ಮುಂದೆ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಪರೀಕ್ಷೆಯಲ್ಲಿ ಫೇಲ್‌: 300 ವಿದ್ಯಾರ್ಥಿಗಳ ಅಂಕಪಟ್ಟಿ ಕದಿಯಲು ಮುಂದಾದ ಭೂಪ!...

ಘಟನಾ ಸ್ಥಳಕ್ಕೆ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಹಚ್ಚಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

PREV
click me!

Recommended Stories

Karnataka News Live: ಮುಂದುವರಿದ ಸಿಎಂ ಕುರ್ಚಿ ಕದನ ಜನವರಿ 6ಕ್ಕೆ ಡಿಕೆಶಿ ಸಿಎಂ: ಮತ್ತೆ ಆಪ್ತ ಶಾಸಕರ ಬಾಂಬ್
ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!