ದೇಶಪಾಂಡೆಗೆ ಜ್ವರ, ನೆಗಡಿ, ಕೆಮ್ಮು ಇತರ ಯಾವುದೇ ರೋಗ ಲಕ್ಷಣಗಳಿಲ್ಲ| ಹಳಿಯಾಳದ ರುಡ್‌ಸೆಟಿ ಉದ್ಯೋಗಿಯೊಬ್ಬರಿಗೆ ಸೋಂಕು ಬಂದ ಹಿನ್ನೆಲೆಯಲ್ಲಿ ದೇಶಪಾಂಡೆಗೆ ಕೋವಿಡ್ ಟೆಸ್ಟ್| ಬೆಂಗಳೂರಿನ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿರುವ ದೇಶಪಾಂಡೆ|
ಕಾರವಾರ(ಏ.24): ಮಾಜಿ ಸಚಿವ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಕೊರೋನಾ ಸೋಂಕಿಗೆ ಒಳಗಾಗಿದ್ದು, ಬೆಂಗಳೂರಿನ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶಪಾಂಡೆ ಅವರಿಗೆ ಸಿಟಿ ಸ್ಕ್ಯಾನ್ ಸೇರಿದಂತೆ ಎಲ್ಲ ಅಗತ್ಯ ಪರೀಕ್ಷೆಗಳನ್ನೂ ನಡೆಸಲಾಗಿದೆ. ಅವರು ಆರೋಗ್ಯದಿಂದ ಇದ್ದಾರೆ. ದೇಶಪಾಂಡೆ ಅವರಿಗೆ ಜ್ವರ, ನೆಗಡಿ, ಕೆಮ್ಮು ಇತರ ಯಾವುದೇ ರೋಗ ಲಕ್ಷಣಗಳಿಲ್ಲ ಎಂದು ಅವರ ಹಳಿಯಾಳದ ಆಪ್ತ ಸಹಾಯಕರು ತಿಳಿಸಿದ್ದಾರೆ.
undefined
ಕಾರವಾರದಲ್ಲಿ ವಿವಾಹಕ್ಕೆ ಬಂದವರು ಹೊರಕ್ಕೆ, ಮಂಡ್ಯದಲ್ಲಿ 15 ಸಾವಿರ ದಂಡ
ಹಳಿಯಾಳದ ರುಡ್‌ಸೆಟಿ ಉದ್ಯೋಗಿಯೊಬ್ಬರಿಗೆ ಕೊರೋನಾ ಸೋಂಕು ಬಂದ ಹಿನ್ನೆಲೆಯಲ್ಲಿ ದೇಶಪಾಂಡೆ ಶುಕ್ರವಾರ ಕೊರೋನಾ ಪರೀಕ್ಷೆ ಮಾಡಿಸಿದ್ದಾರೆ. ದೇಶಪಾಂಡೆ ಅವರಿಗೆ ಈಗಾಗಲೇ ಎರಡು ಡೋಸ್ ಲಸಿಕೆ ನೀಡಲಾಗಿದೆ. ಜತೆಗೆ ಬೆಳಗಾವಿ ಲೋಕಸಭೆ ಚುನಾವಣೆಯಲ್ಲೂ 10 ದಿನಗಳ ಕಾಲ ನಿರಂತರವಾಗಿ ಪ್ರಚಾರ ಮಾಡಿದ್ದರು. ಅಲ್ಲಿ ಪ್ರಚಾರಕ್ಕೆ ತೆರಳಿದ ಹಲವರಿಗೆ ಕೊರೋನಾ ಪಾಸಿಟಿವ್ ಬಂದಿದೆ.