ಲಸಿಕೆ, ಆಕ್ಸಿಜನ್‌ನಲ್ಲಿ ತಾರತಮ್ಯ: ಕೇಂದ್ರದ ವಿರುದ್ಧ ಹರಿಹಾಯ್ದ ಜಾರಕಿಹೊಳಿ

By Kannadaprabha News  |  First Published May 9, 2021, 2:02 PM IST

* ರಾಜ್ಯದ ಆಸ್ಪತ್ರೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್‌ ಪೂರೈಕೆಯಾಗುತ್ತಿಲ್ಲ
* ಸಮಸ್ಯೆ ಬಗ್ಗೆ 25 ಬಿಜೆಪಿ ಸಂಸದರು ಕೇಂದ್ರದಲ್ಲಿ ಧ್ವನಿ ಎತ್ತಬೇಕಿದೆ
* ಆಕ್ಸಿಜನ್‌, ಲಸಿಕೆ ಪೂರೈಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡುತ್ತಿರುವ ತಾರತಮ್ಯ ಸರಿಯಲ್ಲ ಜಾರಕಿಹೊಳಿ 
 


ಬೆಳಗಾವಿ(ಮೇ.09): ಕೋವಿಡ್‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜನತಾ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಿರುವುದು ಒಳ್ಳೆಯ ನಿರ್ಧಾರ. ಆದರೆ, ಆಕ್ಸಿಜನ್‌, ಲಸಿಕೆ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ತಾರತಮ್ಯ ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಶನಿವಾರ ಗೋಕಾಕನಲ್ಲಿ ಸುದ್ದಿಗಾರರಗೊಂದಿಗೆ ಮಾತನಾಡಿ, ರಾಜ್ಯದಲ್ಲಿ ಆಕ್ಸಿಜನ್‌ ಕೊರತೆ ತುಂಬಾ ಇದೆ. ಆಸ್ಪತ್ರೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್‌ ಪೂರೈಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರಿಗೆ ಸಮಸ್ಯೆ ಆಗಿದೆ ಎಂದು ತಿಳಿಸಿದ್ದಾರೆ.

Latest Videos

undefined

"

ಬೆಳಗಾವಿ: ಕೊರೋನಾ ಕಾಟಕ್ಕೆ ಆಸ್ಪತ್ರೆ ಎದುರು ಬಾಣಂತಿ ನರಳಾಟ

ಆಸ್ಪತ್ರೆಗಳಲ್ಲಿ ಕೇವಲ 50 ರಷ್ಟು ಆಕ್ಸಿಜನ್‌ ಇದೆ. ಹೆಚ್ಚಿನ ಆಕ್ಸಿಜನ್‌ ಪೂರೈಸುವ ಉದ್ದೇಶದಿಂದ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ರಾಜ್ಯದಲ್ಲಿನ ಸಮಸ್ಯೆ ಬಗ್ಗೆ 25 ಸಂಸದರು ಕೇಂದ್ರದಲ್ಲಿ ಧ್ವನಿ ಎತ್ತಬೇಕಿದೆ. ಇವರ ಸಮಸ್ಯೆ ನೀಗಿಸಲು ಇಲ್ಲಿನ ಸಂಸದರು ಹೋರಾಟ ಮಾಡಬೇಕು ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!