* ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೈಲೆಂಟ್ ಆಗಿಲ್ಲ
* ಕಾಂಗ್ರೆಸ್ ಜೊತೆ ಮೈತ್ರಿಗೆ ಒಲವು ತೋರಿದ ಜೆಡಿಎಸ್ ಮುಖಂಡರು
* ವಾಮ ಮಾರ್ಗದ ಮೂಲಕ ಅಧಿಕಾರ ಪಡೆಯಲು ಹವಣಿಸುತ್ತಿರುವ ಬಿಜೆಪಿ
ಕಲಬುರಗಿ(ಸೆ.12): ಪಾಲಿಕೆಯಲ್ಲಿ ಅಧಿಕಾರ ಹಿಡಿಯೋದು ಬಿಜೆಪಿ ತಿರುಕನ ಕನಸು ಕಾಣುತ್ತಿದೆ ಅಂತ ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರಗಿ ಪಾಲಿಕೆ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೈಲೆಂಟ್ ಆಗಿಲ್ಲ. ಜೆಡಿಎಸ್ ಜೊತೆ ಮೈತ್ರಿ ಸಂಬಂಧ ಎಚ್‌ಡಿಕೆ ಜೊತೆ ಡಿಕೆಶಿ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್ ಸದಸ್ಯರಿಗೆ ಆಮಿಷ, ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್‌ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೊತೆ ಮಾತನಾಡಿದ್ದಾರೆ. ಸ್ಥಳೀಯ ಜೆಡಿಎಸ್ ಮುಖಂಡರೂ ಸಹ ಕಾಂಗ್ರೆಸ್ ಜೊತೆ ಮೈತ್ರಿಗೆ ಒಲವು ತೋರಿದ್ದಾರೆ. ಏನೇ ಗೊಂದಲಗಳಿದ್ದರೂ ಸಹ ಜೆಡಿಎಸ್ ಕಾಂಗ್ರೆಸ್ ಮೈತ್ರಿಯಾಗೋದು 100 ಕ್ಕೆ ನೂರರಷ್ಟು ಖಚಿತ ಎಂದು ಹೇಳಿದ್ದಾರೆ. ಬಿಜೆಪಿ ವಾಮ ಮಾರ್ಗದ ಮೂಲಕ ಅಧಿಕಾರ ಪಡೆಯಲು ಹವಣಿಸುತ್ತಿದೆ. ಆದ್ರೆ ಬಿಜೆಪಿಯವರ ಕನಸು ತಿರುಕನ ಕನಸಾಗಿದೆ ಅಂತ ಲೇವಡಿ ಮಾಡಿದ್ದಾರೆ.