ಕಾನೂನು ಪದವಿ ಸೆಮಿಸ್ಟರ್‌ ಪರೀಕ್ಷೆ ಕೈಬಿಡಿ : ಸಿದ್ದರಾಮಯ್ಯ

By Kannadaprabha NewsFirst Published Aug 24, 2020, 9:29 AM IST
Highlights

ಕಾನೂನು ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪದ್ಧತಿಯನ್ನು ಕೈ ಬಿಡಬೇಕು ಎಂದು ಮಾ ಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಬೆಂಗಳೂರು (ಆ.24): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋರೋನಾ ಸೋಂಕು ಉಲ್ಬಣಿಸುತ್ತಿರುವುದರಿಂದ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪ್ರತಿಷ್ಠೆಗೆ ಅಂಟಿಕೊಳ್ಳದೆ ಸೆಮಿಸ್ಟರ್‌ ಪರೀಕ್ಷೆ ಕೈ ಬಿಡಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕೊರೋನಾ ಸೋಂಕಿನಿಂದಾಗಿ ಬೋಧನಾ ತರಗತಿಗಳು ನಡೆಯದೆ ಅರ್ಧದಷ್ಟೂಪಠ್ಯಕ್ರಮ ಪೂರ್ಣಗೊಂಡಿಲ್ಲ. ಹೀಗಿರುವಾಗ ಸೆಮಿಸ್ಟರ್‌ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ರಾಜ್ಯ ಕಾನೂನು ವಿಶ್ವವಿದ್ಯಾಲಯ ಕೈ ಬಿಟ್ಟು ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಹೇಳಿದ್ದಾರೆ.

 ಸ್ಥಳೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಯ ನಿರ್ಧಾರ ಕೈಗೊಳ್ಳುವಂತೆ ಯುಜಿಸಿ ತಿಳಿಸಿದೆ. ಕೊರೋನಾ ಸೋಂಕಿನಿಂದಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸುವುದು ಸೂಕ್ತವಲ್ಲ. ಹೀಗಾಗಿ ಕಾನೂನು ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆಗೆ ಹಾಜರಾಗಲು ವಿಶ್ವವಿದ್ಯಾಲಯ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

"

click me!